ಮೈಸೂರು ; ವೇಶ್ಯವಾಟಿಕೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.
ತನ್ನ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿ, ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು.
ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಲ್ಯಾಪ್ಟಾಪ್ಗಾಗಿ ತನ್ನ ಪತ್ನಿ ವಿರುದ್ಧ ಷಡ್ಯಂತ ರೂಪಿಸಿ ನಕಲಿ ಪ್ರಕರಣ ದಾಖಲಿಸಿ ತನ್ನ ಪತ್ನಿ ಸೇರಿದಂತೆ ಮೂವರನ್ನು ಜೈಲು ಸೇರಿಸಿದ್ದನು. ಬಳಿಕ ಬಿಡುಗಡೆಯಾಗಿ ಹೊರಬಂದ ರವಿ ಪತ್ನಿ ಸೇರಿದಂತೆ ಮೂವರು ರವಿ ವಿರುದ್ಧವೇ ವರದಕ್ಷಿಣೆ ಕಿರುಕುಳ, ವಂಚನೆ, ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದಾರೆ.
ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿ ಇದುವರೆಗೆ ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಪ್ರಕರಣ ದಾಖಲಾಗಿ ಇಂದಿಗೆ ಏಳು ದಿನಗಳ ಕಳೆದರೂ ಪೊಲೀಸರಿಗೆ ರವಿಯನ್ನು ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಾಗಿಲ್ಲ. ಸದ್ಯ ಈತನ ಬಂಧನಕ್ಕೆ 11 ವಿಶೇಷ ಪೊಲೀಸರ ತಂಡ ರಚಿಸಲಾಗಿದೆ.
0 Comments