ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲಿಸರು..

by | 15/12/23 | ಕ್ರೈಂ

ಶಿವಮೊಗ್ಗ..


ಅಡಿಕೆ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದ ರಿಪ್ಪನ್‌ಪೇಟೆ ಪೊಲೀಸರು

| ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ರವರನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27 ರಂದು ಮಲೆನಾಡಿಗರಿಗೆ ತಲೆ ನೋವಾಗಿದ್ದ ಬೃಹತ್ ಕಳ್ಳರ ಜಾಲವೊಂದನ್ನು ಪತ್ತೆ ಹಚ್ಚಿ ಇಬ್ಬರನ್ನು ಬಂದಿಸಿದ್ದರು.ಆದರೆ ಪ್ರಕರಣದಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದರು.

ಪರಾರಿಯಾಗಿದ್ದ ಕಳ್ಳರ ಪತ್ತೆಗೆ ಜಾಲ ಬೀಸಿದ್ದ ಪೊಲೀಸರು ಗುರುವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಮೂರನೇ ಆರೋಪಿ ಪ್ರತಾಪ್ ನನ್ನು ಹಾಗೂ ಎರಡನೇ ಮತ್ತು ನಾಲ್ಕನೇ ಆರೋಪಿಗಳಾದ ಪ್ರವೀಣ್ ಶಿವಪುರ ಹಾಗೂ ನಾಗಭೂಷಣ ನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಿ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಅಡಿಕೆ ಹಾಗೂ 50 ಸಾವಿರಕ್ಕೂ ಹೆಚ್ಚು ಮೌಲ್ಯದ ರಬ್ಬರ್ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಅಮಾನತ್ತು ಪಡಿಸಿಕೊಳ್ಳಲಾಗಿತ್ತು.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಉಮೇಶ್ , ಸಂತೋಷ್ ಕೊರವರ ಮತ್ತು ಮಧುಸೂಧನ್ ಪಾಲ್ಗೊಂಡಿದ್ದರು.

ಕಳ್ಳ ಕಾಕರ ವಿರುದ್ದ ಖಡಕ್ ಸಮರ ಸಾರಿರೋ ಪಿಎಸ್‌ಐ ಪ್ರವೀಣ್ ಯಾರೊಬ್ಬರಿಗೂ ಸೊಪ್ಪು ಹಾಕುತ್ತಿಲ್ಲ. ಅದ್ಯಾರೇ ಭ್ರಷ್ಟರ ಪರ ವಕಾಲತ್ತು ವಹಿಸಿದ್ರೂ ಯಾರಂದ್ರೆ ಯಾರಿಗೂ ಕ್ಯಾರೇ ಅಂತಿಲ್ಲ. ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ದಂಧೆ,ಕಳ್ಳತನ ,ಭ್ರಷ್ಟಾಚಾರ ಗಳ ಹಾವಳಿ ನಿಯಂತ್ರಣಕ್ಕೆ ತೊಡೆ ತಟ್ಟಿ ನಿಂತಿದ್ದಾರೆ.ಪಟ್ಟಣದ ಪೊಲೀಸ್ ಠಾಣೆ ಸದ್ಯ ಒಂದಿಷ್ಟು ಜನಸ್ನೇಹಿ ಆಗಿ ಬದಲಾಗಿದೆ. ಅದ್ಯಾವುದೇ ಬಲಿಷ್ಟ ಕೈಗಳ ಪ್ರಭಾವಗಳೂ ಇಲ್ಲಿ ಲೆಕ್ಕಕ್ಕೆ ಬರೋದೇ ಇಲ್ಲ. ಬಹುತೇಕ ಅದೇನಾಗಬೇಕೋ ಅದೇಲ್ಲ ಕಾನೂನಾತ್ಮಕವಾಗಿಯೇ ನಡೀತಿದೆ.

ಒಟ್ಟಾರೆಯಾಗಿ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಭಾಗದಲ್ಲಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಕಂಟಕಪ್ರಾಯವಾಗಿದ್ದ ಈ ಕಳ್ಳರ ಜಾಲವನ್ನು ಪತ್ತೆ ಹಚ್ಚಿದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ತಂಡಕ್ಕೆ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page