ಸರಕಾರಿ ಪ್ರವಾಸಿ ಮಂದಿರದಲ್ಲೇ ಇಸ್ಪೀಟ್ ದಂದೆಇಬ್ಬರು ನಗರಸಭೆ ಸದಸ್ಯರು ಸೇರಿ 16 ಜನರ ಮೇಲೆ ಪ್ರಕರಣ.

by | 18/12/23 | Uncategorized


ಹಿರಿಯೂರು.ಡಿಸೆಂಬರ್‌, 18: ಸರ್ಕಾರಿ ಬಂಗಲೆಯಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಇಬ್ಬರು ನಗರಸಭೆ ಸದಸ್ಯರು ಸೇರಿದಂತೆ 16 ಮಂದಿಯನ್ನು ಬಂಧಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ ಎಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐತಿಹಾಸಿಕ ವಾಣಿ ವಿಲಾಸ ಜಲಾಶಯದ ಕ್ರಾಸ್ ಬಳಿ ಬ್ರಿಟೀಷರ ಕಾಲದಲ್ಲಿ ನಿರ್ಮಿಸಿದ್ದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ 16 ಮಂದಿ ಇಸ್ಪೀಟ್ ಆಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಬಂಧಿತರಿಂದ. 4 ಲಕ್ಷದ 37 ಸಾವಿರ ರೂಪಾಯಿ ನಗದು, ‌52 ಇಸ್ಪೀಟ್ ಎಲೆಗಳು ಹಾಗೂ ಆಟಕ್ಕೆ ಬಳಸಿದ ಬಿಳಿ ಬಟ್ಟೆಯ ಟವಲ್‌ ವಶಪಡಿಸಿಕೊಂಡಿದ್ದಾರೆ.


ನಾಸೀರ್ ವಿವಿ ಪುರ (54), ರಾಜಪ್ಪ (50) ಹಿರಿಯೂರು ನಗರ, ಚಿತ್ರಲಿಂಗೇಶ (38) ಆಲಮರದಹಟ್ಟಿ, ಕೆ. ಮಂಜುನಾಥ್ ಯಾದವ್ (30) ಜಾನುಕೊಂಡ, ಟಿ.ಮಂಜುನಾಥ್ (49) ಹಿರಿಯೂರು ಟೌನ್, ಚಿಕ್ಕಣ್ಣ (45) ತಾವರೆಕೆರೆ, ಮಣಿಕಂಠ (25) ಜೆಜಿ ಹಳ್ಳಿ, ಬಾಬು (38) ಹಿರಿಯೂರು ಟೌನ್, ಧನರಾಜ್ (42) ಹಿರಿಯೂರು ಟೌನ್, ಮಾರುತಿ (35) ಹಿರಿಯೂರು ಟೌನ್, ಮುದಿಯಣ್ಣ ( 48) ಹಿರಿಯೂರು ಟೌನ್, ರವಿ ಅಲಿಯಾಸ್ ಕಬ್ಬಡಿ ರವಿ, (36) ಹಿರಿಯೂರು ಟೌನ್ ಹಾಗೂ ನಗರಸಭೆ ಸದಸ್ಯರಾದ ಅಜೇಯ್ ಕುಮಾರ್ (ಅಜ್ಜಪ್ಪ), ಅನಿಲ್ ಕುಮಾರ್ ಬಂಧಿತ ಆರೋಪಿಗಳಿಗಿದ್ದಾರೆ.

ಸಚಿವರ ಬೆಂಬಲಿಗರು: ಇಸ್ಪೀಟ್ ಆಟದಲ್ಲಿ ತೊಡಗಿರುವ ನಗರಸಭೆ ಸದಸ್ಯರಾದ ಅಜೇಯ್ ಕುಮಾರ್ ಹಾಗೂ ಅನಿಲ್ ಕುಮಾರ್ ಇಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಬೆಂಬಲಿಗರಾಗಿದ್ದಾರೆ. ಇಸ್ಪೀಟ್ ಆಟ ಆಡಲು ಜಿಲ್ಲಾ ಉಸ್ತುವಾರಿ ಸಚಿವ ಕೃಪಾಕಟಾಕ್ಷ ಇದಿಯೇ ಹೇಗೆ ಎನ್ನಲಾಗುತ್ತಿದೆ. ಸಚಿವ ಡಿ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಇಸ್ಪೀಟ್ ಆಟ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಸಚಿವರ ಉತ್ತರವೇನು ಎಂಬುದು ತಿಳಿಯಬೇಕಿದೆ.

ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಜೂಜಾಟ ಆಡಲು ಅನುಮತಿ ಕೊಟ್ಟಿದ್ದು ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ವಾಣಿವಿಲಾಸ ಜಲಾಶಯದ ಬಳಿ ಬ್ರಿಟಿಷರ ಕಾಲದಲ್ಲಿ ನಿರ್ಮಿಸಿದ್ದ ಐತಿಹಾಸಿಕ ಬಂಗಲೆಯನ್ನು ಅತಿಥಿಗಳು ತಂಗುವುದಕ್ಕೆ ನಿರ್ಮಾಣ ಮಾಡಲಾಗಿದೆ. ಆದರೆ ಇಸ್ಪೀಟ್ ಆಡಲು ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಕಾಣತೊಡಗಿದೆ.

ಈ ಸಂಬಂಧ ಹಿರಿಯೂರು ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿ ಅಧಿಕಾರಿಗಳು ಸ್ಪಷ್ಟಪಡಿಸಬೇಕು. ಏಕಕಾಲದಲ್ಲಿ ಅಥವಾ 16 ಮಂದಿ ಒಳಗಡೆ ಪ್ರವೇಶಿಸಿ ಒಂದೇ ಕಡೆ ಸೇರಲು ಅವಕಾಶ ಕೊಟ್ಟಿದ್ದು ಹೇಗೆ?, ಅಲ್ಲದೆ ಐಬಿ ನೋಡಿಕೊಳ್ಳಲು ಉಸ್ತುವಾರಿ ನೇಮಕ ಮಾಡಲಾಗಿರುತ್ತದೆ. ಆತನ ಗಮನಕ್ಕೆ ಇದು ಬರಲಿಲ್ಲವೇ ಎಂಬ ಹತ್ತು ಹಲವಾರು ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿವೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page