ಚಿತ್ರದುರ್ಗ ಸೆ.02:
ನಗರದ ಜಿಲ್ಲಾ ಪಂಚಾಯತ್ ಹತ್ತಿರದ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಬಾಲಮಂದಿರಕ್ಕೆ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳಿಗೆ ಪೌಷ್ಠಿಕ ಹಾಗೂ ಗುಣಮಟ್ಟದ ಆಹಾರ ನೀಡಬೇಕು. ಮಕ್ಕಳ ಸುರಕ್ಷತೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಉತ್ತಮ ಶೈಕ್ಷಣಿಕ ಪ್ರಗತಿ ಸಾಧಿಸಲು ನಿಲಯ ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಜಿಲ್ಲಾ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್, ತಹಶೀಲ್ದಾರ್ ನಾಗವೇಣಿ ಸೇರಿದಂತೆ ಮತ್ತಿತರರು ಇದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments