ಸಚಿವ ಜಮೀರ್ ಅಹ್ಮದ್ ಖಾನ್ ಪ್ರವಾಸ

by | 15/10/23 | ಸುದ್ದಿ


ಚಿತ್ರದುರ್ಗ ಅ. 15 :
ರಾಜ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಅ. 17 ರಂದು ಚಿತ್ರದುರ್ಗ ಜಿಲ್ಲೆಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು, ಬಳಿಕ ನಗರದಲ್ಲಿನ ಮದಕರಿ ನಾಯಕ ವೃತ್ತದಲ್ಲಿನ ಮದಕರಿ ನಾಯಕ ಪುತ್ಥಳಿಗೆ ಮಾಲರ್ಪಣೆ, ನಂತರ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಪುತ್ಥಳಿಗೆ ಹಾಗೂ ಕನಕದಾಸ ವೃತ್ತದಲ್ಲಿನ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸುವರು. ಬೆ. 11.30 ಗಂಟೆಗೆ ನಗರದ ಬಡಾ ಮಕಾನ್ ಗೆ ಭೇಟಿ ನೀಡಿ, ನಂತರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ಅನ್ವರ್ ಬಾಷಾ ಅವರಿಗೆ ನಗರದ ಸಿ.ಜೆ. ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 02 ಗಂಟೆಗೆ ಅನ್ವರ್ ಬಾಷಾ ಅವರ ನಿವಾಸಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3.30 ಗಂಟೆಗೆ ನಗರದಲ್ಲಿ ಅಂಜುಮನ್-ಐ-ದಾರುಲ್ ಉದ್ “ಶಾದಿ ಮಹಲ್” ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ 5 ಗಂಟೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಸಚಿವರು ಅದೇ ದಿನ ಸಂಜೆ 06 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *