ಸರ್ವೋದಯ ಮಂಡಲ ಚಿತ್ರದುರ್ಗ ಶಾಖೆ ರಚನೆ – ಕಸವನಹಳ್ಳಿರಮೇಶ

by | 05/12/23 | ಸುದ್ದಿ


ಚಿತ್ರದುರ್ಗ ಡಿ.5 ಇತ್ತೀಚಿನ ದಿನಗಳಲ್ಲಿ ಗಾಂಧಿ ತತ್ವಗಳು ಕಣ್ಮರೆಯಾಗುತ್ತಿರುವುದರಿಂದ ಕರ್ನಾಟಕ ಸರ್ವೋದಯ ಸಂಘ ರಚನೆಯಾಗಿದ್ದು ಈ ಮೂಲಕ ಶಾಲಾ ಕಸಲೇಜ್ .ಜೈಲ್ .ಸಾರ್ವಜನಿಕ ಸ್ಥಳಗಳಲ್ಲಿ ಗಾಂಧಿತತ್ವಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಗಾಂಧಿ ತತ್ವಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ರೈತ ಮುಖಂಡ ಹೋರಾಟಗಾರ ಕಸವನಹಳ್ಳಿ ರಮೇಶ್ ಜನಧ್ವನಿ ಡಿಜಿಡಲ್ ಮೀಡಿಯಾ ಗೆ ಮಾಹಿತಿ ನೀಡಿದರು. 5.12.2023ರಂದು ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಸರ್ವೋದಯ ಮಂಡಲ ತುಮಕೂರು ಜಿಲ್ಲಾಧ್ಯಕ್ಷರಾದ ಆರ್ ವಿ ಪುಟ್ಟ ಕಾಮಣ್ಣ,ನವರ ಅಧ್ಯಕ್ಷತೆಯಲ್ಲಿ ಸಮಾನ ಮನಸ್ಕ ಗಾಂಧಿ ಚಿಂತಕರು ಸೇರಿ ಜಿಲ್ಲಾ ಸಮಿತಿ ರಚನೆ ಮಾಡಲಾಯಿತು ಅಧ್ಯಕ್ಷರಾಗಿ ಡಾ: ಎಚ್ ಕೆ ಸ್ವಾಮಿ, ಉಪಾಧ್ಯಕ್ಷರಾಗಿ ಡಾ: ದೊಡ್ಡಮಲ್ಲಯ್ಯ ಮತ್ತು ಎಂ ಆರ್ ದಾಸೇಗೌಡರು ಖಜಾಂಚಿಯಾಗಿ ಎಂ ಗೋವಿಂದಪ್ಪ ತುರುವನೂರು, ಕಾರ್ಯದರ್ಶಿಯಾಗಿ ಎಮ್ ಮಂಜುನಾಥ್ ಕಳ್ಳಿಹಟ್ಟಿ,ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಸವನಹಳ್ಳಿರಮೇಶ್, ಎಸ್ ವಿ ರಂಗನಾಥ್ ಯಾದವರೆಡ್ಡಿ, ಕೆ ಮಹಮ್ಮದ್ ಯೂಸುಫ್,ಮಂಜುನಾಥ್ ಮಾಳಿಗೆ,ಎಂಆರ್ ನಾಗರಾಜ್,ಹಾಗೂ ಮಲ್ಲಿಕಾರ್ಜುನ್ ರವರನ್ನು ಆಯ್ಕೆಮಾಡಲಾಯಿತು ಎಂದು ಕಸವನಹಳ್ಳಿ ರಮೇಶ್ ತಿಳಿಸಿದರು. ಈ ಸಂದರ್ಭದಲ್ಲಿ ಡಾಕ್ಟರ್ ದೊಡ್ಡಮಲ್ಲಯ್ಯನವರು ಮಾತನಾಡಿ ಮರೆಯಾಗುತ್ತಿರುವ ಗಾಂಧಿ ಚಿಂತನೆಗಳನ್ನು ಮುನ್ನಡೆಗೆ ತರಬೇಕಾದ ಜವಾಬ್ದಾರಿ ಪ್ರಸ್ತುತ ಸಮಾಜದ ಮುಂದಿದೆ ಎಂದು ಹೇಳಿದರು. ಯಾದವ್ ರೆಡ್ಡಿ ಅವರು ಮಾತನಾಡಿ ಬಹುತ್ವ ಭಾರತದ ಪರಿಕಲ್ಪನೆಯನ್ನು ಉಳಿಸಿ ಬೆಳೆಸಬೇಕು ಇದು ಗಾಂಧೀಜಿಯವರ ಮಹೋನ್ನತ ಆಶಯವಾಗಿತ್ತು ಎಂದು ಹೇಳಿದರು ಮುಂದುವರೆದು ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ತುಮಕೂರು ಜಿಲ್ಲಾಧ್ಯಕ್ಷರಾದಂತಹ ಪುಟ್ಟಕಾಮಣ್ಣ,ನವರು ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ತಿಳಿಸಿದರು.

Latest News >>

ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಅವಘಡ ಸಂಭವಿಸಿದಂತೆ ಎಚ್ಚರಿಕೆಯಿಂದ ಕ್ರಮ ವಹಿಸಿ

ಚಿತ್ರದುರ್ಗ ಜೂನ್14: ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಂತಹ ಯಾವುದೇ ಅಹಿತಕರ ಅವಘಡ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಗತ್ಯ...

ಮೃತ ರೇಣುಕಾಸ್ವಾಮಿ ಮನೆಗೆ ಮಾಜಿಉಪಮುಖ್ಯಮಂತ್ರಿ ಗೋವಿಂದಕಾರಜೋಳ,ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಚಿತ್ರದುರ್ಗ: ನಗರದ ವಿ.ಆರ್.ಎಸ್ ಬಡಾವಣೆಯಲ್ಲಿರುವ ರೇಣುಕಾ ಸ್ವಾಮಿಯ ಕೊಲೆಯಾದ ಸಂಗತಿ ತಿಳಿದು ಮನಸ್ಸಿಗೆ ಅಘಾತವಾಗಿದ್ದು ಇಂದು ಅವರ ಮನೆಗೆ...

ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿರುವ ಆದಿವಾಲ ಗ್ರಾಮಕ್ಕೆಒಂದು ರುದ್ರಭೂಮಿಯೇ ಇಲ್ಲದಂತಾಗಿದೆ.

ಹಿರಿಯೂರು: ಆದಿವಾಲ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ. ಆದರೆ ಆ ಗ್ರಾಮದ ಜನರಿಗೆ ಒಂದು ರುದ್ರ ಭೂಮಿಯೇ...

*ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕವಾಗಿ ಎಲ್ಲ ಸೌಲಭ್ಯಗಳು ಸೀಗಬೇಕು; ವಿಳಂಬ, ತೀರಸ್ಕಾರ ಮಾಡಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ: ರಾಷ್ಟ್ರೀಯ ಸಫಾಯಿ ಕಾರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್

ಧಾರವಾಡ ಜೂನ್.13: ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ರಾಷ್ಟ್ರೀಯ ಮತ್ತು ರಾಜ್ಯ ಸರಕಾರಗಳಿಂದ ಕಾನೂನಾತ್ಮಕವಾಗಿ...

ಅದ್ದೂರಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ ಉಪ್ಪಾರ ಸಮಾಜದ ಯುವಗೌರವಾಧ್ಯಕ್ಷ ಕನಕದಾಸ್

ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಜೂನ್ 14ರಂದು ಹಿರಿಯೂರು: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಿನಾಂಕ 14-ಜೂನ್-2024 ನೇ ಶುಕ್ರವಾರದಂದು ಶ್ರೀ...

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

ಹಿರಿಯೂರು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ...

ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

ಹಿರಿಯೂರು: 12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page