ಸಾಣೆಹಳ್ಳಿ :
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಡಾ.ಮಹೇಶ್ ಜೋಶಿಯವರು ಸಾಣೆಹಳ್ಳಿಗ್ರಾಮದ ಸಿರಿಗೆರೆ ಶಾಖಾ ಮಠಕ್ಕೆ ಭೇಟಿ ನೀಡಿ ತರಳುಬಾಳು ಪಂಡಿತಾರಾಧ್ಯ ಶ್ರೀಗಳ ಆಶೀರ್ವಾದ ಪಡೆದರಲ್ಲದೆ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ರೀಗಳ ಗಮನ ಸೆಳೆದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡ ಶ್ರೀಗಳು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡಿಗರಲ್ಲಿ ಕನ್ನಡಾಭಿಮಾನವನ್ನು ಬೆಳೆಸುವಂತಹ ಹೆಚ್ಚುಹೆಚ್ಚು ಕನ್ನಡಪರ ಸಾಹಿತ್ಯ ಕಾರ್ಯಕ್ರಮಗಳು ನಡೆಯುವಂತಾಗಲಿ ಎಂಬುದಾಗಿ ಶುಭಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಹೊಳಲ್ಕೆರೆ ತಾ.ಅಧ್ಯಕ್ಷ ಎನ್.ಶಿವಮೂರ್ತಿ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಗಣ್ಯರು ಪಾಲ್ಗೊಂಡಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments