ಚಿತ್ರದುರ್ಗ ಫೆ.09
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆ ಎನ್‍ಎಬಿಹೆಚ್ ನಿಂದ ಮಾನ್ಯತೆ ಪಡೆದ ಹೆಚ್‍ಸಿಜಿಎಲ್ ಹಾಸ್ಪಿಟಲ್ ಮೂಲಕ ಶೇ.75 ಉದ್ಯೋಗ ಖಾತರಿಯೊಂದಿಗೆ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಮೂರು ತಿಂಗಳ ವಸತಿ ಸಹಿತ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಫೆ.13 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸೈಟ್ sw.kar.nic.in ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
======