ಚಳ್ಳಕೆರೆ ಅ.17 : ಸಾರಿಗೆ ಬಸ್ ಹಾಗೂ ಬೈಕಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಳ್ಳಕೆರೆ – ನಾಯಕನಹಟ್ಟಿ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಮಲ್ಲೂರಹಳ್ಳಿ ಗ್ರಾಮದ ಬೈಕ್ ಸವಾರ ನವೀನ್(22) ಮೃತ ಯುವಕ. ಟಾಟಾ ಏಸ್ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಸಾರಿಗೆ ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿಯ ರಭಸಕ್ಕೆ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು ಬೈಕಿನಲ್ಲಿದ್ದ ಇಬ್ಬರು ಗಾಯಗಳುಗಳನ್ನು
ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಹಾಗೂ ಚಳ್ಳಕೆರೆ ಸಾರಿಗೆ ಘಟಕದ ವ್ಯವಸ್ಥಾಪಕ ಎಸ್. ಪ್ರಭು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 Comments