ಸಂತೆ ಮೈದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಿದಂತೆ ತರಕಾರಿ ವರ್ತಕರ ಆಗ್ರಹ

by | 16/12/23 | ಪ್ರತಿಭಟನೆ


ಚಳ್ಳಕೆರೆ: ನಗರದ ಸಂತೆ ಮೈದಾನದಲ್ಲಿ ನಗರಸಭೆ ವತಿಯಿಂದ ಹೈಟೆಕ್ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಉದ್ದೇಶಿಸಿದ್ದು ಇದರಿಂದ ಬೀದಿಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗುವುದರಿಂದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಎಐಟಿಯುಸಿ ಮುಖಂಡ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಿವೈ ಶಿವರುದ್ರಪ್ಪ ಆಗ್ರಹಿಸಿದರು.


ಸಂತೆ ಮೈದಾನದಲ್ಲಿ ತರಕಾರಿ ವ್ಯಾಪಾರಸ್ಥರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದಿನನಿತ್ಯ ಗ್ರಾಮೀಣ ಹಾಗೂ ನಗರ ಪ್ರದೇಶದ ನೂರಾರು ಸಂಖ್ಯೆಯ ವ್ಯಾಪಾರಸ್ಥರು ಈ ಪ್ರದೇಶದಲ್ಲಿ ದಿನನಿತ್ಯ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ ಈಗ ನಗರಸಭೆ ವತಿಯಿಂದ ಹೈಟೆಕ್ ಶೌಚಾಲಯ ನಿರ್ಮಿಸಲು ಉದ್ದೇಶಿಸಿರುವುದರಿಂದ ಇಲ್ಲಿನ ವ್ಯಾಪಾರಸ್ಥರಿಗೆ ಜಾಗ ಖಾಲಿ ಮಾಡುವಂತೆ ನಗರಸಭೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಈಗಾಗಲೇ ಇಲ್ಲಿ ಪಾರ್ಕ್ ಸ್ಥಳವೆಂದು ಗುರುತಿಸಿರುವ ಸ್ಥಳವನ್ನು ಶೌಚಾಲಯ ನಿರ್ಮಾಣಕ್ಕಾಗಿ ಗುರುತಿಸಿರುವುದು ಖಂಡನೀಯ ವ್ಯಾಪಾರಸ್ಥರು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಕಳೆದ ಹತ್ತಾರು ವರ್ಷಗಳಿಂದ ದಿನನಿತ್ಯ ವ್ಯಾಪಾರ ನಡೆಸುವ ವರ್ತಕರಿಗೆ ಇದರಿಂದ ತಮ್ಮ ಜೀವನ ನಡೆಸಲು ಕಷ್ಟಕರವಾಗುತ್ತದೆ ಈಗಾಗಲೇ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ತರಕಾರಿ ಮಾರುಕಟ್ಟೆಯ ಸ್ಥಳದಲ್ಲಿ ಶೌಚಾಲಯ ನಿರ್ಮಾಣ ಮಾಡದಂತೆ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ ನಗರಸಭೆ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಶೌಚಾಲಯ ನಿರ್ಮಾಣದ ಕಾಮಗಾರಿಯನ್ನು ಕೈಗೊಂಡಲ್ಲಿ ಬೀದಿ ಬದಿ ವ್ಯಾಪಾರಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರ ಸಂಘದ 

ತಿಪ್ಪೇಸ್ವಾಮಿ, ಬಿ.ಪಟೇಲ್ ಒಬಣ್ಣ ,ಮಂಜಣ್ಣ, ಶಿವಣ್ಣ ನಾಗರಾಜ್,ನಾರಾಯಣಪ್ಪ ನಾಗರಾಜ್ ವೆಂಕಟೇಶ ರೆಹಮತ್ ಉಲ್ಲ, ಅಜ್ಜು ಹೊನ್ನೂರು, ಯಶೋದಮ್ಮ,ರುದ್ರಮ್ಮ,ನಿಲಮ್ಮ, ಸುರೇಶ ವಿರೇಶ,ತಿಪ್ಪಮ್ಮ ಸೈಯದ್ ಮೊಹಿನುದ್ದಿನ್ ಸಾಭ್ ಗೋವಿಂದರಾಜ್ ಕಣ್ಣಮಕ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page