ಚಳ್ಳಕೆರೆ ಜನಧ್ವನಿ ಮೇ21. ಸಾರಕಾರಿ ಕಚೇರಿ .ಸರಕಾರಿ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಿಷೇಧಿಸುವ ಮೂಲಕ 2021ರಂದು ಬಿಜೆಪಿ ಸರಕಾರದ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿದ್ದರು.
ನೂತನವಾರಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಸಿದ್ದರಾಮಯ್ಯ ನಾಳೆಯಿಂದಲೇ ನನಗೆ ಭೇಟಿಯಾಗಲು ಬರುವವರು ಹಾರ ತುರಾಯಿ .ಶ್ಯಾಲ್ ನೆನಪಿನಬಕಾಣಿಕೆ ಬದಲು ಪುಸ್ತಕ ನೀಡುವಂತೆ ತಿಳಿಸಿದ್ದಾರೆ.ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
0 Comments