ಹಿರಿಯೂರು ಜನಧ್ವನಿ ವಾರ್ತೆ ಅ.28
ಶ್ರೀ ವಾಲ್ಮೀಕಿ ಮಹರ್ಷಿಗಳನ್ನು ಕೇವಲ ಯಾವುದೇ ಒಂದು ಜಾತಿ-ಜನಾಂಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ, ಅವರು ಸಮಾಜದ ಎಲ್ಲಾ ವರ್ಗದ ಜನರಿಗೂ ಸೇರಿದ ಶ್ರೇಷ್ಠವ್ಯಕ್ತಿಯಾಗಿದ್ದಾರೆ, ಶ್ರೀರಾಮಸೀತೆಯನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಗಳನ್ನು ಎಲ್ಲಾ ಜಾತಿಜನಾಂಗದವರು ಹಾಗೂ ಎಲ್ಲಾ ಧರ್ಮದವರು ಪೂಜಿಸಬೇಕಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ನೆಹರು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶ್ರೀರಾಮನ ಆದರ್ಶ ಗುಣಗಳನ್ನು ಹಾಗೂ ಆದರ್ಶ ರಾಜ್ಯ ಪರಿಪಾಲನೆಯನ್ನು ಈ ಜಗತ್ತೇ ಮೆಚ್ಚುವಂತೆ, ಆದರ್ಶ ಪುರುಷ ಶ್ರೀರಾಮನನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಯವರಿಗೆ ಸಲ್ಲುತ್ತದೆ ಎಂದರಲ್ಲದೆ ವಾಲ್ಮೀಕಿಯವರ ತತ್ವಆದರ್ಶಗಳನ್ನು ಇಂದಿನ ಯುವಜನಾಂಗದವರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂಬುದಾಗಿ ಅವರು ಹೇಳಿದರು.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ 5 ಗ್ಯಾರೆಂಟಿಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಹಾಗೂ ಶಕ್ತಿ ಯೋಜನೆಗಳ ಮೂಲಕ 4 ಗ್ಯಾರೆಂಟಿಗಳನ್ನು ಈಗಾಗಲೇ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆವಸರ್ಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ತಹಶೀಲ್ದಾರರಾದ ಸಿ.ರಾಜೇಶ್ ಕುಮಾರ್ ವಹಿಸಿದ್ದರು. ಪ್ರಾಧ್ಯಾಪಕರಾದ ಜೆ.ಕರಿಯಪ್ಪ ಮಾಳಿಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ಈರಲಿಂಗೇಗೌಡ, ಶಿವಕುಮಾರ್, ಸಹ ಪ್ರಾಧ್ಯಾಪಕರಾದ ಗಿರೀಶ್ ನಾಯಕ್, ಸೇರಿದಂತೆ ವಾಲ್ಮೀಕಿ ಸಮಾಜದ ಅಧ್ಯಕ್ಷರು ಹಾಗೂ ಸಮುದಾಯದ ಮುಖಂಡರಾದ ವೀರೇಂದ್ರ ಸಿಂಹ, ಕೃಷಿಕ ಸಮಾಜದ ಅಧ್ಯಕ್ಷ ಹೆಚ್.ಆರ್.ತಿಮ್ಮಯ್ಯ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಶ್ರೀವಾಲ್ಮೀಕಿಮಹರ್ಷಿಗಳನ್ನು ಕೇವಲ ಯಾವುದೇ ಒಂದು ಜಾತಿ-ಜನಾಂಕ್ಕೆ ಮಾತ್ರ ಸೀಮಿತಗೊಳಿಸಲು ಸಾಧ್ಯವಿಲ್ಲ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments