ಸರ್ಕಾರಿ ಶಾಲೆಗಳಿಗೆ ಸಮರ್ಪಣ ಸಂಸ್ಥೆಯಂತಹ ವಿವಿಧ ಸಂಸ್ಥೆಗಳು ನೀಡುತ್ತಿರುವ ಸಹಕಾರ ಅನನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ

by | 24/06/24 | ಶಿಕ್ಷಣ


ಹಿರಿಯೂರು :
ನಗರದ ಸರ್ಕಾರಿ ಶಾಲೆಗಳಿಗೆ ಸಮರ್ಪಣ ಸಂಸ್ಥೆಯಂತಹ ವಿವಿಧ ಸಂಸ್ಥೆಗಳು ನೀಡುತ್ತಿರುವ ಸಹಕಾರ ಅನನ್ಯವಾದದ್ದು. ಲೇಖನ ಸಾಮಗ್ರಿಗಳ ಜೊತೆಗೆ ಆಂಡ್ರಾಯ್ಡ್ ಟಿವಿ ಪ್ರೊಜೆಕ್ಟರ್ ಅಂತಹ ದೃಶ್ಯ ಮಾಧ್ಯಮದ ಕೊಡುಗೆಗಳು ಮಕ್ಕಳ ಕಲಿಕೆಗೆ ಸಹಕಾರಿಯಾಗುತ್ತವೆ ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಅವರು ಹೇಳಿದರು.
ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಕ್ಕರೆ ಕಾರ್ಖಾನೆ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಮರ್ಪಣ ಟ್ರಸ್ಟ್ ನಾಗರಭಾವಿ ಇವರ ಕೊಡುಗೆಯನ್ನು ಶ್ಲಾಘಿಸಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಮರ್ಪಣ ಸಂಸ್ಥೆಯ ಅಧ್ಯಕ್ಷರಾದ ಮಧುಸೂದನ್ ರವರು ಮಾತನಾಡಿ, ಕೊರೊನಾ ಅವಧಿಯಿಂದಲೂ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡುತ್ತಾ ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸುವತ್ತ ನಮ್ಮ ಸಮರ್ಪಣಾ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ ಎಂಬುದಾಗಿ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗದ ಕೆರೆ ಕೋಡಿಹಟ್ಟಿ, ಆನೆಸಿದ್ರಿ, ಗೊಲ್ಲರಹಟ್ಟಿ, ಸಮುದ್ರದಹಳ್ಳಿ, ಲಕ್ಕವನಹಳ್ಳಿ, ಗೌಡನಹಳ್ಳಿ ಹಾಗೂ ನಗರ ವ್ಯಾಪ್ತಿಯ ವೇದಾವತಿ ನಗರ ಕನ್ನಡ ಶಾಲೆ, ಕೆಇಬಿ ಶಾಲೆ ಹಾಗೂ ಸಕ್ಕರೆ ಕಾರ್ಖಾನೆ ಶಾಲೆಯ ಒಟ್ಟು 512 ವಿದ್ಯಾರ್ಥಿಗಳಿಗೆ 2560 ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಶಶಿಧರ, ಸಿ. ಬಿ. ಆರ್. ಪಿ.ಪ್ರಸನ್ನ ಕುಮಾರ ಪಿ., ಸಕ್ಕರೆ ಕಾರ್ಖಾನೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಮೇಶ್ ನಾಯಕ್.ಎಂ. , ಜಿಲ್ಲಾ ಸಂಘದ ಸಹಕಾರ್ಯದರ್ಶಿಗಳಾದ ಶಿವಮೂರ್ತಿ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಶ್ರೀಮತಿ ಲೋಕಮ್ಮ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಎನ್.ಪಿ. ಮಹೇಶ್, ಸಮರ್ಪಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಹೇಮಲತಾ , ಅಭಿಷೇಕ್ ಹಾಗೂ ಸಾಮಗ್ರಿ ಸ್ವೀಕರಿಸಿದ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಶಾಲೆಯ ಸಿಬ್ಬಂದಿ ವರ್ಗದವರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕರಾದ ರಮೇಶ್ ನಾಯ್ಕ ಸ್ವಾಗತಿಸಿದರು. ಎನ್. ಪಿ. ಮಹೇಶ್ ನಿರೂಪಿಸಿದರು. ಕೊನೆಯಲ್ಲಿ ಮಾಜಿ ಕಾರ್ಯದರ್ಶಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವೀರೇಶ್ ವಂದನಾರ್ಪಣೆ ನೆರವೇರಿಸಿದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page