ಹಿರಿಯೂರು :
ರವೀಂದ್ರ ರವರು ಎರಡು ಕಣ್ಣು ಇಲ್ಲದ ಅಂದರಾಗಿದ್ದು, ಇವರಿಗೆ ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ, “ವಾತ್ಸಲ್ಯಮನೆ” ನಿರ್ಮಿಸಿಕೊಡಲಾಗಿದ್ದು, ಇನ್ನು ಮುಂದೆ ಈ ಮನೆ ರವೀಂದ್ರರವರ ಜೀವನದಲ್ಲಿ ಬೆಳಕಿನ ಮನೆಯಾಗಿ ಪರಿವರ್ತನೆಯಾಗಲಿ ಎಂಬುದಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಬಿ.ಗೀತಾರವರು ಶುಭಹಾರೈಸಿದರು.
ತಾಲ್ಲೂಕಿನ ಈಶ್ವರಗೆರೆ ವಲಯದ ಹೋಬಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎರಡು ಕಣ್ಣು ಕಾಣದ ಅಂದ ರವೀಂದ್ರರವರಿಗೆ ವಾತ್ಸಲ್ಯ ಯೋಜನೆಯಡಿ ನಿರ್ಮಾಣ ಮಾಡಿದ ಮನೆಯನ್ನು ಅವರಿಗೆ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ, ತಾಲ್ಲೂಕು ಯೋಜನಾಧಿಕಾರಿಗಳಾದ ಹರಿಪ್ರಸಾದ್ ರೈ, ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ರತ್ನ, ಆರಕ್ಷಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್, ಮನೆ ನಿರ್ಮಾಣದ ಮೇಸ್ತ್ರಿ ಶ್ರೀನಿವಾಸ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಲಕ್ಷ್ಮಿ, ವಲಯದ ಮೇಲ್ವಿಚಾರಕರಾದ ಲಕ್ಷ್ಮವ್ವ, ಸೇವಾ ಪ್ರತಿನಿಧಿಗಳು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಂಧ ರವೀಂದ್ರರವರಿಗೆ ವಾತ್ಸಲ್ಯಮನೆಯ ಹಸ್ತಾಂತರ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments