ಧರ್ಮಪುರ :
ಗ್ರಾಮೀಣ ಬಡಮಕ್ಕಳ ಶೈಕ್ಷಣಿಕ ಪ್ರಗತಿಗೆ ಕ್ರೈಸ್ ಶಾಲೆಗಳು ಭದ್ರ ಬುನಾದಿಯಾಗಿದ್ದು, ಇಲ್ಲಿಯ ವಿದ್ಯಾರ್ಥಿಗಳ ಸಾಧನೆ ಉತ್ತಮವಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ಪ್ರವರ್ಗ 1 ರ ಒಕ್ಕೂಟದ ಅಧ್ಯೆಕ್ಷ ಡಿ.ಟಿ.ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ದೇವರಕೊಟ್ಟ ಮೊರಾರ್ಜಿ ವಸತಿ ಶಾಲೆಗಳ ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಚಿತ್ರದುರ್ಗ ಜಿಲ್ಲಾ ಕ್ರೈಸ್ ಶಾಲೆಗಳ ವಿದ್ಯಾರ್ಥಿಗಳ ಮತ್ತು ನೌಕರರ ಜಿಲ್ಲಾ ಜಿಲ್ಲಾಮಟ್ಟದ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ದೃಷ್ಠಿಯಿಂದ ಈ ಸಂಕೀರ್ಣದಲ್ಲಿ ಗ್ರಂಥಾಲಯ ಸ್ಥಾಪಿಸಿ, ಅದಕ್ಕೆ ಪೂರಕವಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂಬುದಾಗಿ ಭರವಸೆ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪರಿಶಿಷ್ಠಜಾತಿ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಜೆ.ಪ್ರಕಾಶ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ 35 ಮೊರಾರ್ಜಿ ವಸತಿಶಾಲೆಗಳ ಹತ್ತು ಸಾವಿರ ವಿದ್ಯಾರ್ಥಿಗಳಲ್ಲಿ ನಾಲ್ಕು ಸಾವಿರ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಸಹ ಕ್ರೀಡೆಯಲ್ಲಿ ಭಾಗವಹಿಸಿದ್ದಾರೆ. ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆದಿಜಾಂಭವ ಮಠದ ಷಡಕ್ಷರ ಮುನಿಸ್ವಾಮೀಜಿ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಕಬ್ಬಡ್ಡಿ ಶ್ರೀನಿವಾಸ್, ಪ್ರಾಂಶುಪಾಲರಾದ ರಮೇಶ್, ಸಿದ್ಧಪ್ಪ, ಮನೋಹರ್, ನಾಗರಾಜ್, ಸಂಪತ್ ಕುಮಾರ್, ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.
ಶೈಕ್ಷಣಿಕ ಪ್ರಗತಿಗೆ ಕ್ರೈಸ್ ಶಾಲೆಗಳು ಭದ್ರ ಬುನಾದಿ ಪ್ರವರ್ಗ 1 ರ ಒಕ್ಕೂಟದ ಅಧ್ಯಶಕ್ಷ ಡಿ.ಟಿ.ಶ್ರೀನಿವಾಸ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments