ಸರ್ಕಾರಿಶಾಲೆಗಳ ಸಬಲೀಕರಣ ಕಾರ್ಯದಲ್ಲಿ ಸಮುದಾಯ ಹಾಗೂ ಹಿರಿಯ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿರುತ್ತದೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಪ್ರಶಂಸೆ

by | 10/10/23 | ಶಿಕ್ಷಣ


ಹಿರಿಯೂರು :
ಸರ್ಕಾರಿ ಶಾಲೆಗಳ ಸಬಲೀಕರಣ ಕಾರ್ಯದಲ್ಲಿ ಸಮುದಾಯ ಹಾಗೂ ಹಿರಿಯ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿರುತ್ತದೆ. ಈ ನಿಟ್ಟಿನಲ್ಲಿ ಈ ಶಾಲೆಯ ಶಿಕ್ಷಕರು ಸಮುದಾಯದ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಯನ್ನು ನವೀಕರಣ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.
ತಾಲ್ಲೂಕಿನ ಕಾಟನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆಯಾಗಿ 60 ವರ್ಷ ಕಳೆದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಜ್ರ ಮಹೋತ್ಸವ ಹಾಗೂ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳಿಂದ ನವೀಕರಣಗೊಂಡ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಶಾಲೆಯ ಶಿಕ್ಷಕರು ಸಮುದಾಯದ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಯನ್ನು ನವೀಕರಣದ ಜೊತೆಗೆ ಈ ಸರ್ಕಾರಿ ಶಾಲೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ನಂದ ರವರಿಗೂ ಹಾಗೂ ಗ್ರಾಮಸ್ಥರಿಗೂ ಸಹ ಈ ಸಂದರ್ಭದಲ್ಲಿ ಇಲಾಖೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.
ರಾಜ್ಯದ 39 ಸರ್ಕಾರಿ ಶಾಲೆಗಳ ಸೌಂದರೀಕರಣ ಮಾಡಿದ ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ನಂದಾಹೂವಿನಹೊಳೆ ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಯಾದ ತಾನು ಸರ್ಕಾರಿ ಶಾಲೆಗಳ ಸೌಂದರ್ಯ ಹೆಚ್ಚಿಸುವ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದು, ಇನ್ನೂ ಹೆಚ್ಚಿನ ಸಹಕಾರವನ್ನು ಕಾಟನಾಯಕನಹಳ್ಳಿ ಶಾಲೆಗೆ ನೀಡುವುದಾಗಿ ಭರವಸೆ ನೀಡಿದರು.
ಜೆಜೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಲ್ತಾಫ್ ಅಹಮದ್ ರವರು ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಲಭ್ಯವಿರುವ ಯೋಜನೆ ಅಡಿಯಲ್ಲಿ ನಮ್ಮ ಕಾಟನಾಯಕಹಳ್ಳಿ ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ನವೀಕರಣ ಕಾರ್ಯಕ್ಕೆ ಕೊಡುಗೆ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಶಾಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಕರ್ತವ್ಯ ನಿರ್ವಹಿಸಿದ ಎಲ್ಲಾ ಶಿಕ್ಷಕರನ್ನು ಆಹ್ವಾನಿಸಿ ಅಭಿನಂದನೆ ಸಲ್ಲಿಸಲಾಯಿತು. ವಜ್ರ ಮಹೋತ್ಸವದ ಹಿನ್ನೆಲೆಯಲ್ಲಿ ಶಾಲೆ ನಡೆದು ಬಂದ ಹಾದಿ, ಶಾಲಾ ಕೊಠಡಿಗಳ ನವೀಕರಣ ಕಾರ್ಯಕ್ಕೆ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳನ್ನು ಸ್ಮರಿಸಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ತಿರುಮಲೇಶ್, ಜಯಮ್ಮ, ನಾಗರಾಜ್, ಪೂಜಾರ್ ಸಣ್ಣಪ್ಪ, ಕಾಳಿಬಾಯಿ, ಚಂದ್ರನಾಯಕ್, ಮಾಜಿ ತಾಲ್ಲೂಕು ಪಂಚಾಯಿತಿ ಸ್ಥಾಯಿಸಮಿತಿ ಅಧ್ಯಕ್ಷರಾದ ತಿಪ್ಪಮ್ಮ, ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ವೇದಮೂರ್ತಿಯವರು, ಶಿಕ್ಷಣ ಸಂಯೋಜಕರುಗಳಾದ ಗಿರೀಶ್, ರಂಗಸ್ವಾಮಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಟಿ.ಕೃಷ್ಣಮೂರ್ತಿ ಹಾಗೂ ಎಲ್ಲಾ ಸದಸ್ಯರುಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಸ್.ಮಂಜುನಾಥ್ ರವರು ಹಾಗೂ ಗೌರವಾಧ್ಯಕ್ಷರಾದ ರಮೇಶ್ ನಾಯಕ್ ರವರು ಖಜಾಂಚಿಗಳಾದ ಶಿವಶಂಕರರವರು, ಮಹಾದಾನಿಗಳಾದ ಬೆಂಗಳೂರು ರೋಟರಿ ಸದಸ್ಯರಾದ ರವಿಕುಮಾರ್, ಸುವರ್ಣ ಎಂಟರ್ ಪ್ರೈಸಸ್ ಮಾಲಿಕರಾದ ರಂಗಸ್ವಾಮಿ,ಲಕ್ಷ್ಮಿರಂಗನಾಥ ಬ್ಯಾಟರಿ ಹೌಸ್ ನ ಉಮೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಬಿ.ಆರ್.ಶ್ರೀನಿವಾಸ್, ಶಾಲೆಯ ಶಿಕ್ಷಕರುಗಳಾದ ಹಾಲೇಶ್ ಮತ್ತು ಸೌಮ್ಯ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಸದಸ್ಯರುಗಳು ಊರಿನ ಗ್ರಾಮಸ್ಥರು ದಾನಿಗಳು ಶಿಕ್ಷಣ ಪ್ರೇಮಿಗಳು ಶಿಕ್ಷಣ ಆಸಕ್ತರು ಹಿರಿಯ ವಿದ್ಯಾರ್ಥಿಗಳು ಊರಿನ ಗ್ರಾಮಸ್ಥರು, ಕಾರ್ಯನಿರ್ವಹಿಸಿದ ಶಿಕ್ಷಕರುಗಳು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *