ಶಿಕ್ಷಣ ಮುಗಿಸಿದ ಎಲ್ಲರಿಗೂ ಸರ್ಕಾರ ಕೆಲಸ ನೀಡಲು ಸಾದ್ಯವಾಗುವುದಿಲ್ಲ. ಯುವಸಮೂಹ ಇದನ್ನು ಅರಿತು ವಿವಿಧ ಕೌಶಲ್ಯ ತರಬೇತಿ ಪಡೆದು ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳಬೇಕು. ಎಂದು ಪ್ರಾಚಾರ್ಯ ಮಂಜಯನಾಥ್

by | 13/05/24 | ಶಿಕ್ಷಣ


ಚಳ್ಳಕೆರೆ ಮೇ.13 ಶಿಕ್ಷಣ ಮುಗಿಸಿದ ಎಲ್ಲರಿಗೂ ಸರ್ಕಾರ ಕೆಲಸ ನೀಡಲು ಸಾದ್ಯವಾಗುವುದಿಲ್ಲ. ಯುವಸಮೂಹ ಇದನ್ನು ಅರಿತು ವಿವಿಧ ಕೌಶಲ್ಯ ತರಬೇತಿ ಪಡೆದು ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳಬೇಕು. ಎಂದು ಪ್ರಾಚಾರ್ಯ ಮಂಜಯನಾಥ್ ಕಿವಿ ಮಾತು ಹೇಳಿದರು. ನಗರದ ಕಾಲೇಜಿನ ಆವರಣದಲ್ಲಿ ಅಂತಿಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಡಿಜಿಟಲ್ ಮಾರ್ಕೆಟಿಂಗ್ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪದವಿ ಹಂತದಲ್ಲಿಪಠ್ಯಗಳ ಜತೆಜತೆಯಲ್ಲಿ ಉತ್ತಮ ಕೌಶಲ್ಯಗಳನ್ನು ತರಬೇತಿ ಪಡೆಯವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತಾಗಬೇಕು
ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗ ಪಡೆಯುವಂತಾಗಲಿ ಎಂಬ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಡಿಜಿಟಲ್ ಕೌಶಲ್ಯ ಕರ್ನಾಟಕದ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆ ಕೌಶಲ್ಯ ಎಂಬ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ .

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಪದವಿ ಮುಗಿಸಿದ ಮೇಲೆ ಸರ್ಕಾರಿ ಕೆಲಸ ದೊರೆಯುತ್ತದೆ ಎಂಬ ಆಶಾವಾದದೊಂದಿಗೆ ಕಾಲಹರಣ ಮಾಡುತ್ತಿದ್ದಾರೆ ಇದರಿಂದಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗದೆ ನಿರುದ್ಯೋಗಿಗಳಾಗಿ ಮಾರ್ಪಾಡಾಗುತ್ತಿದ್ದಾರೆ ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ ಇದನ್ನು ಮನಗಂಡ ಸರ್ಕಾರ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ವಿವಿಧ ರೀತಿಯ ಕೌಶಲ್ಯಗಳನ್ನು ಕಲಿಸಿದರೆ ಮುಂದಿನ ದಿನಗಳಲ್ಲಿ ಸ್ವಯಂ ಉದ್ಯೋಗವನ್ನು ಮಾಡಲು ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ಗುಲ್ಬರ್ಗ ವಿಶ್ವವಿದ್ಯಾನಿಲಯಗಳಲ್ಲಿ ಮೊಟ್ಟ ಮೊದಲ ಬಾರಿಗೆ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದೆ ಈ ಕಾರ್ಯಕ್ರಮದ ಅಡಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುವುದಲ್ಲದೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಗುತ್ತದೆ ಹಾಗೆಯೇ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯವನ್ನು ಅಳೆದು ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ ಇದರಿಂದ ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ಉದ್ಯೋಗ ಅರಸಿ ಹೊರಟಾಗ ಈ ಪ್ರಮಾಣ ಪತ್ರಗಳು ಸರ್ಕಾರದಿಂದ ನೀಡುವುದರಿಂದ ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಸಹಕಾರಿಯಾಗುತ್ತದೆ ಇದರ ಸದುಪಯೋಗವನ್ನು ಎಲ್ಲಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಪಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಸಂಪನ್ಮೂಲ ವ್ಯಕ್ತಿ ನವೀನ್ ಮಾತನಾಡಿ ಕೇವಲ ಪದವಿ ಶಿಕ್ಷಣ ಪಡೆದರೆ ಕೆಲಸ ದೊರೆಯುತ್ತದೆ ಎಂಬ ಮನೋಭಾವದಿಂದ ವಿದ್ಯಾರ್ಥಿಗಳು ಹೊರಬರಬೇಕು ತಮಗೆ ಸರ್ಕಾರದ ವತಿಯಿಂದಲೇ ಕೌಶಲ್ಯಗಳನ್ನು ಕಲಿಸಲು ತೀರ್ಮಾನಿಸಲಾಗಿದೆ ಅದಕ್ಕಾಗಿ ವಿಶ್ವವಿದ್ಯಾನಿಲಯದಲ್ಲಿ ವಿಷಯವಾರು ಪಠ್ಯಗಳನ್ನು ಸಿದ್ಧಪಡಿಸಿದ್ದು ನಮ್ಮ ಕರ್ನಾಟಕ ಕೌಶಲ್ಯ ಅಭಿವೃದ್ಧಿ ವತಿಯಿಂದ ಉತ್ತಮ ಬೋಧನೆ ಹಾಗೂ ಕಲಿಕೆಗೆ ಪೂರಕವಾದ ಸಾಮಗ್ರಿಗಳನ್ನು ಒದಗಿಸಿ ತರಬೇತಿ ನೀಡಲಾಗುವುದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದು ಹೆಚ್ಚು ಅನುಕೂಲವಾಗಲಿದ್ದು ವಿದ್ಯಾರ್ಥಿಗಳು ಬೇಜವಾಬ್ದಾರಿತನ ತೋರದೆ ಆಸಕ್ತಿಯಿಂದ ಕಲಿತಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು. 


ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಚನ್ನಕೇಶವ ನವೀನ್ ತಿಪ್ಪೇಸ್ವಾಮಿ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page