ಚಳ್ಳಕೆರೆ ಜ22 ಸಂವಿಧಾನ ದಿನಾಚರಣೆಯ
ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ” ಬಗ್ಗೆ ಜಂಟಿ ನಿರ್ದೇಶಕರು ಕೃಷಿ ಇಲಾಖೆ ಚಿತ್ರದುರ್ಗ ಹಾಗೂ ನೋಡಲ್ ಅಧಿಕಾರಿಗಳು ಇವರ ಅಧ್ಯಕ್ಷತೆ ಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿಜನವರಿ 25 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಸಭೆ ಕರೆದಿದ್ದು ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಿಯಾಗಿ ಸಭೆಯಲ್ಲಿ ಸಂವಿಧಾನ ದಿನಾಚರಣೆಯ
ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ” ಸ್ಥಬ್ದ ಚಿತ್ರದ ವಾಹನವು ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸುವಾಗ ಅದರ ಸ್ವಾಗತ ಮೆರವಣೆಗೆ | ಹಾಗೂ ವಿವಿಧ
ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸುವ ಸಂಬಂಧ ಸದರಿ ಸಭೆಗೆ ಹಾಜರಾಗಿ ತಮ್ಮ
ಸಲಹೆಗಳನ್ನು ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ರೇಹಾನ್ ಪಾಷ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments