ಸರಕಾರ ಯೋಜನೆಗಳನ್ನು ಸಕಾಲಕಾಲಕ್ಕೆ ಅರ್ಹರಿಗೆ ತಲುಪಿಸುವಂತೆ ಜಂಟಿ ಕೃಷಿ ನಿರ್ಧೇಶಕ ಆಡಳೀತ ಅಧಿಕಾರಿ ಡಾ.ಮಂಜುನಾಥ್.

by | 29/06/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜೂ.29 ತಾಲೂಕಿನ ಆರೋಗ್ಯ ,ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗೆ 2024-25 ನೇ ಸಾಲಿನತಾಲೂಕು ವಲಯ ವೇತನ-ವೇತನೇತರ ಕಾರ್ಯಕ್ರಮಗಳಿಗೆ ಬಿಡುಗಡೆಯಾದ 181 ಕೋಟಿ ರೂಗಳಿಗೆ ಆಡಳಿತ ಅಧಿಕಾರಿ ಹಾಗೂ ಜಂಟಿ ಕೃಷಿ ನಿರ್ದೇಶಕ ಡಾ, ಮಂಜುನಾಥ್ ಅನುಮೋದನೆ ನೀಡಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಆಯೋಜಿಸಿದ್ದ ಸಮಾನ್ಯ ಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾಹಿತಿ ಪಡೆದರು.
ಬಿಇಒ ಕೆ.ಎಸ್ ,ಸುರೇಶ್ ಮಾತನಾಡಿ ಮಾತನಾಡಿ ಶಿಕ್ಷಣ ಇಲಾಖೆಗೆ ಬಿಡುಗಡೆಯಾದ 143 ಕೋಟಿ ರೂ ಶಿಕ್ಷಕರ ಹಾಗೂ ಕಚೇರಿ ಸಿಬ್ಬಂದಿಗಳ ವೇತನಕ್ಕೆ ಖರ್ಚುಮಾಡಲಾಗುವುದು, ಕಳೆದ ಮೂರು ವರ್ಷಗಳಿಂದ ಪ್ರೌಢಶಾಲೆಗಳ ನಿರ್ವಹಣ ವೆಚ್ಚ ಬಾರದೆ ಬಾರದೆ ಇರುವುದು ನಿರ್ವಹಣೆ ಮಾಡುವುದು ಕಷ್ಟವಾಗಿದೆ ಚಿತ್ರದುರ್ಗ ಜಿಲ್ಲೆ ಹೊರತು ಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಬರುತ್ತಿದೆ ಕಳೆ ಕೋವಿಡ್ ನಿಂದ ಬರುತ್ತಿಲ್ಲ ಈ ಬಗ್ಗೆ ಸರಕಾರಕ್ಕೆ ವರದಿ ಕಳಿಸಲಾಗಿದೆ ಎಂದು ತಿಳಿಸಿದರು.

ತಾಪಂ ಇಒ ಶಶಿಧರ್ ಮಾತನಾಡಿ ತಾಲೂಕಿನ ಸರಕಾರಿ ಶಾಲೆಗಳ ಕಟ್ಟಡಗಳು ಶಿಥಿಲವಾಗಿದ್ದು ರಾಜ್ಯ ಸರಕಾರ ಬರಗಾಲ ಎಂದು ಘೋಷಣೆ ಮಾಡಿರುವುದರಿಂದ ಮಳೆ ಬಂದರೆ ಸೋರುತ್ತಿರುವ ಶಾಲೆಗಳ ದುರಸ್ಥಿಗೆ ಪ್ರಕೃತಿ ವಿಕೋಪದ ಪ್ಲಾನಲ್ಲಿ ಸೇರಿಸುವಂತೆ ತಿಳಿಸಿದರು.
ಬಿಇಒ ಸುರೇಶ್ ಮಾತನಾಡಿ ಈಗಾಗಲೆ ಶಿಥಿಲವಾದ ಕಟ್ಟಡಗಳ ಬಗ್ಗೆ ಸರಕಾರಕ್ಕೆ ಮಾಹಿತಿ ನೀಡಲಾಗಿದೆ ಕೆಲವು ಕಡೆ ಹೊಸ ಕಟ್ಟಡಗಳ ನೀಡುವುದಾಗಿ ಶಾಸಕರು ತಿಳಿಸಿದ್ದಾರೆ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ ತಾಲೂಕಿನ ಶಾಲೆಯ ಮಕ್ಕಳಿಗೆ ಬಿಸಿಯೂಟ ಸೇವನೆ ಮಾಡಲು ಬೋಜನಾ ಕೊಠಡಿ ನಿರ್ಮಸುವಂತೆ ಈಗಾಗಲೆ ಪಟ್ಟಿ ನೀಡಲಾಗಿದೆ. ಪರಶುರಾಂಪುರ ದಲ್ಲಿ ಸುಂದರವಾದ ಬೋಜನಾ ಕೊಠಡಿನಿರ್ಮಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಆಡಳೀತಾಧಿಕಾರಿ ಡಾ.ಮಂಜುನಾಥ್ ಮಾತನಾಡಿ ನರೇಗಾ ಯೋಜನೆಯಡಿಯಲ್ಲಿ ನಿರ್ಮಿಸಿಕೊಡಲು ಅವಕಾಶ ಇದೆ ಎಸ್ ಡಿ ಎಂಸಿ ಸದಸ್ಯರು ಇಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ನಿರ್ಮಿಸಲು ಗ್ರಾಪಂ ಕಚೇರಿಗೆ ಭೇಟಿ ನೀಡಿ ಕ್ರಿಯಾ ಯೋಜನೆ ರೂಪಿಸುವಂತೆ ತಿಳಿಸಿದರು.
ಬಿಸಿಎಂ , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುವಾಗ ವಸತಿ ನಿಯಲಗಳ ಸ್ವಚ್ಚತೆ , ಕುಡಿಯುವ ನೀರು, ಶೌಚಾಲಯ ಸ್ವಚ್ಚತೆ ರುಚಿ, ಶುಚಿಯಾದ ಊಟ ನೀಡ ಬೇಕು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾದೆ ನೀವೆ ಹೊಣೆ ಎಂದು ಇಒ ಶಶಿಧರ್ ಹಾಗೂ ಡಾ.ಮಂಜುನಾಥ್ ತಿಳಿಸಿದರು.
ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಸೋಮವಾರ ಬೆಳಗ್ಗೆ 11 ಗಂಟೆಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ರೈತರೊಂದಿಗೆ ಸಂವಾದ ಹಾಗೂ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನಡೆಲಿದ್ದು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ರೈತಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕ ಹಾಗೂ ತಾಪಂ ಆಡಳೀತ ಅಧಿಕಾರಿ ಡಾ.ಮಂಜುನಾಥ್ ತಿಳಿಸಿದರು.

ಸಭೆಯಲ್ಲಿ ಸಹಾಯಕ ಲೆಕ್ಕಾಧಿಕಾರಿ ಕೆಂಚಪ್ಪ, ತಾಪಂ ಸಹಾಯಕ ನಿರ್ದೇಶಕ ಸಂಪತ್, ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ದಯಾನಂದ್ ಸಹಾಯಕ ಕೃಷಿನಿರ್ದೇಶಕ ಡಾ,ಅಶೋಕ್, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಕಾರ್ಮಿಕ ನಿರೀಕ್ಷಕಿ ಕುಸುಮ,ವಿವಿಧ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page