ಚಳ್ಳಕೆರೆ ಅ.5.ಗ್ರಾಮೀಣ ಭಾಗದಲ್ಲಿ ಜನರು ಶುದ್ದ ನೀರು ಕುಡಿಯಲಿ ಎಂದು ನಿರ್ಮಿಸಿರುವ ಘಟಕಗಳು ಕೆಟ್ಡು ನಿಂತಿರುವ ಬಗ್ಗೆ ದೂರುಗಳು ಕೇಳಿ ಬರುತಿದ್ದು ಕೂಡಲೆ ದಿರಸ್ಥಿ ಪಡಿಸುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ಗ್ರಾಮೀಣ ಪ್ರದೇಶದ ಜನರು ತಾಲೂಕು ಕೇಂದ್ರಗಳಿಗೆ ತಮ್ಮ ಕೆಲಸಗಳಿಗಾಗಿ ಅಲೆಯಬಾರದು ಎಂಬ ದೃಷ್ಟಿಯಿಂದ ಜನಸಂಪರ್ಕ ಸಭೆಯನ್ನು ನಡೆಸಲು ತೀರ್ಮಾನಿಸಿದೆ ಅದರಂತೆ ಪ್ರತಿವಾರ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ನಗರ ಸೇರಿದಂತೆ ಈಗಾಗಲೇ ಇದು 11ನೇ ಜನಸಂಪರ್ಕ ಸಭೆಯಾಗಿದ್ದು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದರು.

=”960″ class=”aligncenter size-full wp-image-14827″ />
ರೈತರ ಪಂಪ್ಸೆಟ್ಟುಗಳಿಗೆ ಗೆ ವಿದ್ಯುತ್ ಹರಿಸಿ: ಸಾಣಿಕೆರೆ ಗ್ರಾಮದ ಜಮೀನುಗಳಲ್ಲಿ ವಾಸಿಸುವ ರೈತರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದು ಇದರಿಂದಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಹಾಗೂ ವಾಸ ಮಾಡಲು ತೊಂದರೆಯಾಗುತ್ತಿದೆ ಇದನ್ನು ಸರಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಶಾಸಕ ಟಿ ರಘುಮೂರ್ತಿ ಇದು ಕೇವಲ ಒಂದು ಗ್ರಾಮದ ಸಮಸ್ಯೆಯಲ್ಲ ಇಡೀ ರಾಜ್ಯದ ಸಮಸ್ಯೆಯಾಗಿದ್ದು ಸರ್ಕಾರ ಇದಕ್ಕೆ ಪರಿಹಾರ ಕಂಡುಕೊಳ್ಳಲು ಸೂಕ್ತ ರೀತಿಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.
ಗೃಹ ಜ್ಯೋತಿ ಯೋಜನೆ ತಲುಪಿಸಿ: ಶಾಸಕ ಟಿ ರಘುಮೂರ್ತಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಬೆಸ್ಕಾಂ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗೃಹಜೋತಿ ಯೋಜನೆ ಜಾರಿಗೊಳಿಸಬೇಕು ನನ್ನ ಬಳಿ ದೂರು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು ಶಕ್ತಿ ಯೋಜನೆಯಿಂದ ಈಗಾಗಲೇ ಲಕ್ಷಾಂತರ ಸ್ತ್ರೀಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು ಯಾವುದೇ ಲೋಪದೋಷಗಳು ಇದುವರೆಗೂ ಕಂಡುಬಂದಿಲ್ಲ ಹಾಗೆಯೇ ಅನ್ನ ಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳ ಸೂಕ್ತ ಕಾರಣ ತಿಳಿದು ಪ್ರತೀ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.
ಆರ್ ಓ ಪ್ಲಾಂಟ್ ಗಳನ್ನು ಸರಿಪಡಿಸಿ: ಸಾಣಿಕೆರೆ ಪಂಚಾಯತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಆರ್ ಓ ಪ್ಲಾಂಟ್ ಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು ಇದಕ್ಕೆ ಅಧಿಕಾರಿಗಳ ವಿವರಣೆ ಕೇಳಿದ ಶಾಸಕರು ತಾಲೂಕಿನಲ್ಲಿ ಈಗಾಗಲೇ ಬರ ಆವರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ರೀತಿಯ ಕುಡಿಯುವ ನೀರು ಒದಗಿಸಿ ಎಂದು ತಾಕಿತು ಮಾಡಿದರು
ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಕ್ರಮದ ಯೋಜನೆ ಅಡಿಯಲ್ಲಿ ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡವರಿಗೆ ತೊಂದರೆ ನೀಡದಂತೆ ಅಲ್ಲಿನ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಿ ಹಿಂಬರಹ ಬರೆದುಕೊಟ್ಟು ಬರಲು ತಹಶೀಲ್ದಾರ್ ರೆಹಾನ್ ಪಾಷರವರಿಗೆ ತಿಳಿಸಿದರು
ಅಧಿಕಾರಿಗಳ ಬೇಜವಾಬ್ದಾರಿ ಸಹಿಸಲ್ಲ: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಅಧಿಕಾರಿಗಳ ಪಾತ್ರ ಮುಖ್ಯವಾಗುತ್ತದೆ ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಿ ಯೋಜನೆಗಳನ್ನು ಅಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಇಲ್ಲದಿದ್ದರೆ ಅವರ ವಿರುದ್ಧ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಶಾಸಕ ಟಿ ರಘುಮೂರ್ತಿ ಇಂದು ಜನಸಂಪರ್ಕ ಸಭೆ ನಡೆಸಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ಗ್ರಾಮೀಣ ಪ್ರದೇಶದ ಜನರು ತಾಲೂಕು ಕೇಂದ್ರಗಳಿಗೆ ತಮ್ಮ ಕೆಲಸಗಳಿಗಾಗಿ ಅಲೆಯಬಾರದು ಎಂಬ ದೃಷ್ಟಿಯಿಂದ ಜನಸಂಪರ್ಕ ಸಭೆಯನ್ನು ನಡೆಸಲು ತೀರ್ಮಾನಿಸಿದೆ ಅದರಂತೆ ಪ್ರತಿವಾರ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ನಗರ ಸೇರಿದಂತೆ ಈಗಾಗಲೇ ಇದು 11ನೇ ಜನಸಂಪರ್ಕ ಸಭೆಯಾಗಿದ್ದು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದರು.
ರೈತರ ಪಂಪ್ಸೆಟ್ಟುಗಳಿಗೆ ಗೆ ವಿದ್ಯುತ್ ಹರಿಸಿ: ಸಾಣಿಕೆರೆ ಗ್ರಾಮದ ಜಮೀನುಗಳಲ್ಲಿ ವಾಸಿಸುವ ರೈತರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದು ಇದರಿಂದಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಹಾಗೂ ವಾಸ ಮಾಡಲು ತೊಂದರೆಯಾಗುತ್ತಿದೆ ಇದನ್ನು ಸರಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಶಾಸಕ ಟಿ ರಘುಮೂರ್ತಿ ಇದು ಕೇವಲ ಒಂದು ಗ್ರಾಮದ ಸಮಸ್ಯೆಯಲ್ಲ ಇಡೀ ರಾಜ್ಯದ ಸಮಸ್ಯೆಯಾಗಿದ್ದು ಸರ್ಕಾರ ಇದಕ್ಕೆ ಪರಿಹಾರ ಕಂಡುಕೊಳ್ಳಲು ಸೂಕ್ತ ರೀತಿಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.
ಗೃಹ ಜ್ಯೋತಿ ಯೋಜನೆ ತಲುಪಿಸಿ: ಶಾಸಕ ಟಿ ರಘುಮೂರ್ತಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಬೆಸ್ಕಾಂ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗೃಹಜೋತಿ ಯೋಜನೆ ಜಾರಿಗೊಳಿಸಬೇಕು ನನ್ನ ಬಳಿ ದೂರು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು ಶಕ್ತಿ ಯೋಜನೆಯಿಂದ ಈಗಾಗಲೇ ಲಕ್ಷಾಂತರ ಸ್ತ್ರೀಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು ಯಾವುದೇ ಲೋಪದೋಷಗಳು ಇದುವರೆಗೂ ಕಂಡುಬಂದಿಲ್ಲ ಹಾಗೆಯೇ ಅನ್ನ ಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳ ಸೂಕ್ತ ಕಾರಣ ತಿಳಿದು ಪ್ರತೀ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.
ಆರ್ ಓ ಪ್ಲಾಂಟ್ ಗಳನ್ನು ಸರಿಪಡಿಸಿ: ಸಾಣಿಕೆರೆ ಪಂಚಾಯತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಆರ್ ಓ ಪ್ಲಾಂಟ್ ಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು ಇದಕ್ಕೆ ಅಧಿಕಾರಿಗಳ ವಿವರಣೆ ಕೇಳಿದ ಶಾಸಕರು ತಾಲೂಕಿನಲ್ಲಿ ಈಗಾಗಲೇ ಬರ ಆವರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ರೀತಿಯ ಕುಡಿಯುವ ನೀರು ಒದಗಿಸಿ ಎಂದು ತಾಕಿತು ಮಾಡಿದರು
ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಕ್ರಮದ ಯೋಜನೆ ಅಡಿಯಲ್ಲಿ ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡವರಿಗೆ ತೊಂದರೆ ನೀಡದಂತೆ ಅಲ್ಲಿನ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಿ ಹಿಂಬರಹ ಬರೆದುಕೊಟ್ಟು ಬರಲು ತಹಶೀಲ್ದಾರ್ ರೆಹಾನ್ ಪಾಷರವರಿಗೆ ತಿಳಿಸಿದರು
ಅಧಿಕಾರಿಗಳ ಬೇಜವಾಬ್ದಾರಿ ಸಹಿಸಲ್ಲ: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಅಧಿಕಾರಿಗಳ ಪಾತ್ರ ಮುಖ್ಯವಾಗುತ್ತದೆ ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಿ ಯೋಜನೆಗಳನ್ನು ಅಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಇಲ್ಲದಿದ್ದರೆ ಅವರ ವಿರುದ್ಧ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
0 Comments