ಶೌಚಾಲಯ ವಂಚಿತ. ಕೆರೆಯಾಗಲಹಳ್ಳಿ ಸರಕಾರಿ ಶಾಲೆ.

by | 11/12/23 | ಜನಧ್ವನಿ

ಚಳ್ಳಕೆರೆ ಡಿ.11 ಸ್ವಾತಂತ್ಯ ಪೂರ್ವ ಸರಕಾರಿ ಶಾಲೆಗೆ ಶೌಚಾಯಲವಿಲ್ಲದೆ ವಿದ್ಯಾರ್ಥಿಗಳು ಬಯಲೇ ಮಲಮೂತ್ರ ವಿಸರ್ಜನೆ ಅನಿವಾರ್ಯವಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ವ್ಯಾಪ್ತಿಯ ಮನ್ನೆಕೋಟೆ ಗ್ರಾಪಂ ವ್ಯಾಪ್ತಿಯ ಕೆರೆಯಾಗಲಹಳ್ಳಿ ಗ್ರಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭವಾಗಿ ಸುಮಾರು 50 ವರ್ಷಗಳು ಕಳೆದರೂ ಶಾಲಡಯಲ್ಲಿ ಶೌಚಾಲಯ ನಿರ್ಮಿಸದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಚಂದ್ರಲೋಕಕ್ಕೆ ರಾಕೇಟ್ ಹಾರಿಸುವ ತಂತ್ರಜ್ಞಾನದ ಯುಗದಲ್ಲಿ ಸರಕಾರ ಪ್ರತಿಯೊಬ್ಬರಿಗೂ ವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಿ . ಬಯಲು ಮುಕ್ತ ಗ್ರಾಮವನ್ನಾಗಿ ಮಾಡಲು ಇದಕ್ಕಾಗಿ ಸರಕಾರ ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡುತ್ತಿದೆ ಈ ಶಾಲೆಯಲ್ಲಿ 1ರಿಂದ 7 ನೇ ತರಗತಿಯವರೆಗೆ ಸುಮಾರು 70 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು 5 ಜನ ಶಿಕ್ಷಕರಿರುವ ಈ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯವೇ ಇಲ್ಲ. ಈ ಬಗ್ಗೆ ಅಧಿಕಾರಿಗಳ ಹಾಗೂ ಗ್ರಾಪಂ ಕಚೇರಿ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಶಾಲಾ ಮಕ್ಕಳಿಗೆ ಬಯಲೇ ಶೌಚಾಲಯವಾಗಿದೆ. ಶೌಚಾಲಯಕ್ಕೆ ಹೋಗಬೇಕೆಂದರೆ ಮನೆಗೆ ಹೋಗಿ ಬರುತ್ತಾರೆ. ಇದೊಂದು ದುರದೃಷ್ಟಕರ ಸಂಗತಿ.
ಬಯಲು ಮುಕ್ತ ಶೌಚಾಮುಕ್ತ ಮಾಡಲಯಲು ಸಂಪೂರ್ಣ ನೈರ್ಮಲ್ಯ.ಸ್ವಚ್ಚ ಗ್ರಾಮ. ನರೇಗಾ ಸೇರಿದಂತೆ ವಿವಿಧ ಯೋಜನೆಯಡಿ ವೈಯುಕ್ತ.ಸಾಮೂಹಿಕ ಹಾಗೂ ಸರಕಾರಿ ಶಾಲೆಗಳಿಗೆ ನರೇಗಾ ಒಗ್ಗೂಡಿಸುವಿಕೆ ಅನುದಾನದಡಿಯಲ್ಲಿ ಹೈಟೆಕ್ ಶೌಚಾಲಯಗಳ ನಿರ್ಮಾಣಕ್ಕೆ ಅವಕಾಶವಿದ್ದರೂ ಸಹ ಗ್ರಾಮೀಣ ಭಾಗದ ಬಡಕುಟುಂಬದ ಮಕ್ಕಳು ವ್ಯಾಸಂಗ ಮಾಡುವ ಸರಕಾರಿ ಶಾಲೆ ಶೌಚಾಲಯ ನಿರ್ಮಾಣ ಮಾಡದೇ ಇರುವುದು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷದ ಕೈಗನ್ನಡಿಯಾಗಿದೆ.
ಈ ಶಾಲೆಯಲ್ಲಿ ಮಕ್ಕಳಿಗೆ ಇನ್ನೂ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ಏಕೆ? ಗ್ರಾ.ಪಂ.ನವರು ಶೌಚಾಲಯ ಕಟ್ಟಿಸಲು ಮುಂದಾಗುತ್ತಿಲ್ಲ ಯಾಕೆ? ಎಂಬುದು ಪ್ರಶ್ವೆಯಾಗಿದೆ. ಪ್ರತಿ ಗ್ರಾಪಂ ವ್ಯಾಪ್ತಿಯ ಶಾಲೆಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಗ್ರಾಪಂ ಕಚೇರಿಯ ಜವಾಬ್ದಾರಿಯಾಗಿದೆ ಶಾಲೆಯಿಂದ ಮನವಿ ನೀಡಿದರೂ ಸಹ ಶೌಚಾಲಯ ನಿರ್ಮಾಣ ಮಾಡದೆ ಇರುವುದು ಶಾಲಾ ಮಕ್ಕಳ ಹಕ್ಕು ಉಲ್ಲಂಘ‌ನೆಯಾದಂತಾಗಿದೆ.


ಜಿಲ್ಲಾ ಪಂಚಾಯಿತಿಯ ಸಿಇಓ ಅವರಿಗೆ ಶಾಲಾ ಮಕ್ಕಳ ಬಗ್ಗೆ ಅಪಾರ ಗೌರವವಿದೆ. ಹೀಗಾಗಿ ಈ ಶಾಲೆಯ ವಿದ್ಯಾರ್ಥಿಗಳ ಕಷ್ಟವನ್ನು ಕೇಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ. ಇನ್ನಾದರೂ ಇಂತಹ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಶಾಲೆಗೆ ಒಂದು ಹೈಟೆಕ್ ಶೌಚಾಲಯ ಕಟ್ಟಿಸಿಕೊಡಬೇಕು ಎಂಬುವುದು ಪ್ರಜ್ಞಾವಂತರ ಕಳಕಳಿಯಾಗಿದೆ. ಈಗಲಾದರೂ ಕೆರೆಯಾಗಲಹಳ್ಳಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸಿಕೊಡುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page