ಸಾರ್ವಜನಿಕರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದ ಸಿಆರ್‍ಪಿಎಫ್ ಪಡೆ

by | 06/04/23 | ಚುನಾವಣೆ-2023


ಚಿತ್ರದುರ್ಗ ಏ. 06
ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅವರಲ್ಲಿ ಭದ್ರತೆಯ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಕೇಂದ್ರ ಮೀಸಲು ಪಡೆ ಯೋಧರು ಗುರುವಾರ ಚಿತ್ರದುರ್ಗ ನಗರದ ವಿವಿಧ ಪ್ರದೇಶಗಳಲ್ಲಿ ಅಭಯ ಪಥಸಂಚಲನ ನಡೆಸಿ, ಸಾರ್ವಜನಿಕ ವಲಯದಲ್ಲಿ ಸಂಚಲನವನ್ನುಂಟು ಮಾಡಿದರು.
ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ನಿರ್ಭೀತಿಯಿಂದ ಮತ ಚಲಾವಣೆ ಮಾಡಬೇಕು, ಪುಂಡ-ಪೋಕರಿಗಳು ತಮ್ಮ ಯಾವುದೇ ದುಷ್ಕøತ್ಯ ನಡೆಸಲು ಸಾಧ್ಯವಿಲ್ಲ. ಸಾರ್ವಜನಿಕರ ರಕ್ಷಣೆಗೆ ನಾವಿದ್ದೇವೆ ಎನ್ನುವಂತೆ ಸಿಆರ್‍ಪಿಎಫ್ ತಂಡವು, ನಗರದ ಏಕನಾಥೇಶ್ವರಿ ಪಾದಗುಡಿ ಆವರಣದಿಂದ ಪ್ರಾರಂಭಿಸಿ, ನಗರದ ವಿವಿಧ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಅವರು ಪಥಸಂಚಲನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಅಲ್ಲದೆ ಖುದ್ದು ಅಧಿಕಾರಿಗಳು ಪಥಸಂಚಲನದಲ್ಲಿ ಭಾಗವಹಿಸಿ, ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸುವುದರ ಜೊತೆಗೆ ಭದ್ರತೆಯ ಭಾವನೆ ಮೂಡುವಂತೆ ಮಾಡಿದರು.
ವಿಧಾನಸಭಾ ಚುನಾವಣೆಯ ಬಂದೋಬಸ್ತ್‍ಗಾಗಿ ಹಾಗೂ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ಜನರಲ್ಲಿ ಭದ್ರತೆಯ ಭಾವ ಮೂಡಿಸಲು, ಚುನಾವಣೆ ಕುರಿತು ಅರಿವು ಮೂಡಿಸಲು ಈ ತಂಡಗಳು ನೆರವಾಗಲಿವೆ. ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಈಗಾಗಲೆ ಸಿಆರ್‍ಪಿಎಫ್‍ನ ಒಟ್ಟು 04 ತಂಡಗಳು ಜಿಲ್ಲೆಗೆ ಆಗಮಿಸಿದ್ದು, ಈ ತಂಡಗಳನ್ನು ಪ್ರಸ್ತುತ ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಹಾಗೂ ಚಿತ್ರದುರ್ಗ ತಾಲ್ಲೂಕುಗಳಿಗೆ ನಿಯೋಜಿಸಲಾಗಿದೆ. ಪ್ರತಿ ತಂಡದಲ್ಲಿ ಸುಮಾರು 90 ರಿಂದ 100 ಸಿಆರ್‍ಪಿಎಫ್ ಯೋಧರಿದ್ದು, ಜಿಲ್ಲೆಗೆ ಇನ್ನೂ ಸಿಆರ್‍ಪಿಎಫ್‍ನ 16 ತಂಡಗಳು ಆಗಮಿಸಲಿದ್ದು, ಪ್ರತಿ ಕ್ಷೇತ್ರಕ್ಕೂ ಅಗತ್ಯ ತಂಡಗಳು ನಿಯೋಜನೆಗೆ ಒಳಪಡಲಿವೆ. ಕೇಂದ್ರ ಮೀಸಲು ಪಡೆ ಗುರುವಾರ ನಗರದಲ್ಲಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಕೇಂದ್ರ ಮೀಸಲು ಪಡೆಯ ಕಮಾಂಡೆಂಟ್ ಕುಮಾರ್ ಅಂಶುಮಾಲಿ, ಡೆಪ್ಯುಟಿ ಕಮಾಂಡೆಂಟ್ ಅಮರೇಂದ್ರ ಕುಮಾರ್ ಪಥಸಂಚಲನದ ನೇತೃತ್ವ ವಹಿಸಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಅತ್ಯಂತ ಶಿಸ್ತು ಬದ್ಧರಾಗಿ ಕೈಯಲ್ಲಿ ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕುತ್ತಿದ್ದ ಯೋಧರನ್ನು ಸಾರ್ವಜನಿಕರು ಆಶ್ಚರ್ಯ ಚಕಿತರಾಗಿ ವೀಕ್ಷಿಸಿದರು.
ನಗರದ ಏಕನಾಥೇಶ್ವರಿ ಪಾದಗುಡಿಯಿಂದ ಪ್ರಾರಂಭಗೊಂಡ ಕೇಂದ್ರ ಮೀಸಲು ಪಡೆಯ ಪಥಸಂಚಲನ, ನಗರದ ಆಲಿಮೊಹಲ್ಲ, ಬುರುಜನಹಟ್ಟಿ, ಸಂಗೊಳ್ಳಿ ರಾಯಣ್ಣ ವೃತ್ತ, ಕನಕವೃತ್ತ, ಚೇಳಗುಡ್ಡ, ಟಿಪ್ಪು ಸರ್ಕಲ್, ನೆಹರೂ ನಗರ, ಹೊಳಲ್ಕೆರೆ ರಸ್ತೆ ಮೂಲಕ ನಗರದ ಪ್ರಧಾನ ಅಂಚೆ ಕಚೇರಿವರೆಗೆ ನೆರವೇರಿತು. ಪ್ರಮುಖ ನಗರದಲ್ಲಿ ಪಥ ಸಂಚಲನ ನಡೆಸಿದ ಅರೆ ಸೇನಾ ಪಡೆ ಸಾರ್ವಜನಿಕ ವಲಯದಲ್ಲಿ ಭದ್ರತೆಯ ವಿಶ್ವಾಸ ಮೂಡಿಸುವಲ್ಲಿ ಯಶಸ್ವಿಯಾಯಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಸ್‍ಪಿ ಪಾಪಣ್ಣ, ಡಿವೈಎಸ್‍ಪಿ ಗಣೇಶ್ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *