ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸ ಆಚರಣೆ ಸಮಾರೋಪ ಸಮಾರಂಭ

by | 07/12/23 | ಸುದ್ದಿ


ಚಿತ್ರದುರ್ಗ :
ನಗರಗಳ ಕೈಗಾರೀಕರಣ ಹಾಗೂ ಆಧುನೀಕರಣದಿಂದಾಗಿ ಇಂದಿನ ದಿನಗಳಲ್ಲಿ ನಮ್ಮ ಸುತ್ತಮುತ್ತಲಿನ ಮರಗಿಡಗಳು ಕಣ್ಮರೆಯಾಗುತ್ತಿದ್ದು, ಶುದ್ಧರಾದ ಗಾಳಿ ಸಿಗದೇ ವಾತಾವರಣ ಕಲುಷಿತಗೊಳ್ಳುತ್ತಿದ್ದು, ಇದರಿಂದ ಮನುಷ್ಯನ ಆರೋಗ್ಯದ ಮೇಲೆ ತೀವ್ರವಾದ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂಬುದಾಗಿ ಜಿಲ್ಲಾ ಸಾರಿಗೆ ಅಧಿಕಾರಿಗಳಾದ ಭರತ್ ಕಾಳಿ ಸಿಂಘೆ ಹೇಳಿದರು.
ನಗರದ ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾರ್ವಜನಿಕರು ಬಳಸುವ ಹಳೆಯ ವಾಹನಗಳು ಬಿಡುವ ಅತಿಯಾದ ಹೊಗೆಯಿಂದಾಗಿ ಸಹ ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ವಾತಾವರಣ ಕಲುಷಿತಗೊಳ್ಳುತ್ತಿದ್ದು, ಇದರಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚಾಗುತ್ತಿವೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ಸದಾ ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವ ಮೂಲಕ ಪರಿಸರವನ್ನು ಸಂರಕ್ಷಿಸಿಕೊಳ್ಳಲು ಸಹಕರಿಸಬೇಕು ಎಂಬುದಾಗಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಸಹನಿರ್ದೇಶಕರಾದ ರವಿಶಂಕರ್ ರೆಡ್ಡಿ ಮಾತನಾಡಿ, ಸಮಾಜದ ಪ್ರತಿಯೊಬ್ಬರೂ ಹೆಚ್ಚು ಹೆಚ್ಚು ಮರಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು, ಆಗ ಮಾತ್ರ ವಾತಾವರಣದಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಾಗಿ ವಾಯುಮಾಲಿನ್ಯವನ್ನು ನಿಯಂತ್ರಣ ಮಾಡುವುದರ ಜೊತೆಗೆ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಬಹುದಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ಅಂಗವಾಗಿ ನಗರದ ವಿವಿಧ ಶಾಲಾ ಮಕ್ಕಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರಿಗೆ ಅಧಿಕಾರಿಗಳಾದ ಭರತ್ ಕಾಳಿ ಸಿಂಘೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹನಿರ್ದೇಶಕರಾದ ರವಿಶಂಕರ್ ರೆಡ್ಡಿ, ಹಿರಿಯ ಮೋಟಾರು ವಾಹನ ನಿರ್ದೇಶಕರಾದ ಪ್ರಕಾಶ್ ಶಾನುಭೋಗ್ ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page