ಚಿತ್ರದುರ್ಗ ಸೆ.26
ಸಮುದಾಯದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರ ಮೂಲಕ ಮಲೇರಿಯಾ ಹಾಗೂ ಇತರೆ ಕೀಟ ಜನ್ಯ ರೋಗಗಳಿಂದ ಮಾರಣಾಂತಿಕ ಕಾಯಿಲೆ ತಪ್ಪಿಸಲು ಗುಣಮಟ್ಟದ ಸೇವೆ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಕರೆ ನೀಡಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಮಂಗಳವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಇವರ ಸಹಯೋಗದೊಂದಿಗೆ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಹಾಗೂ ಸಮುದಾಯ ಆರೋಗ್ಯಧಿಕಾರಿಗಳಿಗೆ ಎರಡು ದಿನಗಳ ಮಲೇರಿಯಾ ಇತರೆ ಕೀಟಜನ್ಯ ರೋಗಗಳ ಕುರಿತು ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
2025ಕ್ಕೆ ಮಲೇರಿಯಾ ಮುಕ್ತ ಜಿಲ್ಲೆ ಮತ್ತು ರಾಜ್ಯ ಮಾಡುವಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮಲ್ಲಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಕಾಶಿ, ಜಿಲ್ಲಾ ಕೀಟಶಾಸ್ತ್ರಜ್ಞಾನ ನಂದಿನಿ ಕಡಿ ಮತ್ತು ಮಲ್ಲಿಕಾರ್ಜುನ, ಹಿರಿಯ ನಿರೀಕ್ಷಣಾಧಿಕಾರಿಗಳಾದ ವಿ. ಶ್ರೀನಿವಾಸ, ಬಿ.ಆರ್. ನಾಗರಾಜು, ಹೆಚ್.ಎ. ನಾಗರಾಜು, ಪಾಂಡು, ಕಾವ್ಯ, ಶ್ರೀಕಾಂತ್ ಇದ್ದರು.
ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಿ -ಡಿ.ಹೆಚ್.ಒ ಡಾ.ಆರ್. ರಂಗನಾಥ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments