ಸರಕಾರದ ಗ್ಯಾರೆಂಟಿ ಯೋಜನೆಗಳಿಂದ ಅರ್ಹಫಲಾನುಭವಿ ಮಹಿಳೆಯರು ವಂಚನೆಯಾಗದಂತೆ ಶೇ ನೂರರಷ್ಟು ಗುರಿತಲುಪಲು ಅಧಿಕಾರಿಗಳು ಶ್ರಮವಹಿಸ ಬೇಕು ಎಂದು ಶಾಸಕ ಟಿ.ರಘುಮೂರ್ತಿ.

by | 06/11/23 | ಸುದ್ದಿ


ಚಳ್ಳಕೆರೆನ.ನ.6 ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ದೃಷ್ಟಿಯಿಂದ ಸರ್ಕಾರ ಜನಸಂಪರ್ಕ ಸಭೆಗಳನ್ನು ಹಮ್ಮಿಕೊಳ್ಳುತ್ತಿದ್ದು ಗ್ರಾಮೀಣ ಭಾಗದ ಜನರು ಇದರ ಸದುಪಯೋಗನ್ನು ಪಡೆದುಕೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು

ತಾಲ್ಲೂಕಿನ ರಾಮಜೋಗಿಹಳ್ಳಿ ಹಾಗೂ ಸೋಮಗದ್ದು ಗ್ರಾಮಗಳ ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ
ಸರಕಾರದ ಗ್ಯಾರೆಂಟಿ ಯೋಜನೆಗಳಿಂದ ಅರ್ಹಫಲಾನುಭವಿ ಮಹಿಳೆಯರು ವಂಚನೆಯಾಗದಂತೆ ಶೇ ನೂರರಷ್ಟು ಗುರಿತಲುಪಲು ಅಧಿಕಾರಿಗಳು ಶ್ರಮವಹಿಸ ಬೇಕು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಆಡಳಿತದ ಕೇಂದ್ರ ಸ್ಥಳಕ್ಕೆ ಆಗಮಿಸಿದಾಗ ಅಧಿಕಾರಿಗಳು ನೆಪ ಹೇಳದೆ ಅಲೆದಾಡಿಸದೆ ಯಾವ ಕೆಲಸಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಮೊದಲೇ ತಿಳಿಸಿ ಕೆಲಸ ನಿರ್ವಹಿಸಬೇಕು ಅಧಿಕಾರಿಗಳ ವಿರುದ್ಧ ದೂರುಗಳು ಕೇಳಿ ಬಂದರೆ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ತಿಳಿಸಿದರು.

ರಾಮಜೋಗಿಹಳ್ಳಿ ಗ್ರಾಮಸ್ಥರು ಸ್ಮಶಾನಕ್ಕಾಗಿ ಮೀಸಲಿರುವ ಜಾಗವನ್ನು ಅರಣ್ಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ದೂರು ನೀಡಿದಾಗ ಶಾಸಕ ಟಿ ರಘುಮೂರ್ತಿ ಮಾತನಾಡಿ ಯಾವುದೇ ಕಾರಣಕ್ಕೂ ಸ್ಮಶಾನದ ಜಾಗಗಳನ್ನು ಅರಣ್ಯ ಅಧಿಕಾರಿಗಳು ವಶಪಡಿಸಿಕೊಳ್ಳದೆ ಆ ಜಾಗವನ್ನು ಸ್ಮಶಾನಕ್ಕೆ ಮೀಸಲಿಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು. ಅಧಿಕಾರಿಗಳು ಸರ್ಕಾರದ ಮಹತ್ವಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಪಡೆಯದ ಫಲಾನುಭವಿಗಳ ಪ್ರತಿ ಮನೆಗಳಿಗೆ ಭೇಟಿ ನೀಡಿ ಸ್ಥಳದಲ್ಲಿಯೇ ನೋಂದಾಯಿಸಿಕೊಂಡು ಯೋಜನೆಗಳಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಿ ಎಂದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೀಹಾನ್ ಪಾಷಾ, ತಾಪಂ ಇಒ ಶಶಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಉಮಾಕಾಂತ ರೆಡ್ಡಿ, ಉಪಾಧ್ಯಕ್ಷರಾದ ಸುಧಮ್ಮ ಚಂದ್ರಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ತಿಪ್ಪೇಶ್ ರೆಡ್ಡಿ, ಮುಖಂಡರುಗಳಾದ ಸುರೇಶ್ ಬಾಬು , ಪುರುಷೋತ್ತಮ್, ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *