ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕವು ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು ಸಿ ಎಂ.ಸಿದ್ದರಾಮಯ್ಯ.

by | 14/12/23 | ಕೃಷಿ

‌ ಬೆಳಗಾವಿ ಡಿ.14. ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ದಿನ – 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕವು ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನಗಳು ಆಗಲಿ.

ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯ ದಿನವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ.
ಮೊದಲನೇ ಮೇಳ ನಡೆದಿದ್ದು ೨೦೧೭ ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. ೫ ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ. ಸಿರಿಧಾನ್ಯ ಬಹಳ ಬೇಡಿಕೆಯಲ್ಲಿರುವ ವಸ್ತು. ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು. ನಂತರ ಕಡಿಮೆಯಾಗುತ್ತಾ ಬಂದಿತು.

ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page