ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲಿ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ 

by | 31/05/24 | ಶಿಕ್ಷಣ

ಚಳ್ಳಕೆರೆ: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಬಡವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಉಚಿತ ಶಿಕ್ಷಣ ನೀಡುತ್ತಿದ್ದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಅಭಿಪ್ರಾಯ ಪಟ್ಟರು. 

ತಾಲೂಕಿನ ಕೆಂಚವೀರನಹಳ್ಳಿ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಶಿಕ್ಷಣವೆಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕಾಗಿದ್ದು ಯಾವುದೇ ವಿದ್ಯಾರ್ಥಿಯು ಶಾಲೆಯಿಂದ ಹೊರಗೆ ಉಳಿಯದೆ ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಾಕ್ಷರತಾ ಸಮಾಜವನ್ನು ನಿರ್ಮಿಸುವತ್ತ ಹೆಜ್ಜೆ ಹಾಕಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಜಮೀನು ಕೆಲಸಗಳಿಗೆ ಅಥವಾ ಇತರೆ ದುಡಿಮೆ ಮಾರ್ಗ ಅನುಸರಿಸದೆ ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಉಚಿತ ಹಾಗೂ ಕಡ್ಡಾಯ ಶಿಕ್ಷಣವನ್ನು ನೀಡಿ ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿ ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು. 

ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಮಾತನಾಡಿ ಗ್ರಾಮೀಣ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಮ್ಮ ಶಾಲೆಯಲ್ಲಿ ಉತ್ತಮ ಕೊಠಡಿ ವ್ಯವಸ್ಥೆ ಇದ್ದು ಗ್ರಂಥಾಲಯ ಉಚಿತ ಸಮವಸ್ತ್ರ ಪಠ್ಯಪುಸ್ತಕ  ಶೂ ಬಿಸಿಊಟ ಕ್ಷೀರ ಭಾಗ್ಯ ಬಾಳೆಹಣ್ಣು ಮೊಟ್ಟೆ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು ಗ್ರಾಮಕ್ಕೆ ಹಾಗೂ ಪೋಷಕರಿಗೆ ಉತ್ತಮ ಹೆಸರು ತರುವತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಶಾಲಾ ದಾಖಲಾತಿ ಆಂದೋಲನವನ್ನು ಕೈಗೊಳ್ಳಲಾಗಿತ್ತು. 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ತಿಪ್ಪಮ್ಮ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಕೆ ಟಿ ಸಂಪತ್ ಕುಮಾರ್ ಇಸಿಓ ಗಿರೀಶ್ ಅಕ್ಷರ ದಾಸೋಹದ ತಿಪ್ಪೇಸ್ವಾಮಿ ಸಿ ಆರ್ ಪಿ ರಾಧಾ, ನಾಗರಾಜ್, ಪ್ರಕಾಶ್ ಶಿಕ್ಷಕರಾದ ಎನ್ ಮಲ್ಲೇಶ್ ರಾಜಶೇಖರ್, ಬಸವರಾಜ್, ಗ್ರಾಮಸ್ಥರಾದ ಮಹಾಂತೇಶ್, ರಾಜಣ್ಣ, ಚಿದಾನಂದ, ಅಶೋಕ್, ಬಸವರಾಜ, ಮೂರ್ತಪ್ಪ , ಪ್ರಕಾಶ್ ವಿದ್ಯಾರ್ಥಿಗಳಾದ ಮನು ಅಭಿಷೇಕ್ ಶ್ರೀಧರ್ ದಿನೇಶ್ ಆದರ್ಶ ಶ್ರೀನಿವಾಸ್ ಸತೀಶ್ ಮನೋಹರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು,ಓದುಗರ ಸಂಖ್ಯೆ ಕ್ಷೀಣಿಸುತ್ತದೆ ಜಿಲ್ಲಾಕ.ಸಾ.ಪ.ಅಧ್ಯಕ್ಷ ಶಿವಸ್ವಾಮಿ

ಹಿರಿಯೂರು : ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು, ದಿನೇ ದಿನೇ ಓದುಗರ ಸಂಖ್ಯೆ ಕಡಿಮೆ...

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page