ಸಚಿವ ಡಿ ಸುಧಾಕರ್ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾದುದು ಸಚಿವರ ಏಳಿಗೆ ಸಹಿಸದೆ ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ:ಟಿಜೆ ವೆಂಕಟೇಶ್

by | 14/09/23 | ಜನಧ್ವನಿ


ಚಳ್ಳಕೆರೆ:ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ರವರ ಏಳಿಗೆಯನ್ನು ಸಹಿಸದ ವ್ಯಕ್ತಿಗಳಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅವರ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದಿಗೂ ಸಹ ಸಚಿವರು ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಬಂದಿಲ್ಲ ಅವರ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ ಎಂದು ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿಜೆ ವೆಂಕಟೇಶ್ ಸಚಿವ ಡಿ ಸುಧಾಕರ್ ರವರನ್ನು ಸಮರ್ಥಿಸಿಕೊಂಡರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಸಚಿವ ಸುಧಾಕರ್ ರವರು 10 ವರ್ಷಗಳ ಹಿಂದೆ ಸೆವೆನ್ ಹಿಲ್ಸ್ ಎಂಬ ಕಂಪನಿಯ ಮೂಲಕ ಜಮೀನು ಖರೀದಿ ಮಾಡಿದ್ದಾರೆ ಈಗ ಇದನ್ನು ಕೆಲವರು ವಿವಾದ ಸೃಷ್ಟಿಸಿದ್ದಾರೆ ಹಾಗೂ ಹಳೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಚಿವರ ತೇಜೋವದೆ ಮಾಡಲಾಗುತ್ತಿದೆ.

 ವಿರೋಧ ಪಕ್ಷಗಳು ರಾಜೀನಾಮೆ ಕೇಳುತ್ತಿರುವುದು ಸರಿಯಲ್ಲ ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದು ಪ್ರಕರಣದ ಸತ್ಯ ಸತ್ಯತೆ ಹೊರಬಂದು ತಪ್ಪಿಸ್ತಸ್ಥರಿಗೆ ಶಿಕ್ಷೆ ಆಗಲಿದೆ ಸಚಿವ ಸುಧಾಕರ್ ರವರು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ ಇವರು ರಾಜಕೀಯೇತರವಾಗಿ ವ್ಯವಹಾರಗಳನ್ನು ಮಾಡುತ್ತಾ ಬಂದಿದ್ದಾರೆ ಭೂಮಿ ಖರೀದಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಸಚಿವರ ಪರವಾಗಿ ಎಂದಿಗೂ ನಾವು ಅವರ ಬೆನ್ನ ಹಿಂದೆ ಇರುತ್ತೇವೆ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮೋಹನ್ ಮಾತನಾಡಿ ಡಿ ಸುಧಾಕರ್ ರವರು ಕಳೆದ 20 ವರ್ಷಗಳಿಂದ ಶಾಸಕರಾಗಿ ಸಚಿವರಾಗಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ ಎಂದಿಗೂ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾ ಬಂದಿಲ್ಲ ಎಲ್ಲಾ ವರ್ಗದ ಜನರನ್ನು ತಮ್ಮ ಬಂಧು ಬಳಗವೆಂದು ಕಾಣುವ ಮನೋಭಾವವನ್ನು ಹೊಂದಿದ್ದಾರೆ ದಲಿತ ನಾಯಕರನ್ನು ರಾಜಕೀಯವಾಗಿ ಬೆಳೆಸಿದ ಅನೇಕ ಉದಾಹರಣೆಗಳಿವೆ ಸುಧಾಕರ್ ವಿರುದ್ಧ ರಾಜಕೀಯ ಲಾಭಕ್ಕಾಗಿ ಮಾದಿಗ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯವಾದದ್ದು ಜೈನ ಸಮುದಾಯದಂತ ಚಿಕ್ಕ ಸಮುದಾಯಕ್ಕೆ ಸೇರಿದ್ದರು ಸಹ  ಸಚಿವರು ಎಂದಿಗೂ ಯಾವುದೇ ಜಾತಿ ವರ್ಗವನ್ನು ಕೀಳಾಗಿ ಕಾಣದೆ ರಾಜಕೀಯವಾಗಿ ಸಾಮಾಜಿಕವಾಗಿ ಸಮಾನ ದೃಷ್ಟಿಕೋನದಿಂದ ಕಂಡಿದ್ದಾರೆ ಗೃಹ ಸಚಿವ ಜಿ ಪರಮೇಶ್ವರ್ ರವರು ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಚೆನ್ನಮ್ಮ ನಾಗತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ್ ಕುಮಾರ್ ಮಾತನಾಡಿ ಸಚಿವ ಡಿ ಸುಧಾಕರ್ ರವರ ವಿರುದ್ಧ ಆರೋಪ ಮಾಡುವವರು ದಾಖಲೆಗಳನ್ನು ತಂದು ರಾಜ್ಯದ ಜನತೆಯ ಮುಂದೆ ಇಟ್ಟು ಕಾನೂನು ರೀತಿಯ ಹೋರಾಟ ನಡೆಸಲಿ ಕೇವಲ ಪ್ರಚಾರಕ್ಕಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ ಎಲ್ಲಾ ವರ್ಗದ ಜನರನ್ನು ತಮ್ಮವರಂತೆ ಕಾಣುವ ಸಚಿವ ಡಿ ಸುಧಾಕರ್ ತಮ್ಮ ಶಾಸಕ ಸಚಿವರ ಅವಧಿಯಲ್ಲಿ ದೀನ ದಲಿತರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ನ್ಯಾಯವನ್ನು ಒದಗಿಸಿದ್ದಾರೆ ವಿರೋಧ ಪಕ್ಷಗಳು ಪ್ರಕರಣದ ನೈಜ ಸ್ಥಿತಿ ತಿಳಿಯದೆ ಆರೋಪ ಮಾಡುವುದು ಸರಿಯಲ್ಲ ಸಚಿವರ ವಿರುದ್ಧ ಇಂತಹ ಕುತಂತ್ರ ರಾಜಕಾರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷಗಳು ಗಮನ ಹರಿಸಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್ ತಳುಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಬಳೇಶ್ ಚೌಳೂರು ಪ್ರಕಾಶ್ ತಿಪ್ಪೇಸ್ವಾಮಿ ಅಬುಬಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page