ಶಿವಮೊಗ್ಗ ಆ14 ಶಿಮುಲ್ ಆಡಳಿತ ಮಂಡಳಿ (ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ) 14 ನಿರ್ದೇಶಕ ಸ್ಥಾನಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಹಳೇ ಮುಖಗಳ ಜತೆ ಹೊಸಮುಖಗಳು ಸಹ ಈ ಬಾರಿ ಗೆಲುವು ಸಾಧಿಸಿದ್ದಾರೆ.ಶಿವಮೊಗ್ಗ ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಎಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಅವರದ್ದೆ ಸಿಂಡಿಕೇಟ್‌ನಲ್ಲಿದ್ದ ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.
ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಎಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.
0 Comments