ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

by | 29/02/24 | ಸುದ್ದಿ

ಚಿತ್ರದುರ್ಗ ಫೆ.29:
ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ(8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮ್‍ನ್ನು ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯ ದಿನಾಂಕದಿಂದ 7 ದಿನಗಳೊಳಗಾಗಿ ಲೆಕ್ಕಪರಿಶೋಧಕರಿಗೆ, ಲೆಕ್ಕಪರಿಶೋಧನಾ ಫರ್ಮಿಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ತಿಳಿಸಬೇಕಾಗಿರುತ್ತದೆ.
ಆದರೆ ಜಿಲ್ಲೆಯ ಬಹುಪಾಲು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಲೆಕ್ಕಪರಿಶೋಧಕರ, ಲೆಕ್ಕಪರಿಶೋಧನಾ ಫರ್ಮ್‍ನ ನೇಮಕಾತಿಯ ಬಗ್ಗೆ ಕಛೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ. ಮಾಹಿತಿ ಸಲ್ಲಿಸಿರುವ ಸುಮಾರು ಆಯ್ಕೆ ಪತ್ರಗಳಲ್ಲಿ ದಿನಾಂಕ ಮತ್ತು ಲೆಕ್ಕಪರಿಶೋಧಕರ, ಸನ್ನದು ಲೆಕ್ಕಪರಿಶೋಧಕರ ಹೆಸರುಗಳು ತಿದ್ದುಪಡಿಯಾಗಿರುತ್ತವೆ.
ಆದ್ದರಿಂದ 2023-24ನೇ ಸಾಲಿನ ಆಯ್ಕೆ ಪತ್ರಗಳನ್ನು ಸಲ್ಲಿಸುವಾಗ ವಾರ್ಷಿಕ ಮಹಾಸಭೆಯ ನಡುವಳಿಗಳ ಧೃಢೀಕೃತ ನಕಲು ಪ್ರತಿಯೊಂದಿಗೆ ಆಯ್ಕೆ ಪತ್ರವನ್ನು ವಾರ್ಷಿಕ ಮಹಾಸಭೆಯ ನಡಾವಳಿಯೊಂದಿಗೆ ಕಚೇರಿಯ ಇ-ಮೇಲ್ ಮುಖಾಂತರ ಸಲ್ಲಿಸಲು, ಸಹಕಾರ ಸಂಘಗಳ ಲೆಕ್ಕಪರಿಶೋಧಕರನ್ನು, ಲೆಕ್ಕಪರಿಶೋಧನಾ ಫರ್ಮ್‍ನ್ನು ನೇಮಕಾತಿ ಮಾಡಿಕೊಂಡಿರು ಬಗ್ಗೆ 3 ದಿನಗಳೊಳಗಾಗಿ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕರ ಕಚೇರಿ, ಸಪ್ತಗಿರಿ ನಿಲಯ, ಜೆಸಿಆರ್ ಬಡಾವಣೆ, 3ನೇ ಕ್ರಾಸ್, ಚಿತ್ರದುರ್ಗ-577501, 08194-200105, ಇ-ಮೇಲ್ ddca-chitradurg-ka@nic.inಕಛೇರಿಗೆ ಸಲ್ಲಿಸಲು ತಿಳಿಸಿದೆ.
ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕಾತಿ ಮಾಹಿತಿ ಸಲ್ಲಿಸದಿದ್ದಲ್ಲಿ ಅಂತಹ ಸಂಘಗಳಿಗೆ ಇಲಾಖೆಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದು ಹಾಗೂ ಲೆಕ್ಕಪರಿಶೋಧನೆಯಲ್ಲಿ ವಿಳಂಬವಾದಲ್ಲಿ ಸಂಬಂಧಿಸಿದ ಸಂಘಗಳ, ಸಹಕಾರಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೇ ಹೊಣೆಗಾರರು ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ಮೇವು ಸಾಗಟ ನಿಷೇಧ ಜಿಲ್ಲಾಧಿಕಾರಿ ವೆಂಕಟೇಶ್.

ಚಿತ್ರದುರ್ಗ ಏ.05: ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಪ್ರಸ್ತುತ...

ತಾಲೂಕಿನಬರಪರಿಸ್ಥಿತಿ ಎದುರಿಸಲು ಪಿಡಿಒಗಳು ಕಾರ್ಯೋನ್ಮುಖರಾಗಬೇಕು, ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗವಹಿಸಿ ನೋಡಲ್ ಅಧಿಕಾರಿ ರಾಮಾಂಜನೇಯ

ಚಳ್ಳಕೆರೆ: ರಾಜ್ಯ ಸರ್ಕಾರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಈಗಾಗಲೇ ಘೋಷಣೆ ಮಾಡಿರುವುದರಿಂದ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ...

ಜನರ ದಾಹ ತಣಿಸಲು ಅರವಟ್ಟಿಗೆ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು ವಿತರಣೆ. ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ.ನಸರುಲ್ಲಾ..

ನಾಯಕನಹಟ್ಟಿ:: ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಜನರ ದಾಹ ತಣಿಸಲು ಅರವಟ್ಟಿಗೆ ತೆರೆದಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯ...

ಶುದ್ದ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಏಪ್ರಿಲ್ 02 ಪ್ರಸಕ್ತ ಬೇಸಿಗೆಯಲ್ಲಿ ಚಿತ್ರದುರ್ಗ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ನಿವಾಸಿಗಳಿಗೆ...

ಬರಗಾಲ ನಿರ್ವಾಹಣಾ ಸಭೆಗೆ ಅಧಿಕಾರಿಗಳು ಹಾಜರಿಯಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಏ.2. ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗಿದ್ದು ತಾಲೂಕು ಬರಗಾಲ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಏ 3 ಬುಧವಾರ 10 ಗಂಟೆ‌ಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page