ಸೋಮವಾರ ಚಳ್ಳಕೆರೆ ನಗರದ ವಿವಿಧ ವಾರ್ಡಗಳಲ್ಲಿ ಅಭ್ಯರ್ಥಿ ಗೋವಿಂದಕಾರಜೋಳ ಪರ ಚಲನ ಚಿತ್ರ ನಟಿ ರಾಗೀಣಿ ಮತಯಾಚನೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂ.ರವೀಶ್.

by | 21/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಏ 21 ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷಗಳು ಎನ್ ಡಿ ಎ ಬಿಜೆಪಿ ಅಭ್ಯರ್ಥಿ ಗೋಂವಿಂದಕಾರಜೋಳ ಇವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಮತ್ತೆ ಮೋದಿಯನ್ನುಪ್ರಧಾನ ಮಂತ್ರಿ ಮಾಡಲಾಗುವುದು ಎಂದು ಜೆಡಿಎಸ್ ಮುಖಂಡ ಎಂ.ರವೀಶ್ ಹೇಳಿದರು.
ನಗರದ ಬಿಜೆಪಿ ಪಕ್ಷದ ಮುಖಂಡರ ಖಾಸಗಿ ಕಚೇರಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.


ಕಳೆದ ವಿಧಾನ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಯಾವುದೇ ಬಿನ್ನಾಭಿಪ್ರಾಯಗಳಿಲ್ಲದೆ ವರಿಷ್ಠರ ಆದೇಶದಂತೆ ಬಿಜೆಪಿ , ಜೆಡಿಎಸ್ ಹಂದಾಣಿಕೆ ಮಾಡಿಕೊಂಡಿದ್ದು ಇಂದಿನಿಂದಲೇ ಒಟ್ಟಾಗಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಲು ಮಿರಸಾಭಿಹಳ್ಳಿ ಗ್ರಾಪಂ ವ್ಯಾಪ್ತಿಯಿಂದ ಪ್ರಾರಂಭಿಸಿ ಕ್ಷೇತ್ರದ ಎಲ್ಲಾ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಲಾಗುವುದು ಈಗಾಗಲೆ ಯುವಕರು ಹಾಗೂ ಕಾರ್ಯಕರ್ತರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ ಎಂದು ತಿಳಿಸಿದರು.
ಸೋಮವಾರ ಚಳ್ಳಕೆರೆ ನಗರದ ವಿವಿಧ ವಾರ್ಡಗಳಲ್ಲಿ ಅಭ್ಯರ್ಥಿ ಗೋವಿಂದಕಾರಜೋಳ ಪರ ಚಲನ ಚಿತ್ರ ನಟಿ ರಾಗೀಣಿ ಮತಯಾನೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.
ಬಿಜೆಪಿ ಮುಖಂಡ ಕೆ.ಟಿ.ಕುಮಾರಸ್ವಾಮಿ ಮಾತನಾಡಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರು ಗೆದ್ದು 11 ವರ್ಷಗಳು ಕಳೆದರೂ ಬಡವರಿಗೆ ನಿವೇಶನ ಹಾಗೂ ಭೂಮಿ ಸಾಗುವಳಿಗೆ ಪತ್ರ ನೀಡಿಲ್ಲ ಬಿಜೆಪಿ ಶಾಸಕ ಬಸವರಾಜ್ ಮಂಡಿಮಠ್ ಅವಧಿಯಲ್ಲಿ ಬಡವರಿಗೆ ಬಗರ್ ಹುಕುಂ ಸಾಗುವಳಿ ಪತ್ರ ನೀಡಿದರೆ ,ನನ್ನ ತಂದೆ ತಿಪ್ಪೇಸ್ವಾಮಿ ಯೂ ಬಿಜೆಪಿ ಶಾಸರ ಅವಧಿಯಲ್ಲಿ ವಾಣಿವಿಲಾಸ ಸಾಗರದಿಂದ ನಗರಕ್ಕೆ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಚಾಲನೆ ನೀಡಿದ್ದರು.
ಸಣ್ಣ ನಿರಾವತಿ ಸಚಿವ ಹಾಗೂ ಶಾಸಕರ ಅವಧಿಯಲ್ಲಿ ವೇದಾವತಿ ನದಿಗೆ ಎರಡು ಬ್ಯಾರೇಜ್ ಗಳನ್ನು ಅಂರ್ಜಲ ರಕ್ಷಣೆಗೆ ನಿರ್ಮಿಸಿದ್ದರು ಪರಶುರಾಂಪುರ ಸೇರಿದಂತೆ ವಿವಿಧ ಕಡೆ ಬ್ಯಾರೇಜು ನಿರ್ಮಿಸಲು ಮಂಜುರಾತಿ ಮಾಡಿಸಿದಾಗ ಆಂದ್ರದವರು ನ್ಯಾಯಾಲದಲ್ಲಿ ಕಾಮಗಾರಿಗೆ ತಡೆಯಾಜ್ಞೆ ತಂದಾಗು ವಿಳಂಭವಾಗಿದೆ ಮತ್ತೆ ಶಾಸಕ ಟಿ.ರಘುಮೂರ್ತಿ ಗೆದ್ದನಂತರ ಅವುಗಳನ್ನು ಮುಂದುವರೆಸಿದ್ದಾರೆ.
ರಸ್ತೆ ಅಗಲೀಕರಣಕ್ಕೆ ಬಿಜೆಪಿ ಸರಕಾರ ಅನುದಾನ ಬಿಡುಗಡೆ ಮಾಡಿತ್ತು ಆದರೆ ಶಾಸಕರು ನಾನೇ ಮಾಡಿದ್ದೇನೆ ಎಂದು ಬೀಗುವುದು ಸರಿಯಲ್ಲ ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ನಾವೆಲ್ಲ ಒಗ್ಗಟ್ಟಾಗಿದ್ದೇವೆ ದೇಶದ ಜನರೂ ಸಹ ಮೋದಿಯನ್ನು ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಆಯ್ಕೆ ಮಾಡುವುದು ಖಚಿತ ಎಂದರು.
ಬಿಜೆಪಿ ಮುಖಂಡ ಅನಿಲ್ ಕುಮಾರ್ ಮಾತನಾಡಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟ ಸುಮಾರು 25 ಸಾವಿರ ಕೋಟಿ ರೂಗಳನ್ನು ಬಿಟ್ಟಿ ಗ್ಯಾರೆಂಟಿಗಳಿಗೆ ನೀಡುತ್ತಿದ್ದಾರೆ. ಕೆಲವು ಇಲಾಖೆಯ ಸಿಬ್ಬಂದಿಗಳ ವೇತನ ಬಿಡುಗಡೆಗೆ ಅನುದಾನದ ಕೊರತೆಯಿಂದ ವಿಳಂಭವಾಗುತ್ತಿದೆ , ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೆ ಬಿಟ್ಟಿ ಭಾಗ್ಯಗಳಿಗೆ ಅನುದಾನ ಸಂಗ್ರಹಿಸಲು ಹರಸಹಾಸ ಪಡುತ್ತಿದೆ .
ಮುಂದೆ ನೋಡಿದರೆ ಸುಂದರವಾದ ಕಟ್ಟಡಗಳು ಒಳ ಹೋಗಿ ನಡೆದರೆ ಹಳೆಯ ಕಟ್ಟಡಗಳು ಸಮುದಾಯ ಭವ ನಗಳ ಕಟ್ಟಡಗಳಿಗೆ ಅನುದಾನವಿಲ್ಲದೆ ಅರೆ ಬರೆಯಾಗಿವೆ ಇದು ಸಾರ್ವಜನಿಕ ತೆರಿಗೆ ಹಣ ಫೋಲಾಗುತ್ತಿದೆ ಮುಖ್ಯ ರಸ್ತೆಗಳು ಸುಂದರವಾಗಿದ್ದರೆ ಸಾಲದು ನಗರದ ಒಳಗೆ ಸರಿಯಾದ ರಸ್ತೆ , ಚರಂಡಿಗಳಿಲ್ಲದೆ ಗೊಬ್ಬು ನಾರುತ್ತಿವೆ ಇದೇನಾ ಶಾಸಕರ ಅಭಿವೃದ್ಧಿ ಎಂದು ಪ್ರಶ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ . ಸೋಮಶೇಖರ್ ಮಂಡಿಮಠ್ ಮಾತನಾಡಿದರು.
ಈ ಸಂದರ್ಭದಲ್ಲಿ ಜಯಪಾಲಯಪ್ಪ, ಆನಂದಪ್ಪ, ಜಯರಾಂ, ಸಿ.ಎಸ್.ಪ್ರಸಾದ್, ಶಿವಪುತ್ರಪ್ಪ, ಶ್ರೀನಿವಾಸ್, ಜಯಣ್ಣ, ಪ್ರಮೋದ್,ಪಾಲಮ್ಮ, ಮಂಜುನಾಥ್,ಇತರರಿದ್ದರು.

Latest News >>

ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು,ಓದುಗರ ಸಂಖ್ಯೆ ಕ್ಷೀಣಿಸುತ್ತದೆ ಜಿಲ್ಲಾಕ.ಸಾ.ಪ.ಅಧ್ಯಕ್ಷ ಶಿವಸ್ವಾಮಿ

ಹಿರಿಯೂರು : ತಂತ್ರಜ್ಞಾನ ಮತ್ತು ಆಧುನಿಕತೆಯ ಭರಾಟೆಯಲ್ಲಿ ಮನುಷ್ಯರ ವ್ಯವಧಾನ ಕಡಿಮೆಯಾಗುತ್ತಿದ್ದು, ದಿನೇ ದಿನೇ ಓದುಗರ ಸಂಖ್ಯೆ ಕಡಿಮೆ...

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page