ಸಖಿ-ಒನ್ ಸ್ಟಾಪ್ ಸೆಂಟರ್‍ನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ -ದಾವಣಗೆರೆ

by | 05/12/23 | ಸುದ್ದಿ


ದಾವಣಗೆರೆ, ಡಿ.5 : ಕಾಣೆಯಾದ ಪ್ರಕರಣಗಳಲ್ಲಿ ಹದಿಹರೆಯದ ವಯಸ್ಸಿನ ಮಕ್ಕಳೇ ಹೆಚ್ಚಾಗಿದ್ದು, ಈ ಹಂತದಲ್ಲಿ ಮಕ್ಕಳಿಗೆ ಅಗತ್ಯವಾದ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಸಖಿ-ಒನ್ ಸ್ಟಾಪ್ ಸೆಂಟರ್‍ಗಳ ಕೌನ್ಸಿಲರ್‍ಗಳು ಮತ್ತು ಶಾಲಾ ಶಿಕ್ಷಕರು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಖಿ-ಒನ್ ಸ್ಟಾಪ್ ಸೆಂಟರ್‍ನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾವನಾತ್ಮಕವಾದ ಒಡನಾಟ ಹೊಂದುವುದು ಅತ್ಯವಶ್ಯಕ. ಶಾಲೆಗಳಲ್ಲಿ ಶಿಕ್ಷಕರು ಪ್ರಮುಖವಾಗಿ 8, 9 ಮತ್ತು 10ನೇ ತರಗತಿಯ ಮಕ್ಕಳ ಶೈಕ್ಷಣಿಕ ಹಾಗೂ ಸಾಮಾಜಿಕ ಭಾಗವಹಿಸುವಿಕೆಯನ್ನು ಗಮನಿಸಬೇಕು. ಯಾವುದೇ ರೀತಿಯ ಅನುಮಾನ ಬಂದಲ್ಲಿ ಅವರನ್ನು ಸಂದರ್ಶನಕ್ಕೆ ಒಳಪಡಿಸಿ ಸಮಸ್ಯೆಯನ್ನು ತಿಳಿದುಕೊಳ್ಳಬೇಕು ಮತ್ತು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು.
ಅತ್ಯಾಚಾರ, ಅಪಹರಣ, ಬಾಲ್ಯವಿವಾಹ, ಸೈಬರ್ ಅಪರಾಧ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಹದಿಹರೆಯದವರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದರು.
ಸಖಿ-ಒನ್ ಸ್ಟಾಪ್ ಸೆಂಟರ್‍ಗಳಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗೆ ವೈದ್ಯಕೀಯ, ಕಾನೂನು, ಮಾನಸಿಕ, ಸಾಮಾಜಿಕ ಬೆಂಬಲ ಮತ್ತು ತಾತ್ಕಾಲಿಕ ಆಶ್ರಯ ಸೇವೆಗಳನ್ನು ಒದಗಿಸಬೇಕು. ಕೌಟುಂಬಿಕ ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾದ ಮಹಿಳೆಯರು ಬಂದಾಗ ತಕ್ಷಣವೇ ಎಫ್.ಐ.ಆರ್ ದಾಖಲಿಸದೇ ಮೊದಲನೆಯದಾಗಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂತ್ರಸ್ಥೆ ಹಾಗೂ ಅವರ ಕುಟುಂಬದವರೊಂದಿಗೂ ಆಪ್ತ ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆಗೆ ಪರಿಹಾರವನ್ನು ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಇದು ಸಾಮಾಜಿಕ ಸಮಸ್ಯೆಯನ್ನು ಉಂಟುಮಾಡುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಮಾತನಾಡಿ ಜಿಲ್ಲೆಯಲ್ಲಿ ಏಪ್ರಿಲ್‍ನಿಂದ ಇಲ್ಲಿಯವರೆಗೆ ಮಕ್ಕಳಿಗೆ ಸಂಬಂಧಿಸಿದಂತೆ 61 ಪ್ರಕರಣಗಳು ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ 46 ಪ್ರಕರಣ ಸೇರಿದಂತೆ ಒಟ್ಟು 107 ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಮಹಿಳಾ ಪೆÇಲೀಸ್ ಠಾಣೆಯ ಪೆÇಲೀಸ್ ಅಧಿಕಾರಿ ನೂರ್ ಅಹಮದ್, ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ ಎನ್.ಬಿ, ಮಕ್ಕಳ ರಕ್ಷಣಾ ಘಟಕಾಧಿಕಾರಿ ರಾಜಕುಮಾರ್, ಶುಭೋದಯ ಸೇವಾ ಸಂಸ್ಥೆ ಕಾರ್ಯದರ್ಶಿ ಕುಮಾರ್ ಹೆಚ್.ಬಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page