ಚಳ್ಳಕೆರೆ ಜನಧ್ವನಿವಾರ್ತೆ ಫೆ.14
ನಗಗದಲ್ಲಿ ವಾಹನಗಳ ದಟ್ಟಣೆ ಟ್ರಾಫಿಕ್ ನಿಯಂತ್ರಣ ಹಾಗೂ ರಸ್ತೆಯಲ್ಲಿ ನಿಲ್ಲಿಸುವ ವಾಹನಗಳಿಗೆ ಪೊಲೀಸರು ವೀಲ್ ಲಾಕ್ ಅಳವಡುವ ಮೂಲಕ ದಂಡವಿಧಿಲಸು ಮುಂದಾಗಿದ್ದಾರೆ.
ಹೌದು ಇದು ಚಳ್ಳಕೆರೆ ನಗರದ ಹೃದಯ ಭಾಗದ ನೆಹರು ವೃತ್ತದಲ್ಲಿ ರಾಷ್ಟಿçÃಯ ಹೆದ್ದಾರಿ ಹಾದು ಹೋಗಿರುವುದರಿಂದ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡರೂ ಚಾಲಕರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಹಾಗಾಗಿ ಎಲ್ಲೆಂದರಲ್ಲಿ ನಿಲುಗಡೆ ಮಾಡಲಾಗಿದ್ದ ವಾಹನಗಳಿಗೆ ವೀಲ್ ಲಾಕ್ ಮಾಡುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ.
ಚಳ್ಳೆರೆ ಠಾಣೆಯ ಪಿಐ ದೇಸಾಯಿ ಆರ್.ಎಪ್, ಮಾತನಾಡಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಸಾರ್ವನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ವಾಹನಗಳ ದಟ್ಟಣೆ ಹಾಗೂ ದಿನ ನಿತ್ಯ ನಗರಕ್ಕೆ ಸಾವಿರಾರು ಜನರು, ವೃದ್ದರು, ಮಹಿಳೆಯರು, ವಿದ್ಯಾರ್ಥಿಗಳು ಬರುವುದರಿಂದ ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆಯಿಂದ ಸಂಚಾರ ಕಿರಿಯಾಗುತ್ತಿದೆ ಇದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ.
ದ್ವಿಚಕ್ರವಾಹನ ಸವಾರಿ ಮಾಡುವಾಗ ಹೆಲ್ಮೆಟ್ ಧರಿಸದೆ ಬಿದ್ದು ಸಾವನ್ನುಪ್ಪುತ್ತಾರೆ. ವಾಹನ ಚಾಲನೆಯಲ್ಲಿ ನಿರ್ಲಕ್ಷ್ಯ ತಾಳಿದರೆ ಜೀವನವೇ ನಾಶವಾಗುತ್ತದೆ. ಸಂಚಾರಿ ನಿಯಮಗಳ ಉಲ್ಲಂಘನೆ ಕಾನೂನು ದೃಷ್ಟಿಯಲ್ಲಿ ಅಪರಾಧವಾದ್ದರಿಂದ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಎಲ್ಲರೂ ನಿಯಮ ಪಾಲನೆ ಮಾಡಿದರೆ ಅಪಘಾತಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ಇದರಿಂದ ಎಲ್ಲರೂ ನೆಮ್ಮದಿಯಿಂದ ಸಂಚರಿಸಬಹುದು. ಆದ್ದರಿಂದ ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ನೆಹರು ವೃತ್ತದಿಂದ 200 ಮೀಟರ್ ಅಂತರದಲ್ಲಿ ಯಾವುದೇ ಪುಟ್‌ಪಾತ್ ನಲ್ಲಿ ಅಂಗಡಿಗಳನ್ನು ಹಾಗೂ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸ ಬಾರದು ಎಂಬ ನಿಯವಿದೆ ಆದರೂ ಸಹ ನಿಯಮಗಳನ್ನು ಗಾಳಿಗೆ ತೂರಿ ಇಡುವರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸುಸಜ್ಜಿತವಾದ ವಾಹನ ನಿಲುಗಡೆ ಪ್ರದೇಶವಿದ್ದರೂ ಸಹ ಯಾರು ಅಲ್ಲಿ ನಿಲ್ಲಿದೆ ಎಲ್ಲೆಂದರೆಲ್ಲಿನಿಲ್ಲಿಸಿ ಹೋಗುತ್ತಾರೆ. ನಗರಸಭೆ ಹಾಗೂ ಪೊಲೀಸ್ ಇಲಾಖೆ ಸಹಕಾರದೊಂದಿಗೆ ವಾಹನ ನಿಲುಗಡೆ ಸ್ಥಳ ಪರಿಶೀಲನೆ ಮಾಡಿ ನಿಲುಗಡೆ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತೆ ದ್ವನಿವರ್ಧಕದ ಮೂಲಕ ಪ್ರಚಾರ ಮಾಡಲಾಗುವುದು ಕಾನೂನು ಸುವ್ವವಸ್ಥೆ ಕಾಪಾಡುವ ಉದ್ದೇಶದಿಂದ ಸಿ.ಸಿ.ಕ್ಯಾಮರ ಅಳವಡಿಸಲು ನಗರಸಭೆ ಭರವಸೆ ನೀಡಿದೆ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಸಂಚಾರಿ ನಿಯಮಗಳ ಪಾಲನೆಯಿಂದ ಅಪಘಾತ ತಡೆಗಟ್ಟಲು ಸಾಧ್ಯ ಪ್ರತಿಯೊಬ್ಬರೂ ನಿಯಮ ಪಾಲನೆಗೆ ಒತ್ತು ನೀಡಬೇಕು ಪಿಐ ದೇಸಾಯಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments