ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಿ: ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಕಂದಾಯ ಇಲಾಖೆ

by | 17/09/23 | ಜನಧ್ವನಿ


ಆದೇಶ ಪ್ರತಿ
ಬೆಂಗಳೂ ಸೆ16.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಆದೇಶ
ಆದೇಶ ಪಾಲಿಸದಿದ್ದಲ್ಲಿ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ ಕಂದಾಯ ಇಲಾಖೆ.
ಸರ್ಕಾರ ನಿಗದಿಪಡಿಸಿರುವ ಸಮಯದಲ್ಲಿ ಕಚೇರಿಗೆ ಆಗಮಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಕಂದಾಯ ಇಲಾಖೆಯು ಅಧಿಕಾರಿಗಳು, ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸೆ.16ರಂದು ಆದೇಶ ಹೊರಡಿಸಿದ್ದು, ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಆದೇಶದಲ್ಲಿ ಅಧಿಕಾರಿಗಳ ಲೋಷದೋಷಗಳ ಬೆಟ್ಟು ಮಾಡಿರುವ ಅವರು, “ಹಲವಾರು ಬಾರಿ ಕಂದಾಯ ಇಲಾಖೆಯ ಅಧೀನ ಶಾಖೆಗಳಿಗೆ ನಾನು ಖುದ್ದಾಗಿ ಪೂರ್ವಾಹ್ನ 10.45 ಗಂಟೆಗೆ ತಪಾಸಣೆಗೆಂದು ಭೇಟಿ ನೀಡಿದ್ದೆ. ಆಗ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯಕ್ಕೆ ಇನ್ನೂ ಹಾಜರಾಗದಿರುವುದು, ಅಲ್ಲದೇ ಸಾಯಂಕಾಲ ಕಚೇರಿ ತುರ್ತು ಕೆಲಸ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ಕರೆದಾಗಲೂ ಕಚೇರಿಯಿಂದ ಅತೀ ಬೇಗ ನಿರ್ಗಮಿಸಿರುವುದು ಕಂಡು ಬಂದಿರುತ್ತದೆ. ಇದರಿಂದಾಗಿ ಕಚೇರಿ ಕೆಲಸಕ್ಕೆ, ಅಡಚಣೆಯುಂಟಾಗುತ್ತಿರುತ್ತದೆ” ಎಂದು ಉಲ್ಲೇಖಿಸಿದ್ದಾರೆ.
ಅಲ್ಲದೇ, “ಕಚೇರಿಉಲ್ಲೇಖಿಸಿದ್ದಾರೆ ಸಾರ್ವಜನಿಕರು ಟಪಾಲು, ಕಡತ ಚಲನವಲನ ಚಾರಣೆಗಾಗಿ ಬಂದಾಗ ವಿನಾಕಾರಣ ಅವರೊಂದಿಗೆ ಕಾಲಹರಣ ಮಾಡುತ್ತಿರುವುದು, ಗಂಟೆಗಟ್ಟಲೆ ಟೀ, ಕಾಫಿ, ಉಪಾಹಾರಕ್ಕೆಂದು ಕಚೇರಿ ಬಿಟ್ಟು ಹೋಗುವುದು, ಸಂತೆ ಬೀದಿಗಳಲ್ಲಿ ಓಡಾಡುತ್ತಿರುವುದು ಮುಂತಾದವುಗಳು ನನ್ನ ಗಮನಕ್ಕೆ ಬಂದಿದೆ. ಇನ್ನು ಮುಂದೆ ಈ ರೀತಿ ಪುನರಾವರ್ತನೆಯಾದಲ್ಲಿ ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಆದೇಶದಲ್ಲಿ ಉಲ್ಲೇಖಿಸಿದ
ಕಂದಾಯ ಇಲಾಖೆಯ ಎಲ್ಲ ನೌಕಕರು ಪ್ರತಿ ದಿನ ಕಚೇರಿಗೆ ಪೂರ್ವಾಹ 10.30ರೊಳಗಾಗಿ ಕಡ್ಡಾಯವಾಗಿ ಹಾಜರಿರುವುದು ಹಾಗೂ ಸಾಯಂಕಾಲ ಕಚೇರಿಯಿಂದ ತೆರಳುವಾಗ ತಮ್ಮ ಶಾಖೆಯ ಸಂಬಂಧಪಟ್ನ, ಜಂಟಿ,ಉಪ ಕಾರ್ಯದರ್ಶಿಯವರ ಅನುಮತಿ ಪಡೆದು ಕಚೇರಿಯಿಂದ ತೆರಳುವಂತೆಯೂ ಸ್ಪಷ್ಟವಾಗಿ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದ್ದಾರೆ.ಈ ಸೂಚನೆಗಳನ್ನು ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದೂ ಕೂಡ ಎಚ್ಚರಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page