ಸೆ.15 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

by | 08/09/23 | ಉದ್ಯೋಗ

ಚಳ್ಳಕೆರೆ ಸೆ8 ಚಳ್ಳಕೆರೆ  ತಾಲ್ಲೂಕಿನ ಖಾಲಿ ಇರುವ 42 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ72
ಸಹಾಯಕಿ ಹುದ್ದೆಗೆ ಗೌರವಧನ ಆಧಾರದ ಮೇಲೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುರುತಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಚಳ್ಳಕೆರೆ. .ಹಾಗೂ ಸಂಬಂದ ಪಟ್ಟ ಗ್ರಾಮ ಪಂಚಾಯಿತಿ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು,
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಯನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಂದ ಯಾವುದಾದರು ಆಕ್ಷೇಪಣೆಗಳಿದಲ್ಲಿ
ದಿ : 15-09-2023 ರ ಸಂಜೆ 5-30ರ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ
ಕಛೇರಿ, ಚಳ್ಳಕೆರೆ. ಇವರಿಗೆ ಸಲ್ಲಿಸಬಹುದಾಗಿರುತ್ತದೆ. ನಂತರ ಬರುವ ಆಕ್ಷೇಪಣಾ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ದಿನಾಂಕ:
15/09/2023 ರಂದು ಬೆಳಿಗ್ಗೆ 10.30 ಗಂಟೆಗೆ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಪರಿಶೀಲನೆ ನಡೆಸಲಾಗುವುದು. ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರಿಪ್ರಸಾದ್ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *