ಶಿವಯೋಗಿಸಿದ್ದರಾಮೇಶ್ವರರು ಕಾಯಕವೇಕೈಲಾಸವೆಂದು ಭಾವಿಸಿದ್ದ ಮಹಾನ್ ಚೇತನ : ಶಿರಸ್ತೇದಾರ್ ತಿಪ್ಪೇಸ್ವಾಮಿ

by | 16/01/24 | ಸುದ್ದಿ


ಹಿರಿಯೂರು:
ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಶಿವಯೋಗಿ ಸಿದ್ದರಾಮೇಶ್ವರರು ಕಾಯಕವೇ ಕೈಲಾಸವೆಂದು ಭಾವಿಸಿದ್ದ ಮಹಾನ್ ಚೇತನ, ಇವರು ಕೆಳವರ್ಗದವರಲ್ಲಿ ಕಾಯಕದ ಬಗ್ಗೆ ಅರಿವು ಮೂಡಿಸುವಲ್ಲಿ ಶ್ರಮಿಸಿದರು ಎಂಬುದಾಗಿ ತಾಲ್ಲೂಕು ಶಿರಸ್ತೇದಾರರಾದ ತಿಪ್ಪೇಸ್ವಾಮಿ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಭೋವಿ ಸಮಾಜದ ಗೌರವಾಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಭೋವಿ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಈ ಭೋವಿ ಸಮಾಜದ ಮಕ್ಕಳನ್ನು ಹೆಚ್ಚು ಹೆಚ್ಚು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯಿವಾಹಿನಿಗೆ ತರಬೇಕು ಎಂದರಲ್ಲದೆ,
ಭೋವಿ ಸಮಾಜದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ, ನಗರದ ಹರಿಶ್ಚಂದ್ರಘಾಟ್ ಬಳಿಯಿರುವ ಭೋವಿ ಸಮಾಜದ ಹಾಸ್ಟೆಲ್ ಜಾಗದಲ್ಲಿ ಡಿಪ್ಲೋಮೋ ಹಾಗೂ ಜಾಬ್ ಕೋರ್ಸ್ ಗಳಂತಹ ಕಾಲೇಜು ತೆರೆಯಬೇಕಿದ್ದು, ಈ ಮೂಲಕ ಉದ್ಯೋಗಸಿಗುವಂತಹ ಕೋರ್ಸ್ ಗಳ ಸೌಲಭ್ಯ ಸಮಾಜದ ಮಕ್ಕಳಿಗೆ ಒದಗಿಸಿಕೊಡಬೇಕಿದೆ ಎಂಬುದಾಗಿ ಅವರು ಹೇಳಿದರು.
ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ತಿಮ್ಮರಾಜು ಮಾತನಾಡಿ, ಕಾಯಕಯೋಗಿ ಸಿದ್ದರಾಮೇಶ್ವರರು ಭೋವಿ ಸಮುದಾಯಕ್ಕೆ ಮಾತ್ರವಲ್ಲದೆ ಇತರೆ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದು, ಸಿದ್ದರಾಮೇಶ್ವರ ಜಯಂತಿಯನ್ನು ಸಾವಿರಾರು ಜನ ಸೇರಿ ಎಲ್ಲಾ ಜಾತಿಯ ಜನಾಂಗದವರನ್ನು ಕರೆದು ಆಚರಿಸಲು ತಾಲೂಕು ಆಡಳಿತ ಕ್ರಮಕೈಗೊಳ್ಳಬೇಕು ಎಂದರು.
ಭೋವಿ ಸಮಾಜದ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಸಿದ್ದರಾಮೇಶ್ವರರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ ಮೇಲೂ ಸಮಾಜಕ್ಕೆ ಮಾಡಿದಂತಹ ಉಪಯೋಗಗಳು ಸ್ಮರಣಾರ್ಹ, ಇವರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಯುವಜನಾಂಗ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಮನೋಹರ್, ತಾಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ತಾಲೂಕು ಕಚೇರಿಯ ಶ್ರೀನಿವಾಸ ರೆಡ್ಡಿ ಭೋವಿ ಸಮಾಜದ ಮುಖಂಡ ಸೂರಗೊಂಡನಹಳ್ಳಿಕೃಷ್ಣಮೂರ್ತಿ, ತಾಲೂಕು ಭೋವಿ ಸಮಾಜದ ಅಧ್ಯಕ್ಷ ಟಿ.ಚಂದ್ರಶೇಖರ್, ಉಪಾಧ್ಯಕ್ಷರಾದ ವೆಂಕಟೇಶ್, ಭೋವಿ ಹಾಸ್ಟೆಲ್ ಕಾರ್ಯದರ್ಶಿ ಭೂತಾಭೋವಿ, ತಾ.ಪಂ.ಮಾಜಿ ಅಧ್ಯಕ್ಷ ಟಿ.ಆರ್.ಗೋಪಾಲ್, ನಗರಸಭೆ ಸದಸ್ಯ ಮಹೇಶ್ ಪಲ್ಲವ, ಸಮುದ್ರದಳ್ಳಿ ರಾಜು, ಈಶ್ವರಪ್ಪ, ಎಂ.ಜಿ.ಗೋಪಾಲಪ್ಪ, ಶಿಕ್ಷಕ ರಮೇಶ್, ಬಳಗಟ್ಟಮೂರ್ತಿ, ನಾರಾಯಣ, ತಿಪ್ಪೇಸ್ವಾಮಿ, ಹನುಮಂತಪ್ಪ, ರಂಗಸ್ವಾಮಿ, ದಾಸಭೋವಿ, ಅಂಜನಮೂರ್ತಿ, ಬಾಲರಾಜು, ಗೋವಿಂದಪ್ಪ, ಕರವೇ ತಿಮ್ಮರಾಜು, ರಮೇಶ್ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.

