ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅನುಷ್ಠಾನ ಅಧಿಕಾರಿಗಳ ಪಾತ್ರ ಮಹತ್ವದ್ದು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್.

by | 14/12/23 | ಶಿಕ್ಷಣ


ಚಳ್ಳಕೆರೆ: ಶಿಕ್ಷಣ ಇಲಾಖೆಯಲ್ಲಿ ಅನುಷ್ಠಾನ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಸರ್ಕಾರದ ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಸಂದರ್ಭಗಳಿಗೆ ಅನುಸಾರ ಜಾರಿಗೊಳಿಸಿ ಅದರ ಫಲವನ್ನು ಕಲಿಕೆಯ ರೂಪದಲ್ಲಿ ವಿದ್ಯಾರ್ಥಿಗಳಿಗೆ ಸಿಗುವಂತೆ ಮಾಡುವ ಹೊಣೆಗಾರಿಕೆ ಅನುಷ್ಠಾನ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಅಭಿಪ್ರಾಯ ಪಟ್ಟರು.


ನಗರದ ಆದರ್ಶ ವಿದ್ಯಾಲಯದ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ವಿವಿಧ ಶೈಕ್ಷಣಿಕ ಸಮೀಕ್ಷೆಗಳ ಅನುಷ್ಠಾನ ಮತ್ತು ಅನು ಪಾಲನೆ ಕುರಿತು ಜಿಲ್ಲೆಯ ಬಿ ಆರ್ ಸಿ ಬಿ ಆರ್ ಪಿ ಮತ್ತು ಸಿ ಆರ್ ಪಿ ಗಳಿಗೆ ಪುನಶ್ಚೇತನ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಅನುಷ್ಠಾನ ಅಧಿಕಾರಿಗಳ ಕಾರ್ಯವೈಖರಿ ತಾಂತ್ರಿಕತೆ ಬಳಸದೆ ವಿಶಿಷ್ಟ ಹಾಗೂ ವಿನೂತನ ರೀತಿಯಲ್ಲಿ ಕೂಡಿದ್ದರೆ ಯಶಸ್ಸಿಗೆ ಕಾರಣವಾಗುತ್ತದೆ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು ಅಧಿಕಾರಿಗಳು ಹಾಗೂ ಶಿಕ್ಷಕರು ಬೋಧನೆ ಹಾಗೂ ಇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ಗೆಲ್ಲಬೇಕಿದೆ ಚಿತ್ರದುರ್ಗ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಇದರ ಶ್ರೇಯವನ್ನು ವಿದ್ಯಾರ್ಥಿಗಳಿಗೆ ಕಲಿಸಿದ ಒಂದರಿಂದ ಹತ್ತನೇ ತರಗತಿಯ ಎಲ್ಲಾ ಶಿಕ್ಷಕರಿಗೆ ಸಲ್ಲುತ್ತದೆ ಶಿಕ್ಷಣ ಇಲಾಖೆಯಲ್ಲಿ ಫಲ ನಿರೀಕ್ಷಿಸಬೇಕಾದರೆ ತಾಳ್ಮೆ ಅತ್ಯಗತ್ಯವಾಗಿರುತ್ತದೆ ಒಬ್ಬ ವಿದ್ಯಾರ್ಥಿಯು ಉತ್ತಮ ಶಿಕ್ಷಣ ಪಡೆದು ವ್ಯಕ್ತಿತ್ವ ಮತ್ತು ಉದ್ಯೋಗ ಪಡೆದಾಗ ಮಾತ್ರ ಅದರ ಫಲವನ್ನು ಕಾಣಲು ಸಾಧ್ಯವಾಗುತ್ತದೆ ಎಂದರು.

ನಲಿ ಕಲಿ ಯೋಜನೆಯ ಗೊಂದಲಗಳನ್ನು ನಿವಾರಿಸಿ ಸಿಆರ್‌ಪಿ ಬಿ ಆರ್ ಸಿ ಅಧಿಕಾರಿಗಳು ನಲಿ ಕಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದೆ ಆದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆದು ಉತ್ತಮ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಈ ನಿಟ್ಟಿನಲ್ಲಿ ನಲಿಕಲಿ ಬೋಧನೆ ಶಿಕ್ಷಕರು ನಿರ್ಲಕ್ಷ ತೋರದೆ ಯೋಜನೆಯ ಅಂಶಗಳನ್ನು ತಿಳಿದುಕೊಂಡು ಬೋಧಿಸಿದಾಗ ಬಾಲ್ಯದಲ್ಲಿ ವಿದ್ಯಾರ್ಥಿಗೆ ನಲಿ ಕಲಿ ಯೋಜನೆಯ ಮೂಲಕ ಉತ್ತಮ ಶಿಕ್ಷಣದ ಬುನಾದಿ ರೂಪಿಸಿದರೆ ವಿದ್ಯಾರ್ಥಿಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಇದೆ ವೇಳೆ ಸಲಹೆ ನೀಡಿದರು.


