ಹಟ್ಟಿತಿಪ್ಪೇಶನ ರಥೋತ್ಸವ ಮಂಗಳವಾರ ಮಧ್ನಾನ ಮೂರು ಗಂಟೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಲಿದೆ.

by | 25/03/24 | ಚರಿತ್ರೆ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ 25. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವು ರಾಜ್ಯಾದ್ಯಾಂತ ಮನೆ ಮಾತಾಗಿರುವ ಮಹಾಕ್ಷೇತ್ರವಾಗಿದೆ. ಚಳ್ಳಕೆರೆ ನಗರದಿಂದ ಸುಮಾರು 16 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರವು ಐತಿಹಾಸಿಕ ಹಿನ್ನೆಲೆಯೂ ಹೊಂದಿದೆ. \

ನಾಯಕನಹಟ್ಟಿ ಕಂದಾಯ ಹೋಬಳಿ ಕೇಂದ್ರ ಹಾಗೂ ಪಟ್ಟಣ ಪಂಚಾಯಿಯಾಗಿದ್ದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರಕ್ಕೆ ಸೇರಿರುತ್ತದೆ. ಪ್ರತಿ ವರ್ಷ ಪಾಲ್ಗುಣ ಮಾಸ ಬಹುಳದ ಚಿತ್ರ ನಕ್ಷದಂದು ಮಾರ್ಚ್ 26 ರ ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ನಾಯಕನಹಟ್ಟಿ, ತಳಕು, ಮನ್ನೆಕೋಟೆ, ಭಕ್ತಾಧಿಗಳಿಂದ ಭಲಿಅನ್ನ ಹಾಗೂವಿಶೇಷ ಪೂಜೆ ಹಾಗೂ ಮುಕ್ತಿಭಾವುಟ ಹರಾಜು ಪ್ರಕ್ರಿಯೆ ನಂತರ ಗುರುತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವಕ್ಕೆ ಸಾವಿರಾರು ಭಕ್ತರು ಕೈ ಹಾಕಿ ತೇರನ್ನು ಎಳೆಯುವರು.
ಕರ್ನಾಟಕ ರಾಜ್ಯದಲ್ಲಿ ನಡೆಯುವ ಅತ್ಯಂತ ದೊಡ್ಡ ಜಾತ್ರೆಗಳಲ್ಲಿ ಒಂದಾದ ನಾಯಕನಹಟ್ಟಿ ಜಾತ್ರೆಯು ಹಿಂದೂ- ಮುಸಲ್ಮಾನರ ಭಾವೈಕ್ಯತೆಯ ದ್ಯೋತಕವಾಗಿದೆ. ಇಲ್ಲಿನ ಕೇಂದ್ರ ಶಕ್ತಿಯಾದ ಗುರು ತಿಪ್ಪೇರುದ್ರಸ್ವಾಮಿಯನ್ನು ಶ್ರೀಗುರುತಿಪ್ಪೇರುದ್ರಸ್ವಾಮಿ, ಹಟ್ಟಿತಿಪ್ಪೇಶ, ತಿಪ್ಪೇಸ್ವಾಮಿ ಎಂತಲೂ ಕರೆಯುತ್ತಾರೆ. ಹಿಂದೆ ಪಂಚಗಣಾಧೀಶರರೆಂದು ಹೆಳಲಾಗಿರುವ ಕೊಲುಶಾಂತೇಶ, ಕೆಂಪಯ್ಯ, ಚೆನ್ನಯ್ಯ, ಚನ್ನಬಸವೇಶ್ವರ, ಹಾಗೂ ತಿಪ್ಪೇಸ್ವಾಮಿಗಳು ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಜನ ಜಾಗೃತಿಯನ್ನು ಮೂಡಿಸಿದ್ದರು ಎನ್ನಲಾಗಿದೆ.

