ಸಿರಿಗೆರೆ ಸೆ.21 ವಿದ್ಯಾರ್ಥಿಗಳು ಬಾಯಿ ಪಾಠ ಮಾಡದೆ ಪಠ್ಯವನ್ನು ಅರ್ಥ ಮಾಡಿಕೊಂಡು ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಬೇಕು ಇದರಿಂದ ನಿಮ್ಮಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳಯಲಿದೆ ಹಾಗೂ ನಿಮ್ಮನ್ನು ಉತ್ತಮ ಸ್ಥಿತಿಗೆ ಕೊಂಡ್ಯೂಯಲಿದೆ ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಕರು ಪಾಠ ಮಾಡುವಾಗ ಗಮನವಿಟ್ಟು ಕೇಳಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಕಿವಿಮಾತು ಹೇಳಿದರು.
ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದುವಿನಲ್ಲಿರುವ ಶ್ರೀ ಮತಿ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನ ಕುರಿತು ಮಾತನಾಡಿದರು.
ನೀವೆಲ್ಲ ದೊಡ್ಡ ದೊಡ್ಡ ಗುರಿಗಳ್ಳನ್ನು ಇಟ್ಟುಕೊಳ್ಳಬೇಕು ಅದರಂತೆ ಕಷ್ಟ ಪಟ್ಟು ಚನ್ನಾಗಿ ಓದಿ ಐ ಎ ಎಸ್, ಐ ಪಿ ಎಸ್ , ಡಾಕ್ಟರ್ , ಇಂಜಿನಿಯರ್ ಯಂತಹ ಉನ್ನತ ಹುದ್ದೆಗಳನ್ನು ಪಡೆದು ಸಮಾಜ ಸೇವೆ ಮಾಡಬೇಕು ಹಾಗೂ ರಾಜಕೀಯದಲ್ಲಿ ಆಸಕ್ತಿ ಉಳ್ಳವರು ಮುಂದೆ ರಾಜಕೀಯ ಪ್ರವೇಶಿ ಸಮಾಜ ಸೇವೆ ಮಾಡಿ ಎಂದು ಹೇಳಿದರು
ನಂತರ ವಿದ್ಯಾರ್ಥಿಗಳೂಂದಿಗೆ ಸಮಾಲೋಚಿಸಿದರು. ಈ ಸಮಯದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀ ರಮೇಶ ರವರು ವಸತಿ ಶಾಲೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ವಸತಿ ಶಾಲೆಯ ನಿಲಯ ಪಾಲಕರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ಗ್ರಾಮಸ್ಥರು ಹಾಜರಿದ್ದರು
ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕ ಕ.ಸಿ.ವೀರೇಂದ್ರಪಪ್ಪಿ ಕರೆ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments