ಸಕಾಲ ಅರಿವು-ಹರಿವು ಜಾಗೃತಿ ಕಾರ್ಯಕ್ರಮಕ್ಕೆ ಎಡಿಸಿ ಕುಮಾರಸ್ವಾಮಿ ಚಾಲನೆ

by | 07/09/23 | ಆರೋಗ್ಯ


ಚಿತ್ರದುರ್ಗ ಸೆ.07:
ನಿಗದಿತ ಕಾಲಮಿತಿಯಲ್ಲಿ ನಾಗರಿಕರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೊಂಡಿರುವ ಸಕಾಲ ಯೋಜನೆ ಕುರಿತು, ಆಶಾ ಕಾರ್ಯಕರ್ತೆಯರು ತಮ್ಮ ಮನೆ ಮನೆ ಭೇಟಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಆಶಾ ಕಾರ್ಯಕರ್ತೆಯರಿಗೆ ಸಕಾಲ ಯೋಜನೆ ಕುರಿತು ಏರ್ಪಡಿಸಿದ “ಸಕಾಲ ಅರಿವು-ಹರಿವು” ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಯ ಭೇಟಿಯ ಸಮಯದಲ್ಲಿ ಸಾರ್ವಜನಿಕರಿಗೆ ಸಕಾಲ ಯೋಜನೆಯಡಿಯ ಸೇವೆಗಳ ಕುರಿತು ಮಾಹಿತಿ ನೀಡಬೇಕು. ವಿವಿಧ ಯೋಜನೆಗಳ ಪಿಂಚಣಿಗಳು, ಜಾತಿ ಆದಾಯ ಪ್ರಮಾಣಪತ್ರ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಗ್ರಾಮ ಒನ್, ಅಟಲ್ ಜನಸ್ನೇಹಿ ಕೇಂದ್ರ ಮುಂತಾದೆಡೆ ಸಕಾಲ ಯೋಜನೆಯಲ್ಲಿಯೇ ಅರ್ಜಿ ಸಲ್ಲಿಸಿ, ನಿಗದಿತ ಕಾಲಮಿತಿಯೊಳಗೆ ಸೇವೆ ಪಡೆಯಬಹುದು. ಆಶಾ ಕಾರ್ಯಕರ್ತೆಯರು ನಗರ, ಗ್ರಾಮೀಣ ಪ್ರದೇಶಗಳಲ್ಲಿ ನೇರವಾಗಿ ಸಾರ್ವಜನಿಕರೊಂದಿಗೆ ಸಂವಹನ ನಡೆಸುವುದರಿಂದ, ಸಕಾಲ ಯೋಜನೆ ಕುರಿತು ಮಾಹಿತಿ ಹೊಂದಿರಬೇಕು, ಬಳಿಕ ಮನೆ ಮನೆ ಭೇಟಿ ಸಂದರ್ಭದಲ್ಲಿ ಸರ್ಕಾರದ ಯಾವ ಯಾವ ಇಲಾಖೆಗಳಲ್ಲಿ ಸಕಾಲ ಸೇವೆಗಳು ಇವೆ. ಅರ್ಜಿ ಸಲ್ಲಿಸುವ ಬಗೆ, ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸಕಾಲ ಸೇವೆಯಡಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವ ಸಂಬಂಧ ಅರಿವು ಮೂಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್, ಡಾ. ಚಂದ್ರಶೇಖರ ಕಂಬಾಳಿಮಠ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಗುಂಪುಗಳ ಪ್ರತಿನಿಧಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page