ಶುದ್ದ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

by | 02/04/24 | ಸುದ್ದಿ


ಚಿತ್ರದುರ್ಗ : ಏಪ್ರಿಲ್ 02
ಪ್ರಸಕ್ತ ಬೇಸಿಗೆಯಲ್ಲಿ ಚಿತ್ರದುರ್ಗ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಬರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಗತ್ಯವಿರುವಲ್ಲಿ ಆಯಾ ಪ್ರದೇಶದ ವ್ಯಾಪ್ತಿಯ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಸಕಾಲಿಕ ಪರಿಹಾರ ನೀಡುವಂತೆ ಅವರು ಸೂಚಿಸಿದರು.
ಈಗಾಗಲೇ ಜಿಲ್ಲೆಯ ಹಲವು ಪ್ರದೇಶಗಳಿಂದ ನಿರಂತರ ನೀರು ಸರಬರಾಜಿನಲ್ಲಿ ವ್ಯತ್ಯಯಗಳಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ದೂರುಗಳು ಪುನರಾವರ್ತನೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಇಂತಹ ಸಂದಿಗ್ಧ ಸಂದರ್ಭದಲ್ಲಿ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ತಮ್ಮ ಜವಾಬ್ದಾರಿಯರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಬಳಲಿದವರಿಗೆ ಶುದ್ಧ ಕುಡಿಯುವ ನೀರು ನೀಡಿ, ದಾಹ ಇಂಗಿಸಿದ ಹೆಮ್ಮೆ ನಿಮಗಿರಲಿ ಎಂದವರು ನುಡಿದರು.
ಈಗಾಗಲೇ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಲ್ಲಿ ನೀರನ್ನು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಸ್ಥಳೀಯವಾಗಿ ಲಭ್ಯವಿರುವ ಕೆರೆ, ಬೋರ್‍ವೆಲ್‍ಗಳಲ್ಲಿನ ನೀರನ್ನು ಟ್ಯಾಂಕರ್ ಮೂಲಕ ಒದಗಿಸಲು ಕ್ರಮ ಕೈಗೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಒದಗಿಸಲು ಸರ್ಕಾರ ಈಗಾಗಲೇ ದರ ನಿಗಧಿಪಡಿಸಿದೆ. ಅದರಂತೆಯೇ ಅಧಿಕಾರಿಗಳು ದರ ನಿಗಧಿಪಡಿಸಬೇಕು. ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ದಾಖಲೆಗಳನ್ನು ನಿರ್ವಹಿಸಬೇಕು. ಅಲ್ಲದೆ ಆನ್‍ಲೈನ್‍ನಲ್ಲಿ ದಾಖಲೆಗಳನ್ನು ನಿರ್ವಹಿಸಬೇಕು. ನೀರನ್ನು ಒದಗಿಸುವ ಟ್ಯಾಂಕರ್‍ಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ತಂತ್ರಾಂಶವನ್ನು ಅಳವಡಿಸುವಂತೆ ಸೂಚಿಸಿದ ಅವರು ಇದರ ವ್ಯವಸ್ಥಿತ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದವರು ನುಡಿದರು.
ನೀರು ಸರಬರಾಜು ಮಾಡಿರುವ ಸಂಸ್ಥೆಗಳಿಗೆ ಸಕಾಲದಲ್ಲಿ ಹಣ ಪಾವತಿ ಮಾಡಿ. ಬರ ನಿರ್ವಹಣೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಬೇಡಿಕೆಯಂತೆ ಹಣ ಬಿಡುಗಡೆಗೊಳಿಸಲಾಗುವುದು. ಜಿಲ್ಲೆಯಲ್ಲಿ ಎಲ್ಲಿಯೂ ನೀರು ಸರಬರಾಜಿನಲ್ಲಿ ಯಾವುದೇ ಸಣ್ಣ ಲೋಪವೂ ಆಗದಂತೆ ಹಾಗೂ ಸಾರ್ವಜನಿಕ ವಲಯದಿಂದ ದೂರುಗಳು ಬರದಂತೆ ಕ್ರಮವಹಿಸುವಂತೆ ಅವರು ಸೂಚಿಸಿದರು.
ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ಡಿಹೈಡ್ರೇಶನ್, ಸಾಂಕ್ರಾಮಿಕ ರೋಗಗಳು ಹೆಚ್ಚಾಗಬಹುದಾದ ಸಂಭವವಿದ್ದು, ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಜನರಿಗೆ ಸರಿಯಾದ ಅರಿವು ಮೂಡಿಸಬೇಕು. ಚರಂಡಿಗಳು, ರಸ್ತೆ ಬದಿಗಳು, ನೀರಿನ ಟ್ಯಾಂಕರ್, ಬೋರ್‍ವೆಲ್‍ಗಳನ್ನು ಸ್ವಚ್ಚಗೊಳಿಸಿ ಗ್ರಾಮವನ್ನು ಶುಚಿಯಾಗಿಟ್ಟುಕೊಳ್ಳುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸವನಗೌಡ, ಜಂಟಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page