Latest News >>

ಮಹಿಳಾ ನಿಲಯದಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟ ದಿವ್ಯ ಮತ್ತು ನಾಗರಾಜ್ ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು

ದಾವಣಗೆರೆ; ಫೆ.21 ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ...

ಚೌಡೇಶ್ವರಿ ಜಾತ್ರೆಯಲ್ಲಿ ಬುಡಕಟ್ಟು ಸಂಸ್ಕೃತಿಯ ಅನಾವರಣ ಸಂಭ್ರಮದ ಹಿರೆಕೆರೆ ಕಾವಲು ಚೌಡೇಶ್ವರಿ ಜಾತ್ರಾ ಮಹೋತ್ಸವ

ನಾಯಕನಹಟ್ಟಿ : ನಾಯಕನಹಟ್ಟಿ ಸಮೀಪದ ಹಿರೆಕೆರೆ ಕಾವಲಿನಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಕಾವಲು ಚೌಡೇಶ್ವರಿ ದೇವಿಯ ಜಾತ್ರಾ...

ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಿವಿಸಾಗರ ನೀರು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ರಿಂದ ಭರವಸೆ

ಹಿರಿಯೂರು: ತಾಲ್ಲೂಕಿನ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಾಣಿವಿಲಾಸ ಸಾಗರ...

ಬಯಲು ಸೀಮೆಯ ಜೋಡಿತ್ತಿನ ಗಾಡಿ ಸ್ಪರ್ಧೆಗೆ ಚಾಲೆನೆ ನೀಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು

ನಾಯಕನಹಟ್ಟಿ:: ಜೋಡಿತ್ತಿನ ಗಾಡಿ ಸ್ಪರ್ಧಾಳುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ...

ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು ಎಂದು ಶಾಸಕ ಹಾಗೂ ಸಣ್ಣ ಕೈಗಾರಿಗಳ ಅಭಿವೃದ್ಧಿನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಾಕೀತು.

ಚಳ್ಳಕೆರೆ ಫೆ.19 ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ದೂರು , ಮಾಧ್ಯಗಳಲ್ಲಿ ಸುದ್ದಿ ಬಂದರೆ ಆಯಾ ಅಧಿಕಾರಳೇ ನೇರೆ ಹೊಣೆ ಗಾರರು...

ಸಂಭ್ರಮದಿಂದ ಜರಗಿದ ಚಿಲುಮೆ ರುದ್ರ ಸ್ವಾಮಿಯ ರಥೋತ್ಸವ.

ಚಳ್ಳಕೆರೆ: ತಾಲ್ಲೂಕಿನ ನಾಗಗೊಂಡನಹಳ್ಳಿ ಸಮೀಪದ ವೇದಾವತಿ ನದಿಯ ತಟದಲ್ಲಿರುವ ಶಿವಯೋಗಿ ಶ್ರೀ ಗುರು ಚಲುಮೆ ರುದ್ರ ಸ್ವಾಮಿಗಳವರ ಜೀವೈಕ್ಯ...

ಮಲ್ಲೂರಹಟ್ಟಿಯಲ್ಲಿ ಸಂಭ್ರಮದ ಶ್ರೀ ಬನಶಂಕರಿ ಜಾತ್ರೆ ಜಾನಪದ ಕಲಾತಂಡಗಳೊಂದಿಗೆ ಸಂಭ್ರಮದ ಆಚರಣೆ*

ನಾಯಕನಹಟ್ಟಿ. ಸಮೀಪದ ಮಲ್ಲೂರಹಟ್ಟಿ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರೆ ವಿಜೃಂಭಣೆಯಿಂದ ಆಚರಿಸಲಾಯಿತು. ಎಂದು ಶ್ರೀ ಬಾಳೇ ಬಂದಮ್ಮ...

ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

ಚಿತ್ರದುರ್ಗ ಫೆ.17 ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸುವಂತಾಗಲು...

ಜಿಲ್ಲಾಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಕ್ಕಳಲ್ಲಿರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಬಾಲವಿಕಾಸ ಅಕಾಡೆಮಿ ಕಾರ್ಯ ಉತ್ತಮ

ಚಿತ್ರದುರ್ಗ ಫೆ.17: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆ ಹೊರಹಾಕುವ ನಿಟ್ಟಿನಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಜಿಲ್ಲೆಯಲ್ಲಿರುವ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page