ಸ್ಕಿಜೋಪ್ರೇನಿಯಾ ಖಾಯಿಲೆ ಬಗ್ಗೆ ಆತಂಕ ಬೇಡ ಸಹಜ ಜೀವನ ನಡೆಸಬಹುದು: ಡಾ. ನಾಗರಾಜ್ 

by | 01/06/24 | ಆರೋಗ್ಯ


ಚಳ್ಳಕೆರೆ: ಸ್ಕಿಜೋ ಪ್ರೇನಿಯ ಎಂಬ ಮಾನಸಿಕ ಖಾಯಿಲೆ ಬಗ್ಗೆ ಆತಂಕ ಬೇಡ ಸೂಕ್ತ ಚಿಕಿತ್ಸೆಯಿಂದ ಸಹಜ ಜೀವನ ನಡೆಸಬಹುದು ಎಂದು ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ನಾಗರಾಜ್ ತಿಳಿಸಿದರು.

ನಗರದ ಹೆಚ್ ಪಿ ಪಿ ಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಕಿಜೋ ಪ್ರೇನಿಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ತಂದೆ ತಾಯಿಗಳು ಒಂಟಿಯಾಗಿ ಬಿಟ್ಟು ತಮ್ಮ ಕೆಲಸ ಕಾರ್ಯಗಳ ಕಡೆ ಹೆಚ್ಚಿನ ಗಮನ ನೀಡುವುದರಿಂದ ಮಕ್ಕಳಲ್ಲಿ ಒಂಟಿತನ ಕಾಡುತ್ತದೆ ತಮಗೆ ಯಾರು ಗೆಳೆಯರು ಅಥವಾ ಜೊತೆಗಾರರು ಇಲ್ಲ ಎಂಬ ಭಾವನೆ ಮೂಡುವುದರಿಂದ ಇಂತಹ ಮಾನಸಿಕ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಪೋಷಕರು ಇಂತಹ ಸೂಕ್ಷ್ಮ ರೋಗಗಳ ಬಗ್ಗೆ ಗಮನಹರಿಸದೆ ನಿರ್ಲಕ್ಷ ವಹಿಸುವುದರಿಂದ ಮಕ್ಕಳು ಸಮಾಜಮುಖಿಯಾಗಿ ಬೆಳವಣಿಗೆ ಕಾಣದೆ ತಮ್ಮ ಜೀವನ ಮತ್ತು ಜೀವವನ್ನು ಕಳೆದುಕೊಳ್ಳುವ ಸ್ಥಿತಿಗೆ ತಲುಪುತ್ತಿದ್ದಾರೆ ಮಕ್ಕಳು ಒಬ್ಬಂಟಿಯಾಗಿರುವುದು ಒಬ್ಬರೇ ಮಾತನಾಡುವುದು ನಿದ್ರಾಹೀನತೆಯಿಂದ ಬಳಲುತ್ತಿರುವುದು ಕಂಡುಬಂದರೆ ತಕ್ಷಣ ಮಾನಸಿಕ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ನೀಡಿದಲ್ಲಿ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಮಾನಸಿಕ ರೋಗದ ಲಕ್ಷಣಗಳು ಕಂಡು ಬಂದಾಗ ಮಾನಸಿಕ ಟೆಲಿಮಾನಸ್ ಎಂಬ ಸಹಾಯವಾಣಿಯನ್ನು ತೆರೆದಿದ್ದು 1416 ಸಂಖ್ಯೆಗೆ ಉಚಿತವಾಗಿ ಕರೆ ಮಾಡಬಹುದಾಗಿದ್ದು ಆಪ್ತ ಸಮಾಲೋಚಕರ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು. 


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಬಿಎಸ್ ಮಂಜುನಾಥ್ ಯುವ ಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಮಾನಸಿಕ ಕಾಯಿಲೆಗಳು ಹರಡಲು ಕಾರಣವಾಗುತ್ತದೆ ಒಬ್ಬ ವಿದ್ಯಾರ್ಥಿ ಗುಟ್ಕಾ ಸಿಗರೇಟ್ ಸೇರಿದಂತೆ ಮಾದಕ ವಸ್ತುಗಳ ವ್ಯಸನಿಯಾದರೆ ಅವುಗಳನ್ನು ತೊರೆದು ಜೀವಿಸುವುದು ಕಷ್ಟವಾಗುತ್ತದೆ ಆದ್ದರಿಂದ ವಿದ್ಯಾರ್ಥಿಗಳು ದುಷ್ಟಗಳಿಂದ ಹೊರಬರಲು ಉತ್ತಮ ಪುಸ್ತಕಗಳನ್ನು ಓದುವುದು ಅಲ್ಲದೆ ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಾಗ ಮಾನಸಿಕ ರೋಗಗಳಿಗೆ ಬಲಿಯಾಗುವುದು ತಪ್ಪುತ್ತದೆ ಅಲ್ಲದೆ ಉತ್ತಮ ಜೀವನ ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ, ಜಿಲ್ಲಾ ಮಾನಸಿಕ ವಿಭಾಗದ ಅಧಿಕಾರಿಗಳಾದ ರೂಪ, ಶ್ರೀಧರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಸ್‌ಬಿ ತಿಪ್ಪೇಸ್ವಾಮಿ, ಬಿಪಿಎಂ ಪ್ರದೀಪ್, ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಸಂಜಯ್, ಉಪನ್ಯಾಸಕರಾದ ತಿಪ್ಪೇಸ್ವಾಮಿ, ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page