ಚಿತ್ರದುರ್ಗ ಸೆ.22:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಸೆಪ್ಟೆಂಬರ್ 25 ರಿಂದ 27 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸುವರು.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಸೆಪ್ಟೆಂಬರ್ 25ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ಹಾಗೂ ಮೊಳಕಾಲ್ಮುರು ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಜರಿರುವರು. ಸೆ.26ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಳ್ಳಕೆರೆ ಹಾಗೂ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಹಾಜರಿರುವರು. ಸೆ.27ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.
ಸಾರ್ವಜನಿಕರು “ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳನ್ನು ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿಗಳು ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನುμÁ್ಠನಗೊಳಿಸದೇ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ” ದೂರುಗಳನ್ನು ನಿಗಧಿತ ನಮೂನೆ-1&2 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments