ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳ ಕುರಿತು ರೈತರಿಗೆ ತರಬೇತಿ ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆ: ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ

by | 09/02/24 | ಕೃಷಿ


ಹಿರಿಯೂರು ಫೆ.09:
ಹಿರಿಯೂರಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳು ಕುರಿತು ಒಂದು ದಿನದ ತರಬೇತಿ ತರಬೇತಿ ಕಾರ್ಯಕ್ರ ನಡೆಯಿತು.
ಅಖಿಲ ಭಾರತ ಸಮನ್ವಯ ಶೇಂಗಾ ಸಂಶೋಧನಾ ಪ್ರಾಯೋಜನೆ, ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧಾ ಕೇಂದ್ರ ಸಹಭಾಗಿತ್ವದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರುಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆಯಲು ಏರು ಮಡಿ ನಿರ್ಮಿಸುವ ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ ನೀಡಲಾಯಿತು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ 70ಕ್ಕೂ ಹೆಚ್ಚು ಆಸಕ್ತ ರೈತ ಮತ್ತು ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸೂಕ್ತವಾದ ಮಾಹಿತಿ ಪಡೆದುಕೊಂಡರು.
ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಸುರೇಶ ಡಿ.ಏಕಬೋಟೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆ ನಿವಾರಿಸಲು ಕೃಷಿ ಯಾಂತ್ರೀಕರಣ ಅನಿವಾರ್ಯವಾಗಿದೆ, ಶೇಂಗಾ ಬೆಳೆಯಲ್ಲಿ ರಸಗೊಬ್ಬರಗಳ ಬಳಕೆ ಕಡಿಮೆ ಮಾಡಲು ಜೈವಿಕ ಗೊಬ್ಬರವಾದ ರೈಜೋಬಿಯಂ ಮತ್ತು ಬೇರು ಮತ್ತು ಕಾಂಡ ಕೊಳೆ ರೋಗದ ಸಮಸ್ಯೆಕಡಿಮೆ ಮಾಡಲು ಜೈವಿಕ ಪೀಡೆ ನಾಶಕವಾದ ಟ್ರೈಕೋಡರ್ಮಾದಿಂದ ಬೀಜೋಪಚಾರ ಪ್ರಮುಖ ಪಾತ್ರವಹಿಸಿದೆ. ಈ ನಿಟ್ಟಿನಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಹೊರತಂದಿರುವ ಸಂಶೋಧನಾ ತಾಂತ್ರಿಕತೆಗಳನ್ನು ರೈತರು ಅನುಸರಿಸುವ ನಿಟ್ಟಿನಲ್ಲಿ ನಮ್ಮ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನಕೇಂದ್ರ, ಬಬ್ಬೂರು ಫಾರಂ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು ಸದಾ ಸಿದ್ಧವೆಂದು ಭರವಸೆ ನೀಡಿದರು.
ಶೇಂಗಾತಳಿ ವಿಜ್ಞಾನಿ ಡಾ.ಬಿ. ಎನ್. ಹರೀಶ್ ಬಾಬು ಮಾತನಾಡಿ, ಕರ್ನಾಟಕ ರಾಜ್ಯದ ಮಧ್ಯ ಒಣವಲಯ ಪ್ರದೇಶಕ್ಕೆ ಸೂಕ್ತವಾದಂತಹ ಶೇಂಗಾ ತಳಿಗಳು ಮತ್ತು ರೈತರು ಅÀನುಸರಿಸಬೇಕಾದ ಸುಧಾರಿತ ಬೇಸಾಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಇತ್ತೀಚಿಗೆ ಬಿಡುಗಡೆ ಮಾಡಲಾದ ಸುಧಾರಿತ ತಳಿಯಾದ ಡಿ.ಹೆಚ್256 ರೈತರು ಹೆಚ್ಚಾಗಿ ಬೆಳೆಯಬೇಕೆಂದು ಮನವಿ ಮಾಡಿದರು. ಈ ನಿಟ್ಟಿನಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧಾ ಕೇಂದ್ರದಲ್ಲಿ ಪ್ರಸ್ತುತ ಡಿ.ಹೆಚ್256 ಶೇಂಗಾ ತಳಿಯ ಬೀಜಗಳು ಲಭ್ಯವಿದ್ದು, ಆಸಕ್ತ ರೈತರು ಸಂಶೋಧನಾ ಕೇಂದ್ರದಿಂದ ಖರೀದಿಸಬಹುದೆಂದು ತಿಳಿಸಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಮಾತನಾಡಿ, ಶೇಂಗಾ ಜಿಲ್ಲೆಯ ಪ್ರಮುಖ ಎಣ್ಣೇಕಾಳು ಬೆಳೆಯಾಗಿದ್ದು, ಬೀಜೋಪಚಾರ, ಪೋಷಕಾಂಶಗಳ ನಿರ್ವಹಣೆ, ಸೂಕ್ತ ಸಮಯದಲ್ಲಿ ಕೀಟ ರೋಗಗಳ ನಿರ್ವಹಣೆ ಮತ್ತು ನೀರಾವರಿ ಸೌಲಭ್ಯವುಳ್ಳವರು ಏರುಮಡಿ ಪದ್ದತಿಯನ್ನು ಅನುಸರಿಸಿ ಶೇಂಗಾ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದರು.
ತಾಂತ್ರಿಕ ಅಧಿಕಾರಿ (ಕೀಟಶಾಸ್ತ್ರ) ವಿಜಯ ಎಸ್.ಧಾನರಡ್ಡಿ ಅವರು ಶೇಂಗಾ ಬೆಳೆಗೆ ಬಾಧಿಸುವ ಪ್ರಮುಖಕೀಟ ಮತ್ತು ರೋಗಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೃಷಿ ಇಂಜಿನಿಯರ್ ಡಾ.ರಾಜಶೇಖರ್ ಡಿ. ಬಾರ್ಕರ್ ಅವರು ಶೇಂಗಾ ಬೆಳೆ ಬಿತ್ತನೆಯಿಂದ ಕೊಯ್ಲು ಮತ್ತು ಕೊಯ್ಲೋತ್ತರ ಚಟುವಟಿಗಳಿಗೆ ಸೂಕ್ತವಾದಂತಹ ಯಂತ್ರೋಪಕರಣಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ತಳಕು ಹೋಬಳಿಯ ಪ್ರಗತಿಪರ ರೈತ ಗುಡಿಹಳ್ಳಿ ಬಡಗಿರಂಗಪ್ಪ ಅವರು ಸುಧಾರಿತ ತಾಂತ್ರಿಕತೆ ಅಳವಡಿಸಿಕೊಂಡು ಡಿ.ಹೆಚ್256 ಮತ್ತು ಕದರಿ ಲೇಪಾಕ್ಷಿ ಶೇಂಗಾತಳಿಯಿಂದ ಉತ್ತಮ ಇಳುವರಿ ಪಡೆದ ಹಾಗೂ ಬಿಳಿರಾಗಿ ಬೆಳೆದ ಅನುಭವ ಹಂಚಿಕೊಂಡರು. ಅದೇರೀತಿ ತಳಕು ಹೋಬಳಿಯ ಮತ್ತೋರ್ವ ಪ್ರಗತಿ ಪರರೈತ ಶರಣಪ್ಪ ಅವರು ಹಾಲಿ ನೀರಾವರಿಯಲ್ಲಿ ಏರು ಮಡಿ ಪದ್ದತಿಯಲ್ಲಿ ಡಿ.ಹೆಚ್256 ಉತ್ತಮವಾಗಿ ಬೆಳೆದಿದ್ದು, ಎಕರೆಗೆ 10-12 ಕ್ವಿಂಟಲ್ ಇಳುವರಿ ನಿರೀಕ್ಷಿಸಬಹುದು ಎಂದು ತಮ್ಮ ಅನುಭವ ಹಂಚಿಕೊಂಡರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page