ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ಆಂಗ್ಲ ಮಾಧ್ಯಮ ಹಾಗೂ ಖಾಸಗಿ ಶಾಲೆಗಳ ಸೆಳೆತಕ್ಕೆ ಒಳಗಾಗಿ ಸರ್ಕಾರಿ ಶಾಲೆಗಳನ್ನು ತುಚ್ಯ ಮನೋಭಾವದಿಂದ ಕಾಣುವ ಪೋಷಕರ ಮುಂದೆ ತಾಲೂಕಿನ ಕೆಂಚವೀರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಧನ ಸಹಾಯದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಗುರುತಿನ ಚೀಟಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಿರುವುದು ಶ್ಲಾಘನೀಯವಾದ ವಿಷಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ತಿಳಿಸಿದರು.
ತಾಲೂಕಿನ ಕೆಂಚವೀರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿ ಹಾಗೂ ಬೆಲ್ಟ್ ಗಳನ್ನು ವಿತರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳು ಅಭಿವೃದ್ಧಿ ಕಾಣಬೇಕಾದರೆ ಪೋಷಕರ ಸಹಕಾರವು ಅಗತ್ಯವಾಗಿದೆ ವಿದ್ಯಾರ್ಥಿಗಳ ಪೋಷಕರೇ ಮುಂದೆ ಬಂದು ಧನಸಹಾಯ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗಲಿದ್ದು ಮುಂದಿನ ದಿನಗಳಲ್ಲಿ ಈ ಶಾಲೆಯ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಮಾತನಾಡಿ ಕೆಂಚವೀರನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಲಿಯುತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಪೂರಕ ವಾತಾವರಣ ಕಲ್ಪಿಸಿದ್ದು ಶಾಲೆಯ ಶಿಕ್ಷಕರ ಹಾಗೂ ಗ್ರಾಮಸ್ಥರ ಸಹಕಾರದಿಂದ ಇಂದು ಶಾಲೆಯಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದೆ ಗ್ರಾಮಸ್ಥರ ಸಹಕಾರದಿಂದಲೇ ಶಾಲೆಯ ಅಭಿವೃದ್ಧಿ ಕಾಣುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಕೆ ಟಿ ಸಂಪತ್ ಕುಮಾರ್ ಗ್ರಾ. ಪಂ ಸದಸ್ಯರಾದ ತಿಪ್ಪಮ್ಮ ಮಹಾಂತೇಶ್ ದೇವರಾಜ್ ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ k o ಮಹಂತೇಶ್ ಪ್ರಹ್ಲಾದ ಬಸಟ್ಟಿ ಬಸವರಾಜ ಪ್ರಕಾಶ್ ರಾಜಣ್ಣ ಹಾಗೂ ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
0 Comments