ಈ ಐವರಲ್ಲಿ ಶ್ರೀ ಗುರುತಿಪ್ಪೇರುದ್ರಸ್ವಾಮಿಯವರು ನಿಡಗಲ್ಲು- ರಾಯದುರ್ಗ, ಕಡೆಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಫಣಿಯಪ್ಪ ಎಂಬ ಭಕ್ತನ ವ್ಯಕ್ತಿತ್ವಕ್ಕೆ ಮಾರುಹೋಗಿ, ಅವರನ್ನು ತನ್ನೊಂದಿಗೆ ಕರೆತರುತ್ತಾರೆ.ಅಲ್ಲಿಯ ಹಳ್ಳಿ ಜನರು ಬಡತನದ ಬಗ್ಗೆ ಅರಿತ ಸ್ವಾಮಿಗಳು ಅಲ್ಲಲ್ಲಿ ಕೆಲವು ಕೆರೆಗಳನ್ನು ನಿರ್ಮಿಸುತ್ತಾರೆ. ಕೂಲಿಕಾರರಿಗೆ ದಿನದ ಕೂಲಿಯನ್ನು ಮಾಡಿದಷ್ಟು ನೀಡು ಭಿಕ್ಷೆ ಎಂಬ ಮಂತ್ರಶಕ್ತಿಯಿಂದ ಸೃಷ್ಠಿಸುತ್ತಿದ್ದರು ಎಂಬ ದಂತಕಥೆಯು ಇದೆ.
ಪವಾಡ ಪುರುಷರಾಗಿದ್ದರೆಂದು ನಂಬಲಾದ ಶ್ರೀಗುರುತಿಪ್ಪೇರುದ್ರಸ್ವಾಮಿಯವರು ಯಾವ ಸ್ಥಳದವರು? ಯಾವ ಜಾತಿಯವರು? ಎಂಬ ಬಗ್ಗೆ ಈಗಲೂ ಜನರಲ್ಲಿ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಇವರು ವೀರಶೈವರೆಂದು ಕೆಲವರು ನಂಬಿದ್ದಾರೆ. ಇವರು ಬೇಡ ಜನಾಂಗದವರು ಇದ್ದಿರಬಹುದೆಂದು ಕೆಲವರ ವಾದ. ಒಂದು ದಿನ ನಾಯಕನಹಟ್ಟಿಗೆ ಬಂದು ತಿಪ್ಪೇರುದ್ರಸ್ವಾಮಿಯವರು ಅದೇ ಗ್ರಾಮದಲ್ಲಿದ್ದ ಮಾರಮ್ಮನ ಗುಡಿಗೆ ಹೋಗಿ ಒಂದೆರಡು ದಿನ ತಂಗಲು ಸ್ಥಳಾವಕಾಶ ನೀಡಲು ಮಾರಮ್ಮದೇವಿಯ ಅಪ್ಪಣೆ ಪಡೆದರೆಂದೂ ಮಾರಮ್ಮ ಬದಲು ಹಳ್ಳಿಗಳಿಗೆ ತಿರುಗಾಡಿ ಬರಲು ಹೋದಾಗ ಗುಡಿಯ ತುಂಬಾ ತಿಪ್ಪೇಸ್ವಾಮಿಯವರ ಜೋಳಿಗೆ- ಬೆತ್ತಗಳು ಕಾಣಿಸಿಕೊಂಡು, ಇದನ್ನು ಕಂಡ ಮಾರಮ್ಮ ಗುಡಿಯನ್ನು ತಿಪ್ಪೇಸ್ವಾಮಿಯವರಿಗೆ ಬಿಟ್ಟು ಕೊಟ್ಟು ವಡ್ನಹಟ್ಟಿಗೆ ಹೋಗಿ ನೆಲೆಸಿದಳೆಂದು ಇಲ್ಲಿನ ಜನರ ಕಥೆ ಹೇಳುವುದಿದೆ. ಈಗ ಅದೇ ಗುಡಿಯ ಶ್ರೀಗುರು ತಿಪ್ಪೇಸ್ವಾಮಿಯ ಒಳಮಠ ಇಲ್ಲಿ ತಿಪ್ಪೇಸ್ವಾಮಿಯವರನ್ನು ಲಿಂಗರೂಪದಲ್ಲಿ ಪ್ರತಿಷ್ಟಾಪಿಸಿ ಆರಾಧಿಸಲಾಗುತ್ತಿದೆ.
ಹೊರ ಮಠ ಹಾಗೂ ಒಳ ಮಠ
ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ಸಂಭಂಧಿಸಿದ ಎರಡು ಆರಾಧನಾ ಸ್ಥಳಗಳಾಗಿದ್ದು ಅವುಗಳನ್ನು ಹೊರ ಮಠ ಹಾಗೂ ಒಳ ಮಠ ಎಂದು ಕರೆಯಲಾಗಿದೆ. ಶ್ರೀ ಗುರುತಿಪ್ಪೇರುದ್ರಸ್ವಾಮಿ ಜೀವಿತಾವಧಿಯಲ್ಲಿ ವಾಸವಾಗಿದ್ದ ಸ್ಥಳವು ಊರೊಳಗಿದ್ದು. ಅದನ್ನು ಒಳಮಠವೆಂದು ಕರೆಯುತ್ತಾರೆ. ಜೀವಂತ ಸಮಾಧಿ ಹೊಂದಿದ್ದ ಸ್ಥಳವು ಊರಿಂದ ಹೊಗಡೆ ಚಿಕ್ಕಕೆರೆ ಹತ್ತಿರ ಇದ್ದು ಇದಕ್ಕೆ ಹೊರಮಠ ಎನ್ನುವರು. ಒಳ ಮಠದ ಗೋಪುರವು ಸುಮಾರು 50 ಅಡಿ ಎತ್ತರವಿದ್ದು ಅತ್ಯಾಕರ್ಷಕವಾಗಿದೆ. ಒಳಮಠದ ಮುಂದೆ ಜಾತ್ರೆ ಸಂದರ್ಭದಲ್ಲಿ ಬೃಹತ್ತಾದ ಅಗ್ನಿಕುಂಡದಲ್ಲಿ ಒಣಗೊಬ್ಬರಿಯ ಹೋಳುಗಳ ರಾಶಿಯನ್ನು ಸುಡುವುದು ರಾಜ್ಯದಲ್ಲಿಯೇ ವಿಶೇಷ ಆಚರಣೆಯಾಗಿದೆ.
ಕೊಬ್ಬರಿ ಸುಡುವ ಪದ್ದತಿ
ಈ ಆಚರಣೆಯನ್ನು ಹಿಂದೆ ವಿಶಿಷ್ಟ ಕತೆಯೇ ಇದೆ. ತಿಪ್ಪೇಸ್ವಾಮಿಯವರು ಮೊದಲಿಗೆ ರಾಯದುರ್ಗದಿಂದ ನಾಯಕನಹಟ್ಟಿಗೆ ಬರುವಾಗ ರಾತ್ರಿ ಕತ್ತಲೆ ಆವರಿಸಿದ್ದು ಫಣಿಯಪ್ಪನನ್ನು ಒಣಗೊಬ್ಬರಿಗಳನ್ನು ಕೋಲುಗಳಿಗೆ ಸಿಕ್ಕಿಸಿ ಬೆಂಗಿಯಿAದ ಒತ್ತಿಸಿ ಆ ಬೆಳಕಿನಲ್ಲಿ ತಿಪ್ಪೇಸ್ವಾಮಿಯವರನ್ನು ಹಟ್ಟಿಗೆ ಕರೆತಂದರAತೆ. ಆ ಕಾರಣಕ್ಕೆ ಇಂದಿಗೂ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಭಕ್ತರು ಒಣ ಕೊಬ್ಬರಿ ಸುಡುವ ಸಂಪ್ರದಾಯ ರೂಡಿಯಲ್ಲಿದೆ. ಅದೇ ರೀತಿ ದುಂಡು ಮೆಣಸು, ಎರಚಲು ಸಂಪ್ರದಾಯ ಇಲ್ಲಿ ಇರುತ್ತದೆ. ಹೊರಮಠವನ್ನು ಶ್ರೀ ತಿಪ್ಪೇರುದ್ರಸ್ವಾಮಿ ಗದ್ದುಗೆ ಎಂದು ಒಳಮಠವನ್ನು ಶ್ರೀ ತಿಪ್ಪೇಸ್ವಾಮಿ ಮಠವೆಂದು ಕರೆಯುತ್ತಾರೆ. ಒಳ ಮಠಕ್ಕೆ ಶೈವರು ಪೂಜಾಧಿಕಾರವನ್ನು ಹೊಂದಿದ್ದರೆ. ಒಳ ಮಠದಲ್ಲಿ ಪ್ರತಿ ಸೋಮವಾರ ಪೂಜಾ ನಡೆಯುವುದಕ್ಕೆ ಹೊರಮಠಕ್ಕೆ ಜೀವಕಳೆ ಬರಬೇಕು ವಾಡಿಕೆಯಿಂದ ನಾಯಕನಹಟ್ಟಿ ಜಾತ್ರೆಗೆ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಿಂದಷ್ಟೆ ಅಲ್ಲದೆ ಆಂದ್ರ, ತಮಿಳುನಾಡು, ರಾಜ್ಯಗಳಿಂದಳೂ ಭಕ್ತರು ಸಾಗರೋಪಾದಿಯಲ್ಲಿ ಸೇರುತ್ತಾರೆ.
ಪ್ರಾಣಿ ಭಲಿ ನಿಶೇಷದ;
ಜಾತ್ರೆಯ ಸುತ್ತ ಮುತ್ತ ಹಾಗೂ ಜಾತ್ರೆಯಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳನ್ನು ಭಲಿ ಮಾಡುವುದಾಗಲಿ ಮಧ್ಯಪಾನ ಮಾಡುವುದಾಗಲಿ ನಿಶೇಷದ ಮಾಡಲಾಗಿದೆ ಎಲ್ಲಾ ಮಾರ್ಗಗಲ್ಲೂ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ರೇಹಾನ್ ಪಾಷ,ಡಿವೈಎಸ್ಪಿ ರಾಜಣ್ಣ . ತಿಳಿಸಿದ್ದಾರೆ
ಸಿ.ಸಿ. ಕ್ಯಾಮರ ಕಣ್ಣುಗಾವಲು.
ಭದ್ರತೆ ದೃಷ್ಠಿಯಿಂದ ಸಮಗ್ರ ಜಾತ್ರೆ ವ್ಯವಸ್ಥೆಯನ್ನು ಸಿ.ಸಿ.ಕ್ಯಾಮರಗಳ ಕಣ್ಗಾವಲಿಗೆ ವಹಿಸಲಾಗಿದೆ. ಸುಮಾರು 60 ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಗಳನ್ನು ಅಳವಡಿಸಲಾಗಿದೆ. ಭದ್ರತೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ನಿರ್ವಹಿಸಲಿದೆ. ಜಾತ್ರಾ ಸಂದರ್ಭದಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಸವೋಚ್ಛ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಪ್ರಾಂಗಣ, ದೇವಸ್ಥಾನ ಸಂಬಂಧಿಸಿ ಸ್ಥಳದಲ್ಲಿ ಪ್ರಾಣಿ ಬಲಿಯನ್ನು ಕಟ್ಟುನಿಟ್ಟಾಗಿ ನಿಷೇದಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಾತ್ರಾ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಜಾರಿ ಇರುತ್ತದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಾತ್ರೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾಲನೆ ಮಾಡಲಾಗುತ್ತಿದೆ, ಜಾತ್ರೆಗೆ ಬರುವ ಭಕ್ತರಿಗೆ ಕುಡಿಯುವ ನೀರು ಅಗತ್ಯ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ದೇವಸ್ಥಾನ ಇ ಒ ಹೆಚ್.ಗಂಗಾಧರಪ್ಪ ಹೇಳಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page