ಸರ್ ಎಂ ವಿಶ್ವೇಶ್ವರಯ್ಯನವರ ಚಿಂತನೆಗಳು ನನ್ನ ಜೀವನದಲ್ಲಿ ಪರಿಣಾಮ ಬೀರಿದ್ದರಿಂದಲೇ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಯಿತು: ಶಾಸಕ ಟಿ ರಘುಮೂರ್ತಿ

by | 15/09/23 | ವಿಜ್ಞಾನ ತಂತ್ರಜ್ಞಾನ


ಚಳ್ಳಕೆರೆ: ಸವಾಲುಗಳನ್ನು ಎದುರಿಸಿ ಹೆಜ್ಜೆ ಹೆಜ್ಜೆಗೂ ಸಾಧನೆಗಳನ್ನು ಮಾಡುತ್ತ ಜೀವನ ಪರ್ಯಂತ ನಿಸ್ವಾರ್ಥ ಜೀವನ ಸಾಗಿಸಿದ ಭಾರತರತ್ನ ಡಾ. ಸರ್ ಎಂ ವಿಶ್ವೇಶ್ವರಯ್ಯ ಜಗತ್ತಿಗೆ ಆದರ್ಶವಾಗಿದ್ದಾರೆ ಪ್ರತಿ ಹೆಜ್ಜೆಗಳಲ್ಲಿ ಯಶಸ್ವಿಯಾದ ಅವರು ಶುದ್ಧ ಹಸ್ತರಾಗಿ ಪ್ರಾಮಾಣಿಕರಾಗಿ ಜೀವನ ನಡೆಸಿದರು ಅವರ ಆದರ್ಶಗಳನ್ನು ಇಂದಿನ ಇಂಜಿನಿಯರ್ ಗಳು ಹಾಗೂ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿರಘುಮೂರ್ತಿ ತಿಳಿಸಿದರು.

ನಗರದ ಲೋಕೋಪಯೋಗಿ ಇಲಾಖೆ ಸಭಾಂಗಣದಲ್ಲಿ ವಿಶ್ವೇಶ್ವರಯ್ಯನವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು

ರಾಷ್ಟ್ರ ನಿರ್ಮಾಣದಲ್ಲಿ ಅಭಿಯಂತರರ ಪಾತ್ರ ಮಹತ್ತರವಾದುದು ಅಭಿಯಂತರರು ಹಗಲಿರುಳು, ಶ್ರಮಿಸುತ್ತಾ ದೇಶ ಕಟ್ಟುವಲ್ಲಿ ನಿರತರಾಗಿರುವುದು ಹೆಮ್ಮೆಯ ವಿಚಾರವಾಗಿದೆ. ನಾನು ಸಹ ಬಿಇ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದು ಸರ್ಕಾರಿ ನೌಕರಿಯಲ್ಲಿ ಸೇವೆ ಸಲ್ಲಿಸಿ ಇಂದು ರಾಜಕಾರಣಕ್ಕೆ ಬಂದಿದ್ದೇನೆ ಸರ್ ಎಂ ವಿಶ್ವೇಶ್ವರಯ್ಯನವರ ಮೌಲ್ಯಗಳು ನನ್ನ ಜೀವನದಲ್ಲಿ ಪರಿಣಾಮ ಬೀರಿದ್ದರಿಂದಲೇ ಕ್ಷೇತ್ರದಲ್ಲಿ ಶಾಸಕನಾಗಿ ಅತ್ಯುತ್ತಮ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಯಿತು ಇಂತಹ ಮಹನೀಯರನ್ನು ನೆನೆಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಸ್ಮರಿಸಿದರು

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಶ್ರೀ ರೆಹಾನ್ ಪಾಷಾ, ಕಾರ್ಯಪಾಲಕ ಅಭಿಯಂತರರಾದ ಶ್ರೀ ವಿಜಯಭಾಸ್ಕರ್, ಇಂಜಿನಿಯರ್ ಶ್ರೀ ರಾಜಣ್ಣ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಶ್ರೀಮತಿ ಕಾವ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೀರಭದ್ರಪ್ಪ, ಇಂಜಿನಿಯರ್ ಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *