ಸರಣಿ ಅಪಘಾತ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು.

by | 13/09/23 | ಅಪಘಾತ


ಚಿಕ್ಕಮಗಳೂರು: ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಡೆದಿದೆ.
ಮೃತಪಟ್ಟವರನ್ನು ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಎಂದು ಗುರುತಿಸಲಾಗಿದೆ. ಈ ದಂಪತಿಯ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದ ವ್ಯಕ್ತಿಗೆ ಸಹ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಬೈಕ್‌ಗೆ ಟಿಪ್ಪರ್ ಲಾರಿ ಚಾಲಕ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಎನ್ನಲಾಗಿದೆ

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *