ಸಚಿವ ಡಿ.ಸುಧಾಕರ್ ಅವರಿಂದ ಧರ್ಮಪುರದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಶೀಘ್ರ ಅಕ್ಕಿ ವಿತರಣೆ

by | 27/11/23 | ಸುದ್ದಿ

ಧರ್ಮಪುರ.ನ.27:
ಸರ್ಕಾರದ ಪ್ರಮುಖ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ 05 ಕೆ.ಜಿ. ಅಕ್ಕಿ ಹಾಗೂ ಉಳಿದಂತೆ 05 ಕೆ.ಜಿ. ಅಕ್ಕಿಯ ಬದಲಿಗೆ ಅಕ್ಕಿಯ ಮೊತ್ತಕ್ಕೆ ಹಣ ಪಾವತಿಸಲಾಗುತ್ತಿದ್ದು, ಶೀಘ್ರವೇ ಹಣದ ಬದಲಿಗೆ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನೇ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಹೇಳಿದರು.
ಹಿರಿಯೂರು ತಾಲ್ಲೂಕಿನ ಧರ್ಮಪುರದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿರಿಯೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಧರ್ಮಪುರ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಡಳಿತ ಚುರುಕುಗೊಳಿಸುವ ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳ ನೆಚ್ಚಿನ ಜನತಾ ದರ್ಶನ ಕಾರ್ಯಕ್ರಮವು ಅತ್ಯುತ್ತಮ ಹಾಗೂ ಯಶಸ್ವಿಯತ್ತ ಸಾಗುತ್ತಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಜನರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯ ಒದಗಿಸಲಾಗುತ್ತಿದೆ. ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಬಡವರಿಗೆ ಅನ್ನವನ್ನು ನೀಡುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ. ಅಕ್ಕಿಯನ್ನು ನೀಡಿ, ಉಳಿದ 05 ಕೆ.ಜಿ. ಅಕ್ಕಿಯ ಮೊತ್ತ ರೂ. 170 ಗಳನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಶೀಘ್ರವೇ ಒಂದೆರಡು ತಿಂಗಳಿನಲ್ಲಿ ಫಲಾನುಭವಿಗೆ ಹಣದ ಬದಲಿಗೆ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನೇ ನೀಡಲಾಗುವುದು ಎಂದರು.
ಸರ್ಕಾರದ ವಿವಿಧ ಇಲಾಖೆಗಳಿಗೆ ಜನರ ಅಲೆದಾಟ ತಪ್ಪಿಸಲು, ತ್ವರಿತಗತಿಯಲ್ಲಿ ಜನರ ಸಮಸ್ಯೆ ಬಗೆಹರಿಸಬೇಕೆಂಬುದು ಜನತಾ ದರ್ಶನ ಕಾರ್ಯಕ್ರಮದ ಆಶಯವಾಗಿದೆ. ಬರಗಾಲದ ಹಿನ್ನಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮವಾಗಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ಜಾನುವಾರುಗಳಿಗೆ ಮೇವು ಹಾಗೂ ನೀರಿನ ತೊಂದರೆಯಾಗದಂತೆ ಕ್ರಮವಹಿಸಲಾಗಿದ್ದು, ಬರ ಎದುರಿಸಲು ಬರಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮಸಭೆ ಮಾಡುವ ಮೂಲಕ ಜನರ ಸಮಸ್ಯೆ ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು.
ಸರ್ಕಾರ ನೀಡಿರುವ ಭರವಸೆಯಂತೆ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಲಾಗಿದೆ. ಉಳಿದಂತೆ ಯುವನಿಧಿ ಯೋಜನೆಯನ್ನು ಜನವರಿ ಮಾಹೆಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಜನಸಾಮಾನ್ಯರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ವಿವಿಧ ಯೋಜನೆಗಳ ಜತೆಗೆ ಜನಸಾಮಾನ್ಯರ ಕುಂದುಕೊರತೆ ಆಲಿಸಲು, ಅಲೆದಾಟ ತಪ್ಪಿಸಲು ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮಮಟ್ಟದಲ್ಲಿ ನಡೆಸಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಧರ್ಮಪುರ ಗ್ರಾಮದಲ್ಲಿ ಜನತಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುರಿಯೊಂದಿಗೆ ಪ್ರಗತಿ ಸಾಧಿಸಲಾಗುತ್ತಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಡಿಸೆಂಬರ್ ಅಂತ್ಯದೊಳಗೆ ಕಂದಾಯ ಗ್ರಾಮಗಳ ರಚನೆ ಮಾಡಬೇಕು ಎಂಬ ನಿರ್ದೇಶನ ನೀಡಲಾಗಿದೆ. ಈಗಾಗಲೇ ಪ್ರಾಥಮಿಕ ಅಧಿಸೂಚನೆ, ಅಂತಿಮ ಅಧಿಸೂಚನೆ ಹೊರಡಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಅರ್ಹ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚನೆ ಮಾಡಲಾಗುವುದು ಎಂದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಎಲ್ಲಾ ಫಲಾನುಭವಿಗಳಿಗೆ ಎನ್‍ಪಿಸಿ ಮ್ಯಾಪಿಂಗ್ ಹಾಗೂ ಆಧಾರ್ ಜೋಡಣೆಯನ್ನು ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ. ಪೋಡಿಮುಕ್ತ ಅಭಿಯಾನ ಮಾಡಲು ಈಗಾಗಲೇ ಗುರಿ ನಿಗಧಿಪಡಿಸಲಾಗಿದ್ದು, ಪ್ರಗತಿ ಸಾಧಿಸಲಾಗುತ್ತಿದೆ. ಜನಸಾಮಾನ್ಯರ ಮನೆ ಬಾಗಿಲಿಗೆ ಹೋಗಿ ನಿಗದಿತ ಸಮಯದಲ್ಲಿ ಪರಿಹಾರ ಒದಗಿಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 4 ಕಡೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜನತಾ ದರ್ಶನ ಕಾರ್ಯಕ್ರಮದಲ್ಲಿ 871 ಅರ್ಜಿಗಳು ಸ್ವೀಕೃತಗೊಂಡಿವೆ. ಈಗಾಗಲೆ 721 ಅರ್ಜಿಗಳನ್ನು ವಿಲೇ ಮಾಡಲಾಗಿದ್ದು, ಇನ್ನು 150 ಅರ್ಜಿಗಳು ಮಾತ್ರ ವಿಲೇಗೆ ಬಾಕಿ ಇವೆ. ಜನಸಾಮಾನ್ಯರು ಸಲ್ಲಿಸುವ ಎಲ್ಲಾ ಅರ್ಜಿಗಳು ಗಣಕೀಕೃತವಾಗುತ್ತಿವೆ. ಜನತಾ ದರ್ಶನ ಕಾರ್ಯಕ್ರಮವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿದ್ದಾರೆ ಎಂದರು.
ಸೌಲಭ್ಯಗಳ ವಿತರಣೆ:
*********ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ವಿತರಿಸಲಾಯಿತು.
20 ಜನರಿಗೆ ಸಂಧ್ಯಾ ಸುರಕ್ಷಾ, 10 ಜನರಿಗೆ ವಿಧವಾ ವೇತನ, 10 ಜನರಿಗೆ ಇಂದಿರಾಗಾಂಧಿ ವೃದ್ದಾಪ್ಯ ವೇತನ, ಮೂವರಿಗೆ ರಾಷ್ಟ್ರೀಯ ಕುಟುಂಬ ಸಹಾಯಧನ, 94ಸಿ ಯೋಜನೆಯಡಿ ಮೂವರಿಗೆ ಮನೆ ನಿವೇಶನ ಹಕ್ಕು ಪತ್ರ ವಿತರಣೆ, ಪಶುಪಾಲನಾ ಇಲಾಖೆಯಿಂದ ಹಾಗೂ ಕೃಷಿ ಇಲಾಖೆಯಿಂದ ರೈತರಿಗೆ ತಲಾ 10 ಮೇವಿನ ಬೀಜದ ಕಿಟ್ ವಿತರಣೆ, 15 ಜನ ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯಡಿ ಸಹಾಯಧನ ಚೆಕ್‍ಗಳ ವಿತರಣೆ, 10 ಜನರಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯದ ಕಾರ್ಯಾದೇಶ, 30 ಜನರಿಗೆ ಕೃಷಿ ಇಲಾಖೆಯಿಂದ ಸ್ಪ್ರಿಂಕ್ಲರ್ ಸೆಟ್ ವಿತರಣೆ, ನಾಲ್ವರಿಗೆ ಪಿಎಂಕೆಎಸ್‍ವೈಡಬ್ಲ್ಯು ಡಿ.ಸಿ.2.0 ಯೋಜನೆಯಡಿ ಪರಿಕರಗಳ ವಿತರಣೆ ಮಾಡಲಾಯಿತು.
ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯಪ್ಪ, ಉಪಾಧ್ಯಕ್ಷೆ ಲಕ್ಷ್ಮೀದೇವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ತಹಸಿಲ್ದಾರ್ ರಾಜೇಶ್, ತಾಲ್ಲೂಕು ಪಂಚಾಯಿತಿ ಇಒ ಸತೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಧರ್ಮಪುರದ ಶಾಲಾ ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಕೋಲಾಟ ಸಾಂಸ್ಕøತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಧರ್ಮಪುರದ ವಾಸವಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಲ್ಲಿಸಲು ಕೌಂಟರ್‍ಗಳನ್ನು ತೆರೆದು, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ಸಮರ್ಪಕ ವ್ಯವಸ್ಥೆ ಮಾಡಲಾಗಿತ್ತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page