ಹಿರಿಯೂರು :
ನಗರದಲ್ಲಿ ಬಯಲುಶೌಚದಿಂದ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿದ್ದು, ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಲು ಮತ್ತು ಕುಟುಂಬದ ಗೌರವಕ್ಕೆ ಶೌಚಾಲಯ ಅತ್ಯವಶ್ಯಕವಾಗಿದ್ದು, ನಾವೆಲ್ಲ ಬಯಲು ಶೌಚಕ್ಕೆ ಮುಕ್ತಿ ಹಾಡಿ, ನಗರವನ್ನು ಬಯಲು ಮುಕ್ತಗೊಳಿಸಲು ನಗರಸಭೆಗೆ ಸಹಕಾರ ನೀಡಬೇಕು ಎಂಬುದಾಗಿ ಸಮಾಜ ಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿದರು.
ನಗರ ವ್ಯಾಪ್ತಿಯಲ್ಲಿ ನಗರಸಭೆ ವತಿಯಿಂದ “ವಿಶ್ವ ಶೌಚಾಲಯ ದಿನಾಚರಣೆ” ಕಾರ್ಯಕ್ರಮದ ಅಂಗವಾಗಿ ನಗರದ ಬೀದಿಗಳಲ್ಲಿ ನಗರಸಭೆ ಪೌರಕಾರ್ಮಿಕರು ಮತ್ತು ಸಾರ್ವಜನಿಕರ ಜೊತೆಗೂಡಿ ಹಮ್ಮಿಕೊಳ್ಳಲಾಗಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ, ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಾಥಾ ಆಂದೋಲನದ ಮುಖಾಂತರ ಸಾರ್ವಜನಿಕರಿಗೆ ಬಯಲು ಶೌಚಾಲಯದ ದುಷ್ಪರಿಣಾಮಗಳ ಬಗ್ಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಮತ್ತು ಶೌಚಾಲಯ ಬಳಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾರುಕಟ್ಟೆ ಮತ್ತು ಸಾರಿಗೆ ಕೇಂದ್ರಗಳಲ್ಲಿ ಮಾಹಿತಿ ಬೂತ್ ತೆರೆದಿದ್ದು ಮತ್ತು ಕರಪತ್ರಗಳನ್ನು ಹಂಚುವುದರ ಮೂಲಕ ಶೌಚಾಲಯ ಬಗ್ಗೆ ಅರಿವು ಮೂಡಿಸಲಾಯಿತು.
ಈ ಜಾಥಾ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕಿ ಶ್ರೀಮತಿ ಸಂಧ್ಯಾ ಸೇರಿದಂತೆ ಪೌರಕಾರ್ಮಿಕರು, ಸಾರ್ವಜನಿಕರು ಭಾಗವಹಿಸಿದ್ದರು.
ಸಾಂಕ್ರಾಮಿಕ ರೋಗದಿಂದ ರಕ್ಷಣೆ ಪಡೆಯಲು ಜನರು ಬಯಲುಶೌಚಕ್ಕೆ ಮುಕ್ತಿ ಹಾಡಿ : ಶಶಿಕಲಾ ರವಿಶಂಕರ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments