ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಹಾಗೂ ಸರ್ಕಾರವನ್ನು ಬಡಿದೆಬ್ಬಿಸುವ ಕಾರ್ಯವನ್ನು ಮಾಧ್ಯಮಗಳು ನಿರಂತರವಾಗಿ ಮಾಡುತ್ತಾ ಬಂದಿವೆ. ಸಮಾಜ ಕಟ್ಟುವ ಕಾರ್ಯದಲ್ಲಿ ಪತ್ರಿಕೆಗಳ ಕೊಡುಗೆ ಅನನ್ಯವಾಗಿದೆ’ ಎಂದು ಶಾಸಕ ಟಿ.ರಘುಮೂರ್ತಿ.

by | 07/07/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜು.7ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಹಾಗೂ ಸರ್ಕಾರವನ್ನು ಬಡಿದೆಬ್ಬಿಸುವ ಕಾರ್ಯವನ್ನು ಮಾಧ್ಯಮಗಳು ನಿರಂತರವಾಗಿ ಮಾಡುತ್ತಾ ಬಂದಿವೆ. ಸಮಾಜ ಕಟ್ಟುವ ಕಾರ್ಯದಲ್ಲಿ ಪತ್ರಿಕೆಗಳ ಕೊಡುಗೆ ಅನನ್ಯವಾಗಿದೆ’ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ತಾಲೂಕು ಪಂಚಾಯತ್ ಸಂಭಾಂಗಣದಲ್ಲಿ ಕಾರ್ಯನಿರ ಪತ್ರಕರ್ತರ ಧ್ವನಿ ಸಂಘದಿಂದ ಆಯೋಜಿಸಿದ್ದ ಪತ್ರಕರ್ತರ ದಿನಾಚರಣೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪತ್ರಕರ್ತರ ಬೇಡಿಕೆಗಳಾದ ಬಸ್ ಪಾಸ್ ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯ ಮುಂತ್ರಿ ಸಿದ್ದರಾಮಾಯ್ಯನವರ ಗಮನ ತರಲಾಗುವುದು. ಪತ್ರಕರ್ತರು ಡಿವಿ ಗುಂಡಪ್ಪ ಇರರ ಆದರ್ಶ ಹಾಗೂ ಪತ್ರಿಕಾ ಧರ್ಮವನ್ನು ಅಳವಡಿಸಿಕೊಂಡು ಪತ್ರಿಕಾ ವೃತ್ತಿ ಮಾಡುವಂತೆ ತಿಳಿಸಿದರು. ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಪ್ರಾಸ್ಥವಿಕವಾಗಿ ಮಾತನಾಡಿ ಸಭೆ ಸಮಾರಂಭದಲ್ಲು ಪತ್ರಕರ್ತರಿಗೆ ಮೊದಲ ಸಾಲಿನ ಕುರ್ಚಿಗಳಲ್ಲಿ ಕೂರಿಸುತ್ತಾರೆ ಅದು ಕಾರ್ಯಕ್ರಮ ಮುಗಿಯುವತನ ನಂತರ ಅವರಸ್ಥಿತಿ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಸರಕಾರದ ಅಭಿವೃದ್ಧಿ ಕಾರ್ಯ ಸಾಧನೆಗಳ ಬಗ್ಗೆ ಪ್ರಚಾರ ಮಾಡುವಂತಹ ಪತ್ರಕರ್ತರು ಸರಕಾರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಸರಕಾರ ಶಕ್ತಿಯೋಜನೆ ಜಾರಿಗೊಳಿಸಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದೆ ಇತ್ತ ಸುಮಾರು 16 ಸಾವಿರ ಇರುವ ಪತ್ರಕರ್ತರು ಸುಮಾರು ವರ್ಷಗಳಿಂಸ ಉಚಿತ ಬಸ್ ಪಾಸ್ .ನಿವೇಶನ ಸೇರಿದಂತೆ ಹಲವುವಸೌಲಭ್ಯಗಳ ಬಗ್ಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ಪತ್ರಕರ್ತರ ಪರವಾಗಿ ಸರಕಾರ ವಿರುದ್ದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.
ಆದಿಜಾಂಬವ ನಿಗಮ ಮಂಡಳಿ ಹಾಗೂ ಪೌರ ಕಾರ್ಮಿಕ ನೌಕರರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ ಮಾಧ್ಯಮ‌ ಮಾರಾಟಕ್ಕಿದೆ ಆದರೆ ಪತ್ರಕರ್ತರು ಮಾರಾಟಕ್ಕಿಲ್ಲ ಮಾಧ್ಯಮ ರಂಗ ದುಸ್ಥರವಾಗಿದೆ ಪತ್ರಕರ್ತರಿಗೆ ಹುದ್ದೆ ಭದ್ರತೆಯಿಲ್ಲ ನಾಳೆ ಕೆಲಸಕ್ಕೆ ಬರಬೇಡ ಎಂದರೆ ಬರುವಂತಿಲ್ಲ ಎಂದು ಗೊತ್ತಿದ್ದರೂ ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿಲ್ಲ ಎಂದು ತಿಳಿಸುದರು.

ವಕೀಲರ ಸಂಘದ ಅಧ್ಯಕ್ಷ ವಕೀಲರ ಸಂಘದ ಅಧ್ಯಕ್ಷ ನಾಗರಾಜ್ ಮಾತನಾಡಿ ದೃಶ್ಯಮಾಧ್ಯಮ ಬಂದು ಹೋಗುತ್ತದೆ. ರೇಡಿಯೋ ಕೆಲಸ ಮಾಡುತ್ತಾ ಕೇಳ ಬಹುದು ಪತ್ರಕೆಗಳು ಕೇವಲ ಸುದ್ದಿ ಅಲ್ಲದೆ ಅಕ್ಷರ ಜ್ಞಾನ ಪಡೆಯುವ ಪತ್ರಿಕೆಗಳಲ್ಲಿ ಬಂದ ವಿಷಯಗಳನ್ನು ಶೇಖರಣೆ ಮಾಡಿಕೊಳ್ಳಬಹುದು ಪ್ರತಿ ನಿತ್ಯ ಪ್ರತಿಕೆಗಳನ್ನು ಓದಿದರೆ ಸ್ಪರ್ಧಾತ್ಮಕ ಪರಿಕ್ಷೆಗಳಿಗೆ ಸಹಕಾರಿಯಾಗಲಿದೆ ದೇಶದ ನಾನಾ ಮೂಲೆಗಳಲ್ಲಿನ ವಿಷಯ ತಿಳಿಯುತ್ತದೆ ಎಂದು ತಿಳಿಸಿಹದರು.
ದ್ರಾಕ್ಷರಸ ನಿಗಮದ ಅಧ್ಯಕ್ಷ ಯೋಗೇಶ್ ಬಾಬು.ಪತ್ರಕರ್ತ ಸಾಹಿತಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ವೀರಭದ್ರಪ್ಪ. ರಾಘವೇಂದ್ರ.ಗ್ರಾಪಂ‌ ಅಧ್ಯಕ್ಷ ಆನಂದ್ ಕುಮಾರ್. ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ವಿವಿಧ ಜಿಲ್ಲೆ ಹಾಗು ತಾಲೂಕುಗಳಿಂದ ಸಂಘದ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.
ಜೂ,ವಿಷ್ಟುವರ್ಧನ್ ಹಾಗೂ ಜೂ ಅಂಬರೀಶ್ ಕಲಾವಿಧರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page