ಪ್ರಾಸ್ತಾವಿಕವಾಗಿ ಮಾತನಾಡಿದ ನೋಡಲ್ ಅಧಿಕಾರಿ ಪ್ರಶಾಂತ್ ಕುಮಾರ್ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಂಡಾಗ ಅದರಿಂದ ಬಂದಂತಹ ಫಲಿತಾಂಶದ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಬೇಕು ಆ ಫಲಿತಾಂಶದ ನಂತರ ನಾವು ಕೈಗೊಳ್ಳಬೇಕಾದ ಕ್ರಮಗಳು ಏನು ಎಂಬುದರ ಬಗ್ಗೆ ಸೂಕ್ತ ಅಧ್ಯಯನ ನಡೆಸಬೇಕು ಇದರಿಂದಾಗಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಗುರುತಿಸಲು ಸಾಧ್ಯವಾಗುತ್ತದೆ ಈ ಕ್ರಮವನ್ನು ಅನುಸರಿಸುವುದರಿಂದ ಮುಂದಿನ ಶೈಕ್ಷಣಿಕ ವರ್ಷಕ್ಕೆ ಯಾವ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಯಾವ ರೀತಿಯ ಪರಿಣಾಮಕಾರಿ ಬೋಧನೆಯನ್ನು ಭೋದಿಸಬೇಕು ಎಂಬುದರ ಬಗ್ಗೆ ಜ್ಞಾನ ಮೂಡುತ್ತದೆ ಈ ನಿಟ್ಟಿನಲ್ಲಿ ಈ ಕಾರ್ಯಗಾರವನ್ನ ಬಿ ಆರ್ ಪಿ ಸಿ ಆರ್ ಪಿ ಹಾಗೂ ಬಿ ಆರ್ ಸಿ ಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಡಯಟ್ ಅಧಿಕಾರಿಯ ಅಶ್ವಥನಾರಾಯಣ ಬಸವರಾಜು ತಿಪ್ಪೇಸ್ವಾಮಿ ಆದರ್ಶ ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ರೆಡ್ಡಿ ತಿಪ್ಪೇಸ್ವಾಮಿ ಸೇರಿದಂತೆ ಬಿ ಆರ್ ಸಿ ಸಿ ಆರ್ ಪಿ ಬಿ ಆರ್ ಪಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ

ಚಳ್ಳಕೆರೆ ಕರ್ನಾಟಕ ಮಾಧ್ಯಮ ಮಹಾಕೂಟ ಜಿಲ್ಲಾ ಅಧ್ಯಕ್ಷರಾಗಿ ಕರುನಾಡು ಜಿಯಾ ಉಲ್ಲಾ ಆಯ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ...

ಜೂ.21 ರ ಶುಕ್ರವಾರ ಬೆಳಗ್ಗೆ 10- 30 ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ತಾಪಂ ಇಒ ಶಶಿಧರ್

ಚಳ್ಳಕೆರೆ ಜೂ.19ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜೂ21 ರ ಶುಕ್ರವಾರ ಬೆಳಗ್ಗೆ 10-30 ಕ್ಕೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ...

ಗೋವಿಂದಕಾರಜೋಳರನ್ನು ಕೇಂದ್ರಸಚಿವರಾಗಿ ಮಾಡಬೇಕೆಂದು ಹೆಗ್ಗೆರೆ ಮಂಜುನಾಥ್ ಒತ್ತಾಯ

ಹಿರಿಯೂರು: ರಾಜ್ಯದಲ್ಲಿ ಅತಿ ಹೆಚ್ಚು ಎಡಗೈ ಸಮುದಾಯದವರಿದ್ದು, ಈ ಬಾರಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗೆಯೇ ಚಿತ್ರದುರ್ಗ ಲೋಕಸಭಾ...

ಮಹನೀಯರ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ- ಬಿ.ಟಿ. ಕುಮಾರಸ್ವಾಮಿ

ಚಿತ್ರದುರ್ಗ ಜೂನ್19: ಇದೇ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ...

ಯೋಗ ನಡಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ

ಚಿತ್ರದುರ್ಗ ಜೂನ್18